ಅಪೊಸ್ತಲರ ಕೃತ್ಯಗಳು 17:11 - ಕನ್ನಡ ಸಮಕಾಲಿಕ ಅನುವಾದ11 ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಸಭೆಯವರು ಥೆಸಲೋನಿಕದವರಿಗಿಂತ ಸದ್ಗುಣವುಳ್ಳವರಾಗಿದ್ದು ದೇವರ ವಾಕ್ಯವನ್ನು ಶುದ್ಧಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಏನೋ ಎಂಬ ವಿಷಯದಲ್ಲಿ ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಹಿ ಜುದೆವಾಂಚಿ ಲೊಕಾ ಥೆಸಲೊನಿಕಾತ್ಲ್ಯಾ ಜುದೆವಾಂಚ್ಯಾಕ್ಕಿಂತಾಬಿ ಬರಿ ಹೊವ್ನ್ ಹೊತ್ತಿ, ತೆನಿ ಪಾವ್ಲುನ್ ಅನಿ ಸಿಲಾಸಾನ್ ಸಾಂಗ್ತಲಿ ಸಂಗ್ತಿಯಾ ಉಮ್ಮೆದಿನ್ ಆಯಿಕ್ಲ್ಯಾನಿ, ಅನಿ ಹಿ ಸಂಗ್ತಿಯಾ ಖರೆಚ್ ಕಾಯ್ ಮನುನ್ ಕಳ್ವುನ್ ಘೆವ್ಕ್ ಸಾಟ್ನಿ ಸದ್ದಿಚ್ ಪವಿತ್ರ್ ಪುಸ್ತಕ್ ವಾಚ್ಲ್ಯಾನಿ. ಅಧ್ಯಾಯವನ್ನು ನೋಡಿ |