Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:2 - ಕನ್ನಡ ಸಮಕಾಲಿಕ ಅನುವಾದ

2 ಅಲ್ಲಿ ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅವನು ಪೊಂತ ಎಂಬ ಊರಿನ ನಿವಾಸಿ. ಎಲ್ಲಾ ಯೆಹೂದ್ಯರು ರೋಮ್ ಪಟ್ಟಣ ಬಿಟ್ಟು ಹೊರಟುಹೋಗಬೇಕೆಂದು ಚಕ್ರವರ್ತಿ ಕ್ಲೌದ್ಯನು ಆಜ್ಞೆ ಹೊರಡಿಸಿದ್ದರಿಂದ, ಅವನು ತನ್ನ ಹೆಂಡತಿ ಪ್ರಿಸ್ಕಿಲ್ಲಳೊಂದಿಗೆ ಇತ್ತೀಚೆಗೆ ಇಟಲಿಯನ್ನು ಬಿಟ್ಟು ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪೊಂತ ಎಂಬ ಊರಿನ ಅಕ್ವಿಲ ಎಂಬ ಯೆಹೂದ್ಯನನ್ನು ಅಲ್ಲಿ ಕಂಡನು. ಚಕ್ರವರ್ತಿ ಕ್ಲಾಡಿಯಸನು ಯೆಹೂದ್ಯರೆಲ್ಲರೂ ರೋಮ್‍ನಗರವನ್ನು ಬಿಟ್ಟುಹೋಗಬೇಕೆಂದು ಆಜ್ಞಾಪಿಸಿದ್ದರಿಂದ, ಈ ಅಕ್ವಿಲನು ತನ್ನ ಪತ್ನಿ ಪ್ರಿಸ್ಸಿಲಳೊಂದಿಗೆ ಇಟಲಿಯಿಂದ ಇತ್ತೀಚೆಗೆ ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೊರಿಂಥದಲ್ಲಿ ಪೌಲನು ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅಕ್ವಿಲನು ಪೊಂತ ಎಂಬ ನಾಡಿನವನು. ಆದರೆ ಅಕ್ವಿಲ ಮತ್ತು ಅವನ ಹೆಂಡತಿ ಪ್ರಿಸ್ಕಿಲ್ಲ ಇಟಲಿಯಿಂದ ಕೊರಿಂಥಕ್ಕೆ ಇತ್ತೀಚಿಗೆ ಬಂದಿದ್ದರು. ಎಲ್ಲಾ ಯೆಹೂದ್ಯರು ರೋಮನ್ನು ಬಿಟ್ಟುಹೋಗಬೇಕೆಂದು ಕ್ಲಾಡಿಯಸನು ಆಜ್ಞಾಪಿಸಿದ್ದರಿಂದ ಅವರು ಇಟಲಿಯನ್ನು ಬಿಟ್ಟುಬಂದಿದ್ದರು. ಪೌಲನು ಅಕ್ವಿಲ ಮತ್ತು ಪ್ರಿಸ್ಕಿಲ್ಲರನ್ನು ಭೇಟಿಯಾಗಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಪೊಂತ್ ಮನ್ತಲ್ಯಾ ಗಾಂವಾತ್ ಉಪಾಜಲ್ಲೊ ಅಕ್ವಿಲ್ ಮನ್ತಲ್ಯಾ ನಾವಾಚೊ ಥೈ ದಿಸಲ್ಲೊ, ಸಗ್ಳಿ ಜುದೆವಾಂಚಿ ಲೊಕಾ ರೊಮ್ ಶಾರಾಕ್ ಸೊಡುನ್ ಜಾವ್ಚೆ ಮನುನ್ ಹುಕುಮ್ ದಿಲ್ಯಾನ್, ಅಕ್ವಿಲ್ ಅನಿ ತೆಚಿ ಬಾಯ್ಕೊ ಪ್ರಿಸ್ಕಿಲ್ಲ್ ಮನ್ತಲ್ಲಿ ತೆನಿ ಇಟಲಿಕ್ನಾ ಕೊರಿಂಥಾಕ್ ಅತ್ತಾ ದನಿ ಯೆಲ್ಲ್ಯಾನಿ, ಕ್ಲಾಡಿಯಸ್ ಮನ್ತಲ್ಯಾ ಮಾನಸ್ಸಾನ್ ಹುಕುಮ್ ದಿಲ್ಯಾನ್, ತೆನಿ ಇಟಲಿ ಮನ್ತಲೆ ಗಾಂವ್ ಸೊಡುನ್ ಯೆಲ್ಲ್ಯಾನಿ, ಪಾವ್ಲುನ್ ಅಕ್ವಿಲಾಕ್ ಅನಿ ತೆಜಾ ಬಾಯ್ಕೊ ಪ್ರಿಸ್ಕಿಲ್ಲಾಕ್ ಭೆಟುಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:2
11 ತಿಳಿವುಗಳ ಹೋಲಿಕೆ  

ಪ್ರಿಸ್ಕಳಿಗೂ ಅಕ್ವಿಲನಿಗೂ ಒನೇಸಿಫೊರನ ಮನೆಯವರಿಗೂ ವಂದನೆ.


ಏಷ್ಯಾದ ಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ನಿಮ್ಮನ್ನು ಹೃದಯಪೂರ್ವಕವಾಗಿ ವಂದಿಸುತ್ತಾರೆ.


ಇವನು ಸಭಾಮಂದಿರದಲ್ಲಿ ಧೈರ್ಯದಿಂದ ಬೋಧಿಸಲು ಪ್ರಾರಂಭಿಸಿದನು. ಆಗ ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನು ಮಾತನಾಡುವುದನ್ನು ಕೇಳಿ, ಅವನನ್ನು ತಮ್ಮ ಮನೆಗೆ ಆಮಂತ್ರಿಸಿದರು. ಅವರು ದೇವರ ಮಾರ್ಗವನ್ನು ಇನ್ನೂ ಹೆಚ್ಚಾದ ರೀತಿಯಲ್ಲಿ ಅಪೊಲ್ಲೋಸನಿಗೆ ವಿವರಿಸಿ ಹೇಳಿದರು.


ಅವರಲ್ಲೊಬ್ಬ ಅಗಬ ಎಂಬವನು ಪವಿತ್ರಾತ್ಮ ಪ್ರೇರಿತನಾಗಿ ಎದ್ದು ನಿಂತುಕೊಂಡು ಲೋಕಕ್ಕೆಲ್ಲಾ ಭೀಕರ ಕ್ಷಾಮ ಬರುವುದೆಂದು ತಿಳಿಸಿದನು. ಇದು ಕ್ಲೌದ್ಯನ ಆಳ್ವಿಕೆಯಲ್ಲಿ ಸಂಭವಿಸಿತು.


ಇನ್ನು ಕೆಲವು ದಿನ ಪೌಲನು ಅಲ್ಲಿಯೇ ಉಳಿದುಕೊಂಡನು. ಅನಂತರ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಕೆಂಖ್ರೆಯ ಎಂಬ ಸ್ಥಳದಲ್ಲಿ ತಲೆ ಕೂದಲನ್ನು ಕ್ಷೌರಮಾಡಿಸಿಕೊಂಡು ತಾನು ಹೊತ್ತ ಹರಕೆ ಪೂರೈಸಿದ ಮೇಲೆ ಸಿರಿಯಕ್ಕೆ ನೌಕೆ ಪ್ರಯಾಣಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನ ಜೊತೆಯಲ್ಲಿ ಹೊರಟರು.


ಪಾರ್ಥಿಯರು, ಮೇದ್ಯರು ಹಾಗೂ ಏಲಾಮ್ಯರು, ಮೆಸೊಪೊಟೇಮಿಯ, ಯೂದಾಯ, ಕಪ್ಪದೋಕ್ಯ, ಪೊಂತ, ಏಷ್ಯಾ,


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನ್ಯ ಇವುಗಳಲ್ಲೆಲ್ಲಾ ಚದರಿರುವ, ದೇವರಿಂದ ಆಯ್ಕೆಯಾದ ಪ್ರವಾಸಿಗಳಿಗೆ,


ನಾವು ಇಟಲಿಗೆ ಸಮುದ್ರ ಪ್ರಯಾಣ ಮಾಡಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಇತರ ಕೈದಿಗಳನ್ನೂ ಯೂಲ್ಯನೆಂಬ ಹೆಸರಿನ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅವನು ಚಕ್ರವರ್ತಿಯ ದಳಕ್ಕೆ ಸೇರಿದವನು.


ಅಲ್ಲಿ ಇಟಲಿಗೆ ಪ್ರಯಾಣಮಾಡುತ್ತಿದ್ದ ಅಲೆಕ್ಸಾಂದ್ರಿಯದ ನೌಕೆಯನ್ನು ಶತಾಧಿಪತಿಯು ಕಂಡು ನಮ್ಮನ್ನು ಆ ನೌಕೆಯಲ್ಲಿ ಹತ್ತಿಸಿದನು.


ನಿಮ್ಮ ಎಲ್ಲಾ ನಾಯಕರಿಗೆ, ದೇವಜನರಿಗೆ ವಂದನೆಗಳು. ಇಟಲಿಯವರು ನಿಮ್ಮನ್ನು ವಂದಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು