Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:26 - ಕನ್ನಡ ಸಮಕಾಲಿಕ ಅನುವಾದ

26 ಇವನು ಸಭಾಮಂದಿರದಲ್ಲಿ ಧೈರ್ಯದಿಂದ ಬೋಧಿಸಲು ಪ್ರಾರಂಭಿಸಿದನು. ಆಗ ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನು ಮಾತನಾಡುವುದನ್ನು ಕೇಳಿ, ಅವನನ್ನು ತಮ್ಮ ಮನೆಗೆ ಆಮಂತ್ರಿಸಿದರು. ಅವರು ದೇವರ ಮಾರ್ಗವನ್ನು ಇನ್ನೂ ಹೆಚ್ಚಾದ ರೀತಿಯಲ್ಲಿ ಅಪೊಲ್ಲೋಸನಿಗೆ ವಿವರಿಸಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇವನು ಪ್ರಾರ್ಥನಾಮಂದಿರದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದಾಗ, ಪ್ರಿಸ್ಸಿಲ ಮತ್ತು ಅಕ್ವಿಲರು ಅವನ ಬೋಧನೆಯನ್ನು ಕೇಳಿದರು. ಅವನನ್ನು ಮನೆಗೆ ಕರೆದುಕೊಂಡು ಹೋಗಿ ಪ್ರಭುವಿನ ಮಾರ್ಗವನ್ನು ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಪೊಲ್ಲೋಸನು ಸಭಾಮಂದಿರದಲ್ಲಿ ಬಹು ಧೈರ್ಯವಾಗಿ ಮಾಡಿದ ಉಪದೇಶವನ್ನು ಕೇಳಿದ ಪ್ರಿಸ್ಕಿಲ್ಲ ಮತ್ತು ಅಕ್ವಿಲ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ, ದೇವರ ಮಾರ್ಗವನ್ನು ಆಳವಾಗಿ ಗ್ರಹಿಸಿಕೊಳ್ಳಲು ನೆರವು ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತೆನಿ ಸಿನಾಗೊತ್ ತೊ ಧರ್ಯ್ಯಾನ್ ಬೊಲುಕ್ ಚಾಲು ಕರ್‍ಲ್ಯಾನ್, ಅಕ್ವಿಲ್ಲಾನ್ ಅನಿ ಪ್ರಿಸ್ಕಿಲ್ಲಾನ್ ಆಯ್ಕುನ್ ತೆಕಾ ಅಪ್ಲ್ಯಾ ಘರಾಕ್ ಬಲ್ವುನ್ ನ್ಹೆವ್ನ್ ತೆಕಾ ದೆವಾಚ್ಯಾ ವಿಶಯಾತ್ ಸಮಾ ಶಿಕಾಪ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:26
23 ತಿಳಿವುಗಳ ಹೋಲಿಕೆ  

ಆದ್ದರಿಂದ ಕ್ರಿಸ್ತ ಯೇಸುವಿನ ವಿಷಯವಾದ ಪ್ರಾಥಮಿಕ ಉಪದೇಶಗಳನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ದೇವರ ಕಡೆಗೆ ತಿರುಗಿಕೊಳ್ಳುವುದೂ ದೇವರಲ್ಲಿ ನಂಬಿಕೆಯಿಡುವುದೂ


ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲ!” ಎಂದು ಹೇಳಲಾಗದು. ತಲೆಯು ಕಾಲುಗಳಿಗೆ, “ನೀನು ನನಗೆ ಅವಶ್ಯವಿಲ್ಲ!” ಎಂದು ಹೇಳಲಾಗದು.


ಇವನು ಕರ್ತ ಯೇಸುವಿನ ಮಾರ್ಗದ ಬಗ್ಗೆ ಉಪದೇಶ ಹೊಂದಿದ್ದನು. ಯೋಹಾನನ ದೀಕ್ಷಾಸ್ನಾನವನ್ನು ಮಾತ್ರವೇ ತಿಳಿದವನಾಗಿದ್ದನು. ಇವನು ಆತ್ಮದಲ್ಲಿ ಉತ್ಸಾಹಭರಿತನಾಗಿ ಯೇಸುವಿನ ವಿಷಯದಲ್ಲಿ ಧೈರ್ಯವಾಗಿ ಬೋಧಿಸುತ್ತಿದ್ದನು.


ಆದ್ದರಿಂದ ಪೌಲ ಬಾರ್ನಬರು ಅಲ್ಲಿ ಬಹಳ ಸಮಯವಿದ್ದು ಕರ್ತ ಯೇಸುವಿನ ವಿಷಯದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು. ಆದ್ದರಿಂದ ಕರ್ತ ಯೇಸು ಅವರ ಕೈಗಳಿಂದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟು ತಮ್ಮ ಕೃಪಾವಾಕ್ಯವನ್ನು ಖಚಿತಪಡಿಸಿದರು.


ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.


ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರೂ ಇಹಲೋಕ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸಿಕೊಂಡರೆ, ಅಂಥವನು ಜ್ಞಾನಿಯಾಗುವಂತೆ ಮೂರ್ಖನಾಗಲಿ.


ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.


ಅವನು, “ಯಾರಾದರೊಬ್ಬರು ಅದನ್ನು ವಿವರಿಸದಿದ್ದರೆ ನನಗೆ ಅರ್ಥವಾಗುವುದು ಹೇಗೆ?” ಎಂದು ಹೇಳಿ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಮಂತ್ರಿಸಿದನು.


ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.


“ಆಗ ಯಜಮಾನನು, ‘ಇದ್ದ ಪ್ರತಿಯೊಬ್ಬರಿಗೆ ಕೊಡಲಾಗುವುದು ಮತ್ತು ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ಕಸಿದುಕೊಳ್ಳಲಾಗುವುದು.


ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.


“ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು. ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನು ಘೋಷಿಸು.


ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; ಚೊಕ್ಕ ಬಂಗಾರದ ಆಭರಣ.


ಜ್ಞಾನಿಗೆ ಶಿಕ್ಷಣ ನೀಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿಕೊಳ್ಳುವನು.


ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ; ವಿವೇಚಿಸುವವರು ಮಾರ್ಗದರ್ಶನವನ್ನು ಹೊಂದಿಕೊಳ್ಳಲಿ.


ಯಾರಾದರೂ ತಾನು ಏನನ್ನಾದರೂ ತಿಳಿದಿರುವುದಾಗಿ ಭಾವಿಸಿದರೆ, ಅಂಥವನು ತಿಳಿಯಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿರುವುದಿಲ್ಲ.


ಇನ್ನು ಕೆಲವು ದಿನ ಪೌಲನು ಅಲ್ಲಿಯೇ ಉಳಿದುಕೊಂಡನು. ಅನಂತರ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಕೆಂಖ್ರೆಯ ಎಂಬ ಸ್ಥಳದಲ್ಲಿ ತಲೆ ಕೂದಲನ್ನು ಕ್ಷೌರಮಾಡಿಸಿಕೊಂಡು ತಾನು ಹೊತ್ತ ಹರಕೆ ಪೂರೈಸಿದ ಮೇಲೆ ಸಿರಿಯಕ್ಕೆ ನೌಕೆ ಪ್ರಯಾಣಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನ ಜೊತೆಯಲ್ಲಿ ಹೊರಟರು.


ಪೌಲನು ಸಭಾಮಂದಿರದೊಳಗೆ ಪ್ರವೇಶಿಸಿದನು. ಅಲ್ಲಿ ಮೂರು ತಿಂಗಳುಗಳ ಕಾಲ, ಧೈರ್ಯವಾಗಿ ಬೋಧನೆ ಮಾಡಿದನು. ದೇವರ ರಾಜ್ಯದ ಬಗ್ಗೆ ಅವರೊಡನೆ ಮನವೊಲಿಸುವಂತೆ ಚರ್ಚಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು