Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:2 - ಕನ್ನಡ ಸಮಕಾಲಿಕ ಅನುವಾದ

2 ಪೌಲನು ತನ್ನ ವಾಡಿಕೆಯಂತೆ ಮೂರು ಸಬ್ಬತ್ ದಿನಗಳಂದು ಅವರ ಬಳಿ ಹೋಗಿ, ಅವರಲ್ಲಿ ಪವಿತ್ರ ವೇದಗಳ ಬಗ್ಗೆ ವಾದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪೌಲನು ವಾಡಿಕೆಯ ಪ್ರಕಾರ ಪ್ರಾರ್ಥನಾಮಂದಿರಕ್ಕೆ ಹೋದನು. ಮೂರು ಸಬ್ಬತ್‍ದಿನ ಪವಿತ್ರಗ್ರಂಥವನ್ನು ಉಲ್ಲೇಖಿಸಿ, ಅಲ್ಲಿದ್ದವರೊಡನೆ ಚರ್ಚೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್‍ದಿನಗಳಲ್ಲಿ ಶಾಸ್ತ್ರಾಧಾರದಿಂದ ಅವರ ಸಂಗಡ ವಾದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪೌಲನು ಎಂದಿನಂತೆ ಯೆಹೂದ್ಯರನ್ನು ಭೇಟಿಯಾಗಲು ಈ ಸಭಾಮಂದಿರದೊಳಗೆ ಹೋದನು. ಅವನು ಮೂರು ವಾರಗಳವರೆಗೆ ಪ್ರತಿ ಸಬ್ಬತ್‌ದಿನದಂದು ಯೆಹೂದ್ಯರೊಂದಿಗೆ ಪವಿತ್ರ ಗ್ರಂಥದ ಆಧಾರದೊಡನೆ ಚರ್ಚಿಸಿ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಪಾವ್ಲು ಸದ್ದಿ ಗೆಲ್ಲ್ಯಾ ಸಾರ್ಕೆಚ್ ಜುದೆವಾಕ್ನಿ ಭೆಟುಕ್ ಮನುನ್ ತ್ಯಾ ದೆವಾಚ್ಯಾ ಗುಡಿಕ್ ಗೆಲೊ, ತೆನಿ ತಿನ್ ವಾರಾಂಚ್ಯಾ ಪಾತರ್ ಹರ್ ಎಕ್ ಸಬ್ಬತ್ತಾಚ್ಯಾ ದಿಸಾಬಿ ತೆಂಚ್ಯಾ ವಾಂಗ್ಡಾ ಪವಿತ್ರ್ ಪುಸ್ತಕಾಚ್ಯಾ ಆಧಾರಾನ್ ಚರ್ಚಾ ಕರುನ್ ತೆಂಕಾ ಕಳ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:2
18 ತಿಳಿವುಗಳ ಹೋಲಿಕೆ  

ತಡಮಾಡದೆ, ಯೇಸುವೇ “ದೇವಪುತ್ರ” ಎಂದು ಸಭಾಮಂದಿರಗಳಲ್ಲಿ ಸಾರಲು ಪ್ರಾರಂಭಿಸಿದನು.


ಪ್ರತಿ ಸಬ್ಬತ್ ದಿನ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರನ್ನೂ ಗ್ರೀಕರನ್ನೂ ವಿಶ್ವಾಸಿಗಳನ್ನಾಗಿಸಲು ಪ್ರೇರೇಪಿಸುತ್ತಿದ್ದನು.


ಆದ್ದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ದೇವಭಕ್ತಿಯುಳ್ಳ ಗ್ರೀಕರೊಂದಿಗೂ ಅಲ್ಲದೆ ಬಹಿರಂಗ ಸಂತೆಪೇಟೆ ಸ್ಥಳದಲ್ಲಿ ದಿನದಿನವೂ ಬರುತ್ತಿದ್ದ ಜನರೊಂದಿಗೂ ಚರ್ಚೆ ಮಾಡುತ್ತಿದ್ದನು.


ರಾತ್ರಿಯಾದ ಕೂಡಲೇ, ಸಹೋದರರು ಪೌಲ, ಸೀಲರನ್ನು ಬೆರೋಯಕ್ಕೆ ಕಳುಹಿಸಿದರು. ಅಲ್ಲಿಗೆ ಅವರು ತಲುಪಿದಾಗ ಅಲ್ಲಿಯೂ ಯೆಹೂದ್ಯರ ಸಭಾಮಂದಿರಕ್ಕೆ ಹೋದರು.


ಇಕೋನ್ಯದಲ್ಲಿಯೂ ಪೌಲ ಮತ್ತು ಬಾರ್ನಬರು ವಾಡಿಕೆಯಂತೆ ಯೆಹೂದ್ಯರ ಸಭಾಮಂದಿರಕ್ಕೆ ಹೋದರು. ಅವರು ಅಲ್ಲಿ ಪರಿಣಾಮಕಾರಿಯಾಗಿ ಮಾತನಾಡಿದ್ದರಿಂದ ಬಹು ಸಂಖ್ಯೆಯಲ್ಲಿ ಯೆಹೂದ್ಯರೂ ಗ್ರೀಕರೂ ವಿಶ್ವಾಸವನ್ನಿಟ್ಟರು.


ಸಲಮೀಸಿಗೆ ಬಂದು, ಅಲ್ಲಿಯ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೋಹಾನನು ಸಹ ಅವರೊಂದಿಗಿದ್ದು ಅವರಿಗೆ ಸಹಾಯಕನಾಗಿದ್ದನು.


ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.


ಪವಿತ್ರ ವೇದದ ಆ ಭಾಗದಿಂದಲೇ ಪ್ರಾರಂಭಿಸಿ ಫಿಲಿಪ್ಪನು ಅವನಿಗೆ ಯೇಸುವಿನ ಕುರಿತಾದ ಶುಭವಾರ್ತೆಯನ್ನು ತಿಳಿಸಿದನು.


ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ.


ಯೇಸು ತಾವು ಬೆಳೆದ ನಜರೇತಿಗೆ ಬಂದು, ತಮ್ಮ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಕ್ಕೆ ಹೋಗಿ ಪವಿತ್ರ ವೇದದ ಸುರುಳಿಯನ್ನು ಓದುವುದಕ್ಕಾಗಿ ಎದ್ದು ನಿಂತರು.


“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.


ನೀತಿ, ದಮೆ, ಬರಲಿಕ್ಕಿರುವ ನ್ಯಾಯವಿಚಾರಣೆಯ ಬಗ್ಗೆ ಪೌಲನು ವಿವರಿಸಿದಾಗ, ಫೇಲಿಕ್ಸ್ ಹೆದರಿಕೊಂಡವನಾಗಿ, “ಈಗ ಇಷ್ಟೇ ಸಾಕು! ಸದ್ಯಕ್ಕೆ ನೀನು ಹೋಗಬಹುದು. ಅನಂತರ ನಾನು ಸಮಯ ಸಿಕ್ಕಿದಾಗ ನಿನ್ನನ್ನು ಪುನಃ ಕರೆಯಿಸುತ್ತೇನೆ,” ಎಂದನು.


ಪೌಲನು ಸಭಾಮಂದಿರದೊಳಗೆ ಪ್ರವೇಶಿಸಿದನು. ಅಲ್ಲಿ ಮೂರು ತಿಂಗಳುಗಳ ಕಾಲ, ಧೈರ್ಯವಾಗಿ ಬೋಧನೆ ಮಾಡಿದನು. ದೇವರ ರಾಜ್ಯದ ಬಗ್ಗೆ ಅವರೊಡನೆ ಮನವೊಲಿಸುವಂತೆ ಚರ್ಚಿಸಿದನು.


ಉಳಿದವರು ಪೆರ್ಗೆದಿಂದ ಪಿಸಿದ್ಯದ ಅಂತಿಯೋಕ್ಯಕ್ಕೆ ಹೋದರು. ಸಬ್ಬತ್ ದಿನ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.


ಆದ್ದರಿಂದ ಈಗ ನಿಲ್ಲಿರಿ. ಯೆಹೋವ ದೇವರು ನಿಮಗೂ, ನಿಮ್ಮ ಪಿತೃಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಯೆಹೋವ ದೇವರ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.


ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದರು.


ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು