Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:18 - ಕನ್ನಡ ಸಮಕಾಲಿಕ ಅನುವಾದ

18 ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕೆಲವು ಎಪಿಕೂರಿಯ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರೂ ಕೂಡ ಅವನೊಡನೆ ವಾದಿಸಿದರು. ಕೆಲವರು “ಈ ಬಾಯಿಬಡುಕ ಹೇಳುವುದಾದರೂ ಏನು?” ಎಂದರು. ಪೌಲನು ಯೇಸುಸ್ವಾಮಿಯ ವಿಷಯವಾಗಿಯೂ ಪುನರುತ್ಥಾನದ ವಿಷಯವಾಗಿಯೂ ಬೋಧಿಸುತ್ತಿದ್ದುದರಿಂದ ಮತ್ತೆ ಕೆಲವರು ‘ಇವನು ವಿದೇಶೀಯ ದೇವರುಗಳ ಬಗ್ಗೆ ಮಾತನಾಡುವಂತೆ ಕಾಣುತ್ತದೆ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದಲ್ಲದೆ ಎಪಿಕೂರಿಯರು ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು - ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ? ಅಂದರು. ಅವನು ಯೇಸುವಿನ ವಿಷಯವಾಗಿಯೂ ಸತ್ತವರು ಎದ್ದುಬರುವರೆಂಬುವ ವಿಷಯವಾಗಿಯೂ ಸಾರುತ್ತಿದ್ದದರಿಂದ - ಇವನು ಅನ್ಯದೇಶದ ದೈವಗಳನ್ನು ಪ್ರಸಿದ್ಧಿಪಡಿಸುವವನಾಗಿ ತೋರುತ್ತಾನೆಂದು ಬೇರೆ ಕೆಲವರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಎಪಿ ಕೊರಿಯಾ ಅನಿ ಸ್ಥೊಯಿಕ್ ತತ್ವ್ ಜ್ಞಾನಿತ್ನಿ ಥೊಡ್ಯಾ ಲೊಕಾನಿ ಪಾವ್ಲು ವಾಂಗ್ಡಾ ವಾದ್ ಕರುನ್, ಹ್ಯೊ ಮಾನುಸ್ ದುಶ್ರ್ಯಾ ದೆಶಾಚ್ಯಾ ದೆವಾಚ್ಯಾ ವಿಶಯಾತ್ ಬೊಲುಲ್ಲಾ ಮಟ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್, ತೊ ಜೆಜುಚ್ಯಾ ಪರ್ತುನ್ ಝಿತ್ತೊ ಹೊತಲ್ಯಾ ವಿಶಯಾತ್ ಬೊಲುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:18
16 ತಿಳಿವುಗಳ ಹೋಲಿಕೆ  

ತತ್ವಜ್ಞಾನವೂ ನಿರರ್ಥಕವೂ ವಂಚನೆಯೂ ಆಗಿರುವ ಮನುಷ್ಯರ ಸಂಪ್ರದಾಯದಿಂದ ನಿಮ್ಮಲ್ಲಿ ಯಾರಾದರೂ ಬಂದು ನಿಮ್ಮನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಅಂಥವರು ಕ್ರಿಸ್ತ ಯೇಸುವನ್ನು ಅನುಸರಿಸದೆ, ಪ್ರಾಪಂಚಿಕ ಬಾಲಬೋಧನೆಗಳನ್ನೂ ಅನುಸರಿಸುವವರಾಗಿದ್ದಾರೆ.


ಯೇಸುವಿನಲ್ಲಿ ಸತ್ತವರಿಗೆ ಪುನರುತ್ಥಾನ ಉಂಟು ಎಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿದ್ದರಿಂದ ಅವರು ಬಹಳ ಬೇಸರಗೊಂಡರು.


ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ, ನಿಯಮ ಬೋಧಕರೂ ಫರಿಸಾಯರೂ ಕೋಪಾವೇಶವುಳ್ಳವರಾಗಿ, ಯೇಸು ಇನ್ನೂ ಹೆಚ್ಚು ವಿಷಯಗಳನ್ನು ಮಾತನಾಡುವಂತೆ ಅವರನ್ನು ಕೆಣಕಿದರು,


ನಾವು ಕ್ರಿಸ್ತ ಯೇಸುವಿನ ನಿಮಿತ್ತ ಮೂರ್ಖರಾಗಿದ್ದೇವೆ! ನೀವೋ ಕ್ರಿಸ್ತ ಯೇಸುವಿನಲ್ಲಿ ಬುದ್ಧಿವಂತರು, ನಾವೋ ಬಲಹೀನರು. ನೀವು ಬಲಿಷ್ಠರು, ನೀವು ಮಾನವಂತರು, ನಾವೋ ಮಾನಹೀನರು!


ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರೂ ಇಹಲೋಕ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸಿಕೊಂಡರೆ, ಅಂಥವನು ಜ್ಞಾನಿಯಾಗುವಂತೆ ಮೂರ್ಖನಾಗಲಿ.


ತಾವು ಜ್ಞಾನಿಗಳೆಂದು ಹೇಳಿಕೊಂಡರೂ ಮೂಢರಾಗಿದ್ದಾರೆ.


ಕ್ರಿಸ್ತ ಯೇಸು ಶ್ರಮೆಹೊಂದಿ, ಸತ್ತವರೊಳಗಿಂದ ಜೀವಂತರಾಗಿ ಮೊದಲು ಎದ್ದು ತಮ್ಮ ಜನರಿಗೂ ಯೆಹೂದ್ಯರಲ್ಲದವರಿಗೂ ಬೆಳಕಿನ ಸಂದೇಶವನ್ನು ತರುವರು ಎಂದು ಪ್ರವಾದಿಗಳು ಮತ್ತು ಮೋಶೆಯು ಹೇಳಿದ್ದಾರೆ,” ಎಂದನು.


ಯೇಸು ತಮ್ಮ ಶಿಷ್ಯರ ಬಳಿಗೆ ಬಂದಾಗ, ಅವರ ಸುತ್ತಲು ದೊಡ್ಡ ಸಮೂಹವನ್ನೂ ನಿಯಮ ಬೋಧಕರು ಅವರೊಂದಿಗೆ ತರ್ಕಿಸುತ್ತಿರುವುದನ್ನೂ ಕಂಡರು.


ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ಕಾಣುತ್ತಿದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ.


ಬುದ್ಧಿಹೀನರ ಸಂಗಡ ಮಾತಾಡಬೇಡ; ಏಕೆಂದರೆ ನಿನ್ನ ಜ್ಞಾನದ ಮಾತುಗಳನ್ನು ಅವರು ತಿರಸ್ಕರಿಸುವನು.


ಆದರೆ, “ಬಿಡುಗಡೆ ಹೊಂದಿದವರು” ಎಂಬ ಯೆಹೂದ್ಯ ಸಭಾಮಂದಿರಕ್ಕೆ ಸೇರಿದವರಿಂದ ವಿರೋಧ ಉಂಟಾಯಿತು. ಅವರು ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಮತ್ತು ಏಷ್ಯಾ ಪ್ರಾಂತಗಳಿಂದ ಬಂದ ಯೆಹೂದ್ಯರಾಗಿದ್ದರು. ಅವರು ಸ್ತೆಫನನೊಂದಿಗೆ ತರ್ಕಿಸುವುದಕ್ಕೆ ಪ್ರಾರಂಭಿಸಿದರು.


ದಿನದಿನವೂ ಅವರು ದೇವಾಲಯಗಳಲ್ಲಿ ಮತ್ತು ಮನೆಯಿಂದ ಮನೆಗೆ ಹೋಗಿ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದನ್ನೂ ಬೋಧಿಸುವುದನ್ನೂ ನಿಲ್ಲಿಸಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು