Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:28 - ಕನ್ನಡ ಸಮಕಾಲಿಕ ಅನುವಾದ

28 ಯೇಸುವೇ ಬರತಕ್ಕ ಕ್ರಿಸ್ತ ಆಗಿದ್ದಾರೆ ಎಂದು ಪವಿತ್ರ ವೇದಗಳಿಂದ ಸಿದ್ಧಾಂತಪಡಿಸಿ ತೋರಿಸುತ್ತಾ ಅಲ್ಲಿಯ ಯೆಹೂದ್ಯರೊಂದಿಗೆ ಬಹಿರಂಗವಾಗಿ ಚರ್ಚೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಹೇಗೆಂದರೆ, ಪವಿತ್ರಗ್ರಂಥಾನುಸಾರ ಯೇಸುವೇ ಲೋಕೋದ್ಧಾರಕನೆಂದು ಖಚಿತಪಡಿಸಿ ಯೆಹೂದ್ಯರನ್ನು ಎಲ್ಲರ ಮುಂದೆ ಬಹಿರಂಗವಾಗಿ ಪ್ರತಿಭಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಹೋಗಿ ಯೇಸುವೇ ಕ್ರಿಸ್ತನೆಂದು ಶಾಸ್ತ್ರಾಧಾರದಿಂದ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದ್ದವರಿಗೆ ಬಹಳ ಸಹಾಯಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅವನು ಜನರೆಲ್ಲರ ಮುಂದೆ ಯೆಹೂದ್ಯರ ವಿರುದ್ಧ ಬಹು ಬಲವಾಗಿ ವಾದಿಸಿ, ಪವಿತ್ರ ಗ್ರಂಥವನ್ನು ಆಧಾರವಾಗಿ ತೆಗೆದುಕೊಂಡು ಯೇಸುವೇ ಕ್ರಿಸ್ತನೆಂಬುದನ್ನು ಸ್ಪಷ್ಟವಾಗಿ ನಿರೂಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಕಶ್ಯಾಕ್ ಮಟ್ಲ್ಯಾರ್, ತೆಚ್ಯಾ ಬಳಾಚ್ಯಾ ವಾದ್ ವಿವಾದಾನಿ ಲೊಕಾತ್ನಿ ಜಾವ್ನ್ ಹೊತಲ್ಯಾ ಚರ್ಚಾತ್ನಿ ಪವಿತ್ರ್ ಪುಸ್ತಕಾಚ್ಯಾ ವೈನಾ ಜೆಜುಚ್ ಕ್ರಿಸ್ತ್ ಮನುನ್ ಖರೆ ಕರುನ್ ಜುದೆವಾಂಚ್ಯಾ ಲೊಕಾಕ್ನಿ ಹರ್‍ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:28
12 ತಿಳಿವುಗಳ ಹೋಲಿಕೆ  

ಮಕೆದೋನ್ಯದಿಂದ ಸೀಲ ಮತ್ತು ತಿಮೊಥೆ ಬಂದ ತರುವಾಯ, ಪೌಲನು ವಾಕ್ಯವನ್ನು ಬೋಧಿಸುವುದರಲ್ಲಿಯೇ ಸಮರ್ಪಿಸಿಕೊಂಡವನಾಗಿ ಯೇಸುವೇ ಕ್ರಿಸ್ತ ಎಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಕೊಟ್ಟನು.


ಆದರೂ ಸೌಲನು ಹೆಚ್ಚೆಚ್ಚು ಸಾಮರ್ಥ್ಯವುಳ್ಳವನಾಗಿ ಯೇಸುವೇ ಕ್ರಿಸ್ತ ಆಗಿದ್ದಾರೆಂದು ರುಜುವಾತುಪಡಿಸುತ್ತಾ ದಮಸ್ಕದ ನಿವಾಸಿಗಳಾದ ಯೆಹೂದ್ಯರನ್ನು ಗಲಿಬಿಲಿಗೆ ಒಳಪಡಿಸಿದನು.


ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.


ಕ್ರಿಸ್ತ ಯೇಸು ಯಾತನೆಯನ್ನು ಅನುಭವಿಸಿ, ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರಬೇಕಾಗಿತ್ತೆಂಬುದನ್ನು ವಿವರಿಸಿ, “ನಾನು ನಿಮಗೆ ಪ್ರಕಟಿಸುತ್ತಿರುವ ಯೇಸುವೇ ಆ ಕ್ರಿಸ್ತ,” ಎಂದು ಅವನು ಅವರ ಮುಂದೆ ಬಹಿರಂಗಪಡಿಸಿದನು.


ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.


ಇವನು ಕರ್ತ ಯೇಸುವಿನ ಮಾರ್ಗದ ಬಗ್ಗೆ ಉಪದೇಶ ಹೊಂದಿದ್ದನು. ಯೋಹಾನನ ದೀಕ್ಷಾಸ್ನಾನವನ್ನು ಮಾತ್ರವೇ ತಿಳಿದವನಾಗಿದ್ದನು. ಇವನು ಆತ್ಮದಲ್ಲಿ ಉತ್ಸಾಹಭರಿತನಾಗಿ ಯೇಸುವಿನ ವಿಷಯದಲ್ಲಿ ಧೈರ್ಯವಾಗಿ ಬೋಧಿಸುತ್ತಿದ್ದನು.


ಆ ಶಿಶುವಾದ ಯೋಹಾನನು ಬೆಳೆದು, ಆತ್ಮದಲ್ಲಿ ಬಲಗೊಂಡು; ತನ್ನನ್ನು ಇಸ್ರಾಯೇಲರಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.


ಪವಿತ್ರ ವೇದದ ಆ ಭಾಗದಿಂದಲೇ ಪ್ರಾರಂಭಿಸಿ ಫಿಲಿಪ್ಪನು ಅವನಿಗೆ ಯೇಸುವಿನ ಕುರಿತಾದ ಶುಭವಾರ್ತೆಯನ್ನು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು