Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:22 - ಕನ್ನಡ ಸಮಕಾಲಿಕ ಅನುವಾದ

22 ಅನಂತರ ಅವನು ಕೈಸರೈಯವನ್ನು ಸೇರಿದಾಗ, ಅಲ್ಲಿದ್ದ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆರೂಸಲೇಮಿಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವನು ಸೆಜರೇಯವನ್ನು ಸೇರಿದನು. ಅಲ್ಲಿಂದ ಜೆರುಸಲೇಮಿಗೆ ಹೋಗಿ ಧರ್ಮಸಭೆಯನ್ನು ಸಂಧಿಸಿ ಅಂತಿಯೋಕ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕೈಸರೈಯದಲ್ಲಿ ಇಳಿದು ಯೆರೂಸಲೇವಿುಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪೌಲನು ಸೆಜರೇಯ ಪಟ್ಟಣಕ್ಕೆ ಹೋದನು. ಅಲ್ಲಿಂದ ಜೆರುಸಲೇಮಿಗೆ ಹೋಗಿ ಸಭೆಯವರನ್ನು ವಂದಿಸಿದನು. ಅನಂತರ ಪೌಲನು ಅಂತಿಯೋಕ್ಯ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೊ ಸೆಜಾರೆಯಾಕ್ ಯೆವ್ನ್ ಪಾವಲ್ಯಾ ತನ್ನಾ ಜೆರುಜಲೆಮಾಕ್ ಜಾವ್ನ್ ದೆವಾಚ್ಯಾ ಲೊಕಾಚ್ಯಾ ತಾಂಡ್ಯಾಕ್ ಜಾವ್ನ್ ಯೆತಾ ಮನುನ್ ಸಾಂಗುನ್ ಅಂತಿಯೊಕಾಕ್‍ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:22
16 ತಿಳಿವುಗಳ ಹೋಲಿಕೆ  

ಫಿಲಿಪ್ಪನು, ಅಜೋತಿನಲ್ಲಿ ಕಾಣಿಸಿಕೊಂಡು, ಕೈಸರೈಯ ತಲುಪುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಪ್ರಯಾಣಮಾಡಿದನು.


ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಲು ಬಯಸಿ ಪೌಲನಿಗೆ, “ನೀನು ಯೆರೂಸಲೇಮಿಗೆ ಹೋಗಿ, ಅಲ್ಲಿ ನನ್ನೆದುರಿನಲ್ಲಿ ಈ ದೂರುಗಳ ನ್ಯಾಯವಿಚಾರಣೆಗಾಗಿ ಒಪ್ಪಿಕೊಳ್ಳುವಿಯೋ?” ಎಂದು ಕೇಳಿದನು.


ಫೆಸ್ತನು ಅಧಿಕಾರವಹಿಸಿಕೊಂಡು ಮೂರು ದಿನಗಳ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.


ಆಮೇಲೆ ಸಹಸ್ರಾಧಿಪತಿಯು ತನ್ನ ಇಬ್ಬರು ಶತಾಧಿಪತಿಗಳನ್ನು ಕರೆದು, “ಈ ರಾತ್ರಿ ಒಂಬತ್ತು ಗಂಟೆಗೆ ಕೈಸರೈಯಕ್ಕೆ ಹೋಗಲು ಇನ್ನೂರು ಜನ ಸೈನಿಕರನ್ನೂ ಎಪ್ಪತ್ತು ಕುದುರೆ ಸವಾರರನ್ನೂ ಇನ್ನೂರು ಜನ ಭರ್ಜಿಧರಿಸಿದವರನ್ನೂ ಸಿದ್ಧಗೊಳಿಸಿರಿ.


ಆದರೆ ಪೌಲನು ಮತ್ತು ಬಾರ್ನಬರು ಅಂತಿಯೋಕ್ಯದಲ್ಲಿಯೇ ಉಳಿದುಕೊಂಡು ಅನೇಕರಿಗೆ ಕರ್ತ ಯೇಸುವಿನ ವಾಕ್ಯವನ್ನು ಬೋಧಿಸುತ್ತಾ ಸುವಾರ್ತೆ ಸಾರಿದರು.


ಅವರು ಹೊರಟುಹೋಗಿ ಅಂತಿಯೋಕ್ಯವನ್ನು ತಲುಪಿದರು. ಅಲ್ಲಿ ದೇವಸಭೆಯನ್ನು ಕೂಡಿಸಿ ಆ ಪತ್ರವನ್ನು ಕೊಟ್ಟರು.


ಅವರ ಕೈಯಿಂದ ಬರೆದು ಕೊಟ್ಟದ್ದೇನೆಂದರೆ: ಅಪೊಸ್ತಲರು ಹಾಗೂ ಹಿರಿಯ ಸಹೋದರರು, ಅಂತಿಯೋಕ್ಯ, ಸಿರಿಯ ಮತ್ತು ಕಿಲಿಕ್ಯದಲ್ಲಿ ವಾಸಿಸುವ ಯೆಹೂದ್ಯರಲ್ಲದವರೊಳಗಿನ ಸಹೋದರರಿಗೆ: ವಂದನೆಗಳು.


ಅವರು ಯೆರೂಸಲೇಮನ್ನು ತಲುಪಿದಾಗ, ಸಭೆಯವರು, ಅಪೊಸ್ತಲರು ಹಾಗೂ ಹಿರಿಯರು ಅವರನ್ನು ಸ್ವಾಗತಿಸಿದರು. ದೇವರು ತಮ್ಮ ಮುಖಾಂತರವಾಗಿ ಮಾಡಿದ್ದನ್ನು ಅವರು ತಿಳಿಸಿದರು.


ಅತ್ತಾಲಿಯದಿಂದ ನೌಕೆಯಲ್ಲಿ ಪ್ರಯಾಣಮಾಡಿ ಅಂತಿಯೋಕ್ಯಕ್ಕೆ ಬಂದರು. ಅವರು ಪೂರೈಸಿದ ಸೇವೆಗಾಗಿ ದೇವರ ಕೃಪೆಗೆ ತಮ್ಮನ್ನು ಸಮರ್ಪಿಸಿಕೊಂಡದ್ದು ಈ ಪಟ್ಟಣದಿಂದಲೇ.


ಅಂತಿಯೋಕ್ಯದ ಸಭೆಯಲ್ಲಿ, ಪ್ರವಾದಿಗಳೂ ಬೋಧಕರೂ ಇದ್ದರು. ಅವರು ಯಾರೆಂದರೆ ಬಾರ್ನಬನು, ನೀಗರ ಎಂದು ಕರೆಯಲಾಗುತ್ತಿದ್ದ ಸಿಮೆಯೋನ, ಕುರೇನೆದ ಲೂಕ್ಯ, ಚತುರಾಧಿಪತಿ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಮುಂತಾದವರೇ.


“ಆ ಸಮಯಕ್ಕೆ ಸರಿಯಾಗಿ ಕೈಸರೈಯದಿಂದ ನನ್ನ ಬಳಿಗೆ ಕಳುಹಿಸಲಾದ ಮೂರು ಜನರು ನಾನು ಉಳಿದುಕೊಂಡಿದ್ದ ಮನೆಯ ಮುಂದೆ ಬಂದು ನಿಂತರು.


ಮರುದಿನ ಅವನು ಕೈಸರೈಯವನ್ನು ತಲುಪಿದನು ಮತ್ತು ಕೊರ್ನೇಲ್ಯನು ಅವರಿಗಾಗಿ ಕಾಯುತ್ತಿದ್ದನು. ತನ್ನ ಬಂಧುಗಳನ್ನು ಹತ್ತಿರದ ಸ್ನೇಹಿತರನ್ನು ಕರೆಯಿಸಿದ್ದನು.


ಕೈಸರೈಯದಲ್ಲಿ ಕೊರ್ನೇಲ್ಯ ಎಂಬುವನಿದ್ದನು. “ಇಟಲಿಯ ದಳ” ಎಂದು ಹೆಸರಿನ ದಳಕ್ಕೆ ಅವನು ಶತಾಧಿಪತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು