Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:1 - ಕನ್ನಡ ಸಮಕಾಲಿಕ ಅನುವಾದ

1 ಅವರು ಅಂಫಿಪೊಲಿ ಮತ್ತು ಅಪೊಲೋನ್ಯ ಮಾರ್ಗವಾಗಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪೌಲ ಮತ್ತು ಸೀಲ ಆಂಫಿಪೊಲಿ ಹಾಗೂ ಅಪೊಲೋನಿಯ ಮಾರ್ಗವಾಗಿ ಪ್ರಯಾಣಮಾಡಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಪ್ರಾರ್ಥನಾಮಂದಿರ ಒಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮುಂದೆ ಅವರು ಮಾರ್ಗಹಿಡಿದು ಅಂಫಿಪೊಲಿ ಅಪೊಲೋನ್ಯ ಎಂಬ ಊರುಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರದೊಂದು ಸಭಾಮಂದಿರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪೌಲ ಸೀಲರು ಆಂಫಿಪೊಲಿ ಮತ್ತು ಅಪೊಲೋನಿಯ ಮಾರ್ಗವಾಗಿ ಪ್ರಯಾಣ ಮಾಡಿ ಥೆಸಲೋನಿಕ ಪಟ್ಟಣಕ್ಕೆ ಬಂದರು. ಆ ಪಟ್ಟಣದಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾವ್ಲು ಅನಿ ಸಿಲಾಸ್ ಅಂಫಿಪೊಲಿ ಅನಿ ಅಪೊಲೊನಿಯ್ ಮನ್ತಲ್ಯಾ ವಾಟೆನಿ ಫಿರುಂಗೆತ್ ಥೆಸಲೊನಿಕಾ ಮನ್ತಲ್ಯಾ ಶಾರಾಕ್ ಪಾವ್ಲೆ, ತ್ಯಾ ಶಾರಾತ್ ಜುದೆವಾಂಚ್ಯಾ ಲೊಕಾಂಚಿ ಎಕ್ ಸಿನಾಗೊ ಹೊತ್ತೊ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:1
13 ತಿಳಿವುಗಳ ಹೋಲಿಕೆ  

ನಾನು ಥೆಸಲೋನಿಕದಲ್ಲಿದ್ದಾಗಲೂ ನನಗೆ ಕೊರತೆಯಾದಾಗ ನೀವು ಒಂದೆರಡು ಬಾರಿ ಸಹಾಯ ಕಳುಹಿಸಿದಿರಿ.


ತಂದೆ ದೇವರಲ್ಲಿಯೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ, ಪೌಲ, ಸಿಲ್ವಾನ ಹಾಗೂ ತಿಮೊಥೆ ಇವರು ಬರೆಯುವ ಪತ್ರ: ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನಮ್ಮ ತಂದೆ ದೇವರಲ್ಲಿಯೂ, ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ತಿಮೊಥೆಯರು ಬರೆಯುವುದು:


ಬೆರೋಯದ ಪುರ್ರನ ಮಗ ಸೋಪತ್ರನು, ಥೆಸಲೋನಿಕದ ಅರಿಸ್ತಾರ್ಕ ಮತ್ತು ಸೆಕುಂದ, ದೆರ್ಬೆಯ ಗಾಯ, ತಿಮೊಥೆ ಅಲ್ಲದೆ ಏಷ್ಯಾ ಪ್ರಾಂತದ ತುಖಿಕ ಹಾಗೂ ತ್ರೊಫಿಮ ಅವನೊಂದಿಗೆ ಹೋದರು.


ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು.


ಆಗ ಅದ್ರಮಿತ್ತಿಯದಿಂದ ಬಂದು ಏಷ್ಯಾ ಪ್ರಾಂತದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ನೌಕೆಯನ್ನೇರಿ ನಾವು ಪ್ರಯಾಣ ಪ್ರಾರಂಭಿಸಿದೆವು. ಥೆಸಲೋನಿಕದಿಂದ ಬಂದ ಮಕೆದೋನ್ಯದ ಅರಿಸ್ತಾರ್ಕನು ನಮ್ಮೊಂದಿಗಿದ್ದನು.


ಆದರೆ ಪೌಲನು ದೇವರ ವಾಕ್ಯವನ್ನು ಬೆರೋಯದಲ್ಲಿ ಬೋಧಿಸುತ್ತಿದ್ದಾನೆಂಬುದು ಥೆಸಲೋನಿಕದಲ್ಲಿದ್ದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು, ಜನಸಮೂಹವನ್ನು ಪ್ರಚೋದಿಸಿ ಗಲಭೆ ಎಬ್ಬಿಸಿದರು.


ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.


ಪ್ರಾರ್ಥನೆಯ ಸ್ಥಳ ಸಿಕ್ಕಬಹುದೆಂದು ಭಾವಿಸಿ ಸಬ್ಬತ್ ದಿನದಂದು ಪಟ್ಟಣದ ದ್ವಾರದ ಹೊರಗಿದ್ದ ನದಿತೀರಕ್ಕೆ ಹೋದೆವು. ಅಲ್ಲಿ ಕುಳಿತುಕೊಂಡು ಕೂಡಿಬಂದಿದ್ದ ಮಹಿಳೆಯರೊಂದಿಗೆ ಮಾತನಾಡಲು ಪ್ರಾರಂಭಿಸಿದೆವು.


ಏಕೆಂದರೆ ಆರಂಭ ಕಾಲದಿಂದಲೂ ಪ್ರತಿಯೊಂದು ಪಟ್ಟಣದಲ್ಲಿ ಮೋಶೆಯ ಗ್ರಂಥವನ್ನು ಬೋಧಿಸಲಾಗುತ್ತದೆ ಹಾಗೂ ಪ್ರತಿ ಸಬ್ಬತ್ ದಿನ ಸಭಾಮಂದಿರಗಳಲ್ಲಿ ಓದಲಾಗುತ್ತದೆ,” ಎಂದು ಹೇಳಿದನು.


ಇಕೋನ್ಯದಲ್ಲಿಯೂ ಪೌಲ ಮತ್ತು ಬಾರ್ನಬರು ವಾಡಿಕೆಯಂತೆ ಯೆಹೂದ್ಯರ ಸಭಾಮಂದಿರಕ್ಕೆ ಹೋದರು. ಅವರು ಅಲ್ಲಿ ಪರಿಣಾಮಕಾರಿಯಾಗಿ ಮಾತನಾಡಿದ್ದರಿಂದ ಬಹು ಸಂಖ್ಯೆಯಲ್ಲಿ ಯೆಹೂದ್ಯರೂ ಗ್ರೀಕರೂ ವಿಶ್ವಾಸವನ್ನಿಟ್ಟರು.


ರಾತ್ರಿಯಾದ ಕೂಡಲೇ, ಸಹೋದರರು ಪೌಲ, ಸೀಲರನ್ನು ಬೆರೋಯಕ್ಕೆ ಕಳುಹಿಸಿದರು. ಅಲ್ಲಿಗೆ ಅವರು ತಲುಪಿದಾಗ ಅಲ್ಲಿಯೂ ಯೆಹೂದ್ಯರ ಸಭಾಮಂದಿರಕ್ಕೆ ಹೋದರು.


ಫಿಲಿಪ್ಪಿ ಪಟ್ಟಣದಲ್ಲಿ ಮುಂಚೆ ನಮಗೆ ಹಿಂಸೆ ಮತ್ತು ಅವಮಾನವು ಸಂಭವಿಸಿದ್ದನ್ನು ನೀವು ಬಲ್ಲಿರಿ. ಹಾಗಿದ್ದರೂ ನಾವು ನಮ್ಮ ದೇವರ ಸಹಾಯದಿಂದ ಧೈರ್ಯಗೊಂಡು ಬಹು ವಿರೋಧದ ನಡುವೆ ನಿಮಗೆ ಸುವಾರ್ತೆಯನ್ನು ತಿಳಿಸಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು