Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:3 - ಕನ್ನಡ ಸಮಕಾಲಿಕ ಅನುವಾದ

3 ತಿಮೊಥೆಯನನ್ನು ಪೌಲನು ತನ್ನೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಬೇಕೆಂದು ಅಪೇಕ್ಷಿಸಿ, ಆ ಪ್ರದೇಶದಲ್ಲಿ ನೆಲೆಸಿದ ಯೆಹೂದ್ಯರ ನಿಮಿತ್ತ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು. ಏಕೆಂದರೆ ಅವನ ತಂದೆ ಗ್ರೀಕನು ಎಂಬುದನ್ನು ಅವರೆಲ್ಲರೂ ತಿಳಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪೌಲನು ತಿಮೊಥೇಯನನ್ನು ತನ್ನೊಡನೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆ ಪ್ರದೇಶಗಳಲ್ಲಿದ್ದ ಯೆಹೂದ್ಯರಿಗೆ ತಿಮೊಥೇಯನ ತಂದೆ ಗ್ರೀಕನೆಂದು ತಿಳಿದಿದ್ದುದರಿಂದ ಅವನಿಗೆ ಸುನ್ನತಿಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿವಿುತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪೌಲನು ತಿಮೊಥೆಯನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆದರೆ ಆ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲಾ ಜನರಿಗೂ ತಿಮೊಥೆಯನ ತಂದೆ ಗ್ರೀಕನೆಂಬುದು ಗೊತ್ತಿತ್ತು. ಆದ್ದರಿಂದ ಪೌಲನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಪಾವ್ಲುನ್ ತಿಮೊಥಿಕ್ ಅಪ್ನಾಚ್ಯಾ ವಾಂಗ್ಡಾ ಘೆವ್ನ್ ಜಾವ್ಚೆ ಮನುನ್ ಆಸ್ಯಾ ಕರ್‍ಲ್ಯಾನ್, ಖರೆ ತ್ಯಾ ಜುದೆವಾಂಚ್ಯಾ ಲೊಕಾಕ್ನಿ ತೊ ಗ್ರಿಕಾಂಚೊ ಮನ್ತಲೆ ಗೊತ್ತ್ ಹೊತ್ತೆ ತಸೆ ಹೊವ್ನ್, ತಿಮೊಥಿಕ್ ಸುನ್ನತ್ ಕರಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:3
10 ತಿಳಿವುಗಳ ಹೋಲಿಕೆ  

ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಅವನನ್ನು ಬಲಾತ್ಕಾರ ಮಾಡಲಿಲ್ಲ.


ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ನಿಯಮಕ್ಕೆ ಅಧೀನನಲ್ಲದಿದ್ದರೂ ನಿಯಮಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವಂತೆ ಅವರಿಗಾಗಿ ನಿಯಮಕ್ಕೆ ಅಧೀನನಂತಾದೆನು.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ಏಕೆಂದರೆ, ಯೆಹೂದ್ಯರಿಗೆ ಅಪೊಸ್ತಲನಾಗಿರುವ ಪೇತ್ರನಲ್ಲಿ ಕಾರ್ಯಮಾಡಿದ ದೇವರೇ, ಯೆಹೂದ್ಯರಲ್ಲದವರಿಗೆ ನಾನು ಅಪೊಸ್ತಲನಾಗಿರಲು ನನ್ನಲ್ಲಿ ಕಾರ್ಯಮಾಡಿದರು.


ಸುನ್ನತಿಯಿದ್ದರೂ ಪ್ರಯೋಜನವಿಲ್ಲ, ಸುನ್ನತಿಯಿಲ್ಲದಿದ್ದರೂ ಪ್ರಯೋಜನವಿಲ್ಲ. ದೇವರ ಆಜ್ಞೆಗಳನ್ನು ಕೈಗೊಳ್ಳುವುದೇ ಪ್ರಯೋಜನಕರ.


ಆದರೆ ಪೌಲನು ಸೀಲನನ್ನು ಆರಿಸಿಕೊಂಡು ಹೋದನು. ವಿಶ್ವಾಸಿಗಳಿಂದ ಅವನನ್ನು ಕರ್ತ ಯೇಸುವಿನ ಕೃಪೆಗೆ ಒಪ್ಪಿಸಿ, ಕಳುಹಿಸಿಕೊಟ್ಟುರು.


ಬಾರ್ನಬನು ಮಾರ್ಕ ಎಂಬ ಹೆಸರಿನ ಯೋಹಾನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬಯಸಿದನು,


ಅದರ ಬದಲಾಗಿ ನಾವು ಅವರಿಗೆ, ದೇವರಲ್ಲದವುಗಳಿಂದ ಮಲಿನವಾದ ಆಹಾರದಿಂದಲೂ ಅನೈತಿಕತೆಯಿಂದಲೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ರಕ್ತದಿಂದಲೂ ದೂರವಿರಬೇಕು.


ಆದರೆ ತಿಮೊಥೆಯನ ಗುಣಸ್ವಭಾವವನ್ನು ನೀವು ಬಲ್ಲಿರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಶ್ರಮಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು