Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:21 - ಕನ್ನಡ ಸಮಕಾಲಿಕ ಅನುವಾದ

21 ಅಲ್ಲಿ ನೆಲೆಸಿದ್ದ ಅಥೇನೆಯ ನಿವಾಸಿಗಳೂ ವಿದೇಶಿಯರೂ ಹೊಸ ಹೊಸ ವಿಷಯಗಳನ್ನು ಹೇಳುವುದಕ್ಕೂ ಕೇಳುವುದಕ್ಕೂ ಹೊರತು ಇತರ ವಿಷಯಗಳಲ್ಲಿ ಸಮಯ ಕಳೆಯುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ, ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಥೆನ್ಸಿನ ನಿವಾಸಿಗಳು ಮತ್ತು ಅಲ್ಲಿ ವಾಸಿಸುತ್ತಿದ್ದ ವಿದೇಶೀಯರು ಅತ್ಯಾಧುನಿಕ ವಿದ್ಯಮಾನಗಳನ್ನು ಕುರಿತು ಮಾತನಾಡುವುದರಲ್ಲೂ ಕೇಳಿತಿಳಿಯುವುದರಲ್ಲೂ ಸಮಯ ಕಳೆಯುತ್ತಿದ್ದರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 (ಅಥೆನ್ಸಿನ ಎಲ್ಲಾ ಜನರು ಮತ್ತು ಅಲ್ಲಿ ವಾಸವಾಗಿದ್ದ ಬೇರೆ ದೇಶಗಳವರು ಹೊಸ ಆಲೋಚನೆಗಳ ಬಗ್ಗೆ ಮಾತಾಡುವುದಕ್ಕೂ ಕೇಳುವುದಕ್ಕೂ ಬಹಳ ಇಷ್ಟಪಡುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ನ್ಹವ್ಯಾ ಯೆವ್ಜನಿಯಾಂಚ್ಯಾ ವಿಶಯಾತ್ ಬೊಲುಕ್ ಅನಿ ಆಯ್ಕುಕ್ ಥೈತ್ಲ್ಯಾ ಲೊಕಾಕ್ನಿ ಕುಶಿ ಹೊಲಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:21
9 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಅವಕಾಶವನ್ನೂ ಸದುಪಯೋಗ ಮಾಡಿಕೊಂಡು ಹೊರಗಿನವರೊಂದಿಗೆ ಜಾಣತನದಿಂದ ನಡೆದುಕೊಳ್ಳಿರಿ.


ಈ ದಿನಗಳು ಕೆಟ್ಟವುಗಳಾಗಿರುವುದರಿಂದ, ಸರ್ವ ಸದಾವಕಾಶಗಳನ್ನೂ ಸದ್ವಿನಿಯೋಗಿಸಿಕೊಳ್ಳಿರಿ.


ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಸೋಮಾರಿತನವನ್ನು ಕಲಿಯುತ್ತಾರೆ. ಸೋಮಾರಿಗಳಾಗುವುದಷ್ಟೇ ಅಲ್ಲ, ಹರಟೆ ಮಾತನಾಡುವವರೂ ಇತರರ ಕೆಲಸದಲ್ಲಿ ತಲೆಹಾಕುವವರಾಗಿ ಆಡಬಾರದ ಮಾತುಗಳನ್ನಾಡುವವರೂ ಆಗುತ್ತಾರೆ.


ಫ್ರುಗ್ಯ ಮತ್ತು ಪಂಫುಲ್ಯ, ಈಜಿಪ್ಟ್ ಹಾಗೂ ಕುರೇನೆದ ಹತ್ತಿರದ ಲಿಬ್ಯದ ಭಾಗಗಳ ನಿವಾಸಿಗಳು; ರೋಮ್ ಪಟ್ಟಣದಿಂದ ಬಂದ ಸಂದರ್ಶಕರು ಇಲ್ಲಿ ಬಂದಿದ್ದಾರೆ.


ಪೌಲನನ್ನು ಬಿಟ್ಟು ಬರಲು ಹೋದವರು ಅವನ ಜೊತೆ ಅಥೇನೆ ಪಟ್ಟಣದವರೆಗೆ ಹೋದರು. ಸೀಲ ಮತ್ತು ತಿಮೊಥೆಯರು ಸಾಧ್ಯವಾದಷ್ಟು ಬೇಗನೇ ತನ್ನ ಬಳಿ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂತಿರುಗಿ ಹೋದರು.


ಪೌಲನು ಅವರಿಗಾಗಿ ಕಾಯುತ್ತಾ ಅಥೇನೆಯಲ್ಲಿ ಇದ್ದಾಗ, ಆ ಪಟ್ಟಣವು ವಿಗ್ರಹಗಳಿಂದ ತುಂಬಿಕೊಂಡಿದ್ದನ್ನು ಕಂಡು, ಅವನ ಆತ್ಮವು ಅವನೊಳಗೆ ಕುದಿಯಿತು.


ನೀನು ಕೆಲವು ವಿಚಿತ್ರವಾದ ವಿಚಾರಗಳನ್ನು ನಮಗೆ ಹೇಳುತ್ತಿರುವೆ. ಆದ್ದರಿಂದ ಅವುಗಳ ಅರ್ಥವನ್ನು ತಿಳಿಯಬಯಸುತ್ತೇವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು