Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:4 - ಕನ್ನಡ ಸಮಕಾಲಿಕ ಅನುವಾದ

4 ಅವರು ಪಟ್ಟಣಗಳಲ್ಲಿ ಪ್ರಯಾಣಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರು, ಹಿರಿಯರು ತೆಗೆದುಕೊಂಡ ತೀರ್ಮಾನಗಳನ್ನು ಜನರು ಅನುಸರಿಸಿ ನಡೆಯುವಂತೆ ಅವರಿಗೆ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರೂ, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಊರಿಂದ ಊರಿಗೆ ಪ್ರಯಾಣ ಮಾಡುತ್ತಾ, ಜೆರುಸಲೇಮಿನಲ್ಲಿದ್ದ ಪ್ರೇಷಿತರೂ ಸಭಾಪ್ರಮುಖರೂ ನಿರ್ಧರಿಸಿದ ನಿಯಮಗಳನ್ನು ಭಕ್ತರಿಗೆ ಬೋಧಿಸುತ್ತಾ, ಅವುಗಳನ್ನು ಪಾಲಿಸುವಂತೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇವಿುನಲ್ಲಿದ್ದ ಅಪೊಸ್ತಲರೂ ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ಒಪ್ಪಿಸಿ ಇವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬಳಿಕ ಪೌಲನು ಮತ್ತು ಅವನ ಸಂಗಡಿಗರು ಬೇರೆ ಪಟ್ಟಣಗಳ ಮೂಲಕ ಪ್ರಯಾಣ ಮಾಡಿದರು. ಜೆರುಸಲೇಮಿನಲ್ಲಿರುವ ಅಪೊಸ್ತಲರ ಮತ್ತು ಹಿರಿಯರ ನಿಯಮಗಳನ್ನೂ ತೀಮಾರ್ನಗಳನ್ನೂ ಅವರು ವಿಶ್ವಾಸಿಗಳಿಗೆ ಕೊಟ್ಟು ಅವುಗಳಿಗೆ ವಿಧೇಯರಾಗಬೇಕೆಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆಚ್ಯಾ ಮಾನಾ ಪಾವ್ಲು ಅನಿ ತೆಚಿ ವಾಂಗ್ಡಿಯಾ ದುಸ್ರ್ಯಾ ಶಾರಾಂತ್ನಾ ಜಾವ್ಕ್ ಲಾಗಲ್ಲೆ ಜೆರುಜಲೆಮಾತ್ಲ್ಯಾ ವಿಸ್ವಾಸಿ ಲೊಕಾಕ್ನಿ ಅಪೊಸ್ತಲಾಂಚಿ ಅನಿ ಜಾಂನ್ತ್ಯಾಂಚಿ ನೆಮಾ ಅನಿ ತಿರ್ಮಾನಾ ಸಾಂಗುನ್ ತೆಂಕಾ ಮಾನುನ್ ಘೆವ್ನ್ ರಾವ್ಚೆ ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:4
5 ತಿಳಿವುಗಳ ಹೋಲಿಕೆ  

ಇದರಿಂದ ಪೌಲ, ಬಾರ್ನಬರು ಅವರೊಂದಿಗೆ ಭಿನ್ನಾಭಿಪ್ರಾಯವುಳ್ಳವರಾಗಿ ತೀವ್ರ ವಿವಾದವುಂಟಾಯಿತು. ಈ ಪ್ರಶ್ನೆಯ ವಿಷಯದಲ್ಲಿ ಅಪೊಸ್ತಲರನ್ನೂ ಹಿರಿಯರನ್ನೂ ಭೇಟಿಯಾಗಲು, ತಮ್ಮಲ್ಲಿ ಬೇರೆ ಕೆಲವರು ಪೌಲ, ಬಾರ್ನಬರೊಂದಿಗೆ ಯೆರೂಸಲೇಮಿಗೆ ಹೋಗಬೇಕೆಂದು ನಿರ್ಣಯಿಸಲಾಯಿತು.


ಅಪೊಸ್ತಲರು ಮತ್ತು ಹಿರಿಯರು ಈ ವಿಷಯದ ಕುರಿತಾಗಿ ವಿಚಾರಿಸಲು ಸಭೆ ಸೇರಿದರು.


ಇದಕ್ಕನುಗುಣವಾಗಿ ಬಾರ್ನಬ ಮತ್ತು ಸೌಲರ ಮುಖಾಂತರ ಹಿರಿಯರಿಗೆ ತಮ್ಮ ದೇಣಿಗೆಗಳನ್ನು ಕಳುಹಿಸಿದರು.


ಅವರು ಯೆರೂಸಲೇಮನ್ನು ತಲುಪಿದಾಗ, ಸಭೆಯವರು, ಅಪೊಸ್ತಲರು ಹಾಗೂ ಹಿರಿಯರು ಅವರನ್ನು ಸ್ವಾಗತಿಸಿದರು. ದೇವರು ತಮ್ಮ ಮುಖಾಂತರವಾಗಿ ಮಾಡಿದ್ದನ್ನು ಅವರು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು