Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:24 - ಕನ್ನಡ ಸಮಕಾಲಿಕ ಅನುವಾದ

24 ಅಲೆಕ್ಸಾಂದ್ರಿಯ ನಿವಾಸಿ ಅಪೊಲ್ಲೋಸ ಎಂಬ ಹೆಸರಿನ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನು ವಾಕ್ಚಾತುರ್ಯವುಳ್ಳವನೂ ಪವಿತ್ರ ವೇದದಲ್ಲಿ ಪ್ರವೀಣನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನೂ ಧರ್ಮಶಾಸ್ತ್ರಗಳಲ್ಲಿ ಪ್ರವೀಣನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅಲೆಕ್ಸಾಂಡ್ರಿಯದ ಅಪೊಲ್ಲೋಸ್ ಎಂಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನೊಬ್ಬ ಉತ್ತಮ ಭಾಷಣಕಾರ ಹಾಗೂ ಪವಿತ್ರಗ್ರಂಥದಲ್ಲಿ ಪಾಂಡಿತ್ಯಪಡೆದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಶಾಸ್ತ್ರಗಳಲ್ಲಿ ಪ್ರವೀಣನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅಲೆಕ್ಸಾಂಡ್ರಿಯಾ ಪಟ್ಟಣದಿಂದ ಅಪೊಲ್ಲೋಸನೆಂಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಿದ್ಯಾವಂತನಾಗಿದ್ದನು ಮತ್ತು ಪವಿತ್ರ ಗ್ರಂಥದಲ್ಲಿ ಪಾಂಡಿತ್ಯ ಪಡೆದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತವ್ಡ್ಯಾ ಯೆಳಾಕುಚ್ ಅಲೆಕ್ಸಾಂಡ್ರಿಯಾತ್ ಉಪಾಜಲೊ ಅಪೊಲ್ಲೊಸ್ ಮನ್ತಲೊ ಜುದೆವಾಂಚೊ ಎಕ್ಲೊ ಎಫೆಸಾಕ್ ಯೆಲೊ, ತೊ ಬೊಲ್ನ್ಯಾತ್ನಿ ಲೈ ಉಶಾರ್ ಅನಿ ಪವಿತ್ರ್ ಪುಸ್ತಕ್ ಕಳ್ವುನ್ ಘೆಟಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:24
22 ತಿಳಿವುಗಳ ಹೋಲಿಕೆ  

ನಿಯಮ ಪಂಡಿತನಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು. ಅವರಿಗೇನೂ ಕೊರತೆಯಾಗಬಾರದು.


ಪ್ರಿಯರೇ, ನಾನು ನಿಮ್ಮ ಪ್ರಯೋಜನಕ್ಕಾಗಿ ಇವುಗಳನ್ನು ದೃಷ್ಟಾಂತರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. “ನೀವು ಬರೆದಿರುವುದಕ್ಕೆ ಮೀರಿ ಹೋಗಬಾರದು,” ಎಂಬ ಹೇಳಿಕೆಯ ಅರ್ಥವನ್ನು ನಮ್ಮಿಂದ ಕಲಿತುಕೊಳ್ಳಬಹುದು. ಆಗ ನಿಮ್ಮಲ್ಲಿ ಒಬ್ಬರು ಮತ್ತೊಬ್ಬರನ್ನು ಅನುಸರಿಸುತ್ತಿದ್ದೇವೆಂದು ಹೇಳಿಕೊಳ್ಳುವುದರ ವಿರೋಧವಾಗಿ ಹೆಮ್ಮೆ ಪಡುವುದಿಲ್ಲ.


ಈಗ ನಮ್ಮ ಸಹೋದರನಾದ ಅಪೊಲ್ಲೋಸನ ವಿಷಯವೇನೆಂದರೆ, ಅವನು ಇತರ ಸಹೋದರರೊಂದಿಗೆ ನಿಮ್ಮ ಬಳಿಗೆ ಬರಬೇಕೆಂದು ಅವನಿಗೆ ಬಹಳವಾಗಿ ಕೇಳಿಕೊಂಡೆನು. ಆದರೆ ಈಗ ಬರುವುದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿಲ್ಲ. ಅವನು ತನಗೆ ಸಂದರ್ಭ ಸಿಕ್ಕಿದಾಗ ಬರುವನು.


ನಿಮ್ಮಲ್ಲಿ ಒಬ್ಬನು, “ನಾನು ಪೌಲನವನು,” ಇನ್ನೊಬ್ಬನು, “ನಾನು ಅಪೊಲ್ಲೋಸನವನು,” ಬೇರೊಬ್ಬನು, “ನಾನು ಕೇಫನವನು,” ಇನ್ನೊಬ್ಬನು, “ನಾನು ಕ್ರಿಸ್ತನವನು,” ಎಂದು ಹೇಳುತ್ತೀರಂತೆ.


ಆದರೆ, “ಬಿಡುಗಡೆ ಹೊಂದಿದವರು” ಎಂಬ ಯೆಹೂದ್ಯ ಸಭಾಮಂದಿರಕ್ಕೆ ಸೇರಿದವರಿಂದ ವಿರೋಧ ಉಂಟಾಯಿತು. ಅವರು ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಮತ್ತು ಏಷ್ಯಾ ಪ್ರಾಂತಗಳಿಂದ ಬಂದ ಯೆಹೂದ್ಯರಾಗಿದ್ದರು. ಅವರು ಸ್ತೆಫನನೊಂದಿಗೆ ತರ್ಕಿಸುವುದಕ್ಕೆ ಪ್ರಾರಂಭಿಸಿದರು.


ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


“ಅವನ ಪತ್ರಗಳು ತೀಕ್ಷ್ಣವಾಗಿಯೂ ಶಕ್ತಿಯುತವಾಗಿಯೂ ಇವೆ. ಆದರೆ ಅವನು ಎದುರು ಬಂದಾಗ ನಿರ್ಬಲನೂ ಕೆಲಸಕ್ಕೆ ಬಾರದ ಮಾತುಗಳನ್ನಾಡುವವನೂ ಆಗಿದ್ದಾನೆ,” ಎಂದು ಕೆಲವರು ಹೇಳುತ್ತಾರೆ.


ಅಲ್ಲಿ ಇಟಲಿಗೆ ಪ್ರಯಾಣಮಾಡುತ್ತಿದ್ದ ಅಲೆಕ್ಸಾಂದ್ರಿಯದ ನೌಕೆಯನ್ನು ಶತಾಧಿಪತಿಯು ಕಂಡು ನಮ್ಮನ್ನು ಆ ನೌಕೆಯಲ್ಲಿ ಹತ್ತಿಸಿದನು.


ಮೋಶೆಯು ಈಜಿಪ್ಟಿನವರ ಸಕಲ ವಿದ್ಯೆಗಳಲ್ಲಿ ತರಬೇತಿ ಹೊಂದಿ, ಮಾತಿನಲ್ಲಿಯೂ ಕೃತ್ಯದಲ್ಲಿಯೂ ಸಮರ್ಥನಾದನು.


ಅದಕ್ಕೆ ಯೇಸು ಅವರಿಗೆ, “ಯಾವ ಘಟನೆ?” ಎಂದು ಕೇಳಲು, ಅವರು ಯೇಸುವಿಗೆ, “ನಜರೇತಿನ ಯೇಸುವಿನ ವಿಷಯಗಳೇ, ಅವರು ಕೃತ್ಯಗಳಲ್ಲಿಯೂ ಮಾತುಗಳಲ್ಲಿಯೂ ದೇವರ ದೃಷ್ಟಿಯಲ್ಲಿಯೂ ಜನರೆಲ್ಲರ ದೃಷ್ಟಿಯಲ್ಲಿಯೂ ಬಹುಶಕ್ತಿವಂತರಾಗಿದ್ದ ಪ್ರವಾದಿಯಾಗಿದ್ದರು.


ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.


ಸೇನಾಪತಿ, ಅಧಿಕಾರಿ, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆದುಬಿಡುವೆನು.


ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ, ಪರಲೋಕ ದೇವರ ನಿಯಮದಲ್ಲಿ ಪ್ರವೀಣನೂ ಆದ ಎಜ್ರನಿಗೆ, ವಂದನೆಗಳು.


ಈ ಎಜ್ರನು ಬಾಬಿಲೋನಿನಿಂದ ಬಂದನು, ಅವನು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರು ಕೊಟ್ಟ ಮೋಶೆಯ ನಿಯಮದಲ್ಲಿ ಪಾಂಡಿತ್ಯ ಪಡೆದ ನಿಯಮಶಾಸ್ತ್ರಿ ಆಗಿದ್ದನು. ಅವನ ಮೇಲೆ ಅವನ ದೇವರಾಗಿರುವ ಯೆಹೋವ ದೇವರ ಕೈ ಇದ್ದುದರಿಂದ, ಅವನು ಕೇಳಿದ್ದನ್ನೆಲ್ಲಾ ಅರಸನು ಕೊಟ್ಟನು.


ಮೋಶೆಯು ಯೆಹೋವ ದೇವರಿಗೆ, “ಸ್ವಾಮಿ, ನನ್ನನ್ನು ಕ್ಷಮಿಸಿರಿ, ನಾನು ಮೊದಲಿನಿಂದಲೂ ನೀವು ನಿಮ್ಮ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ,” ಎಂದನು.


ಯೇಸುವೇ ಬರತಕ್ಕ ಕ್ರಿಸ್ತ ಆಗಿದ್ದಾರೆ ಎಂದು ಪವಿತ್ರ ವೇದಗಳಿಂದ ಸಿದ್ಧಾಂತಪಡಿಸಿ ತೋರಿಸುತ್ತಾ ಅಲ್ಲಿಯ ಯೆಹೂದ್ಯರೊಂದಿಗೆ ಬಹಿರಂಗವಾಗಿ ಚರ್ಚೆ ಮಾಡಿದನು.


ಎಫೆಸಕ್ಕೆ ತಲುಪಿದಾಗ, ಪೌಲನು ಅವರನ್ನು ಅಲ್ಲಿಯೇ ಬಿಟ್ಟು ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚೆ ನಡೆಸಿದನು.


ಆದರೆ ಅವನು ಅಲ್ಲಿಂದ ಹೊರಟು ಹೋಗಲಿಕ್ಕಿದ್ದಾಗ, “ದೇವರ ಚಿತ್ತವಾದರೆ, ನಾನು ಹಿಂದಿರುಗಿ ಬರುವೆ,” ಎಂದನು. ಆಮೇಲೆ ಎಫೆಸದಿಂದ ನೌಕೆಯಲ್ಲಿ ಪ್ರಯಾಣಮಾಡಿದನು.


ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗಲೇ, ಕಾಲ್ನಡಿಗೆಯಾಗಿ ಪೌಲನು ಪ್ರಯಾಣಮಾಡಿ ಎಫೆಸ ಪಟ್ಟಣಕ್ಕೆ ಬಂದನು. ಅಲ್ಲಿ ಕೆಲವು ಶಿಷ್ಯರನ್ನು ಕಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು