Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:4 - ಕನ್ನಡ ಸಮಕಾಲಿಕ ಅನುವಾದ

4 ಪ್ರತಿ ಸಬ್ಬತ್ ದಿನ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರನ್ನೂ ಗ್ರೀಕರನ್ನೂ ವಿಶ್ವಾಸಿಗಳನ್ನಾಗಿಸಲು ಪ್ರೇರೇಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರತಿ ಸಬ್ಬತ್‍ದಿನ ಅವನು ಪ್ರಾರ್ಥನಾಮಂದಿರದಲ್ಲಿ ಚರ್ಚಿಸುತ್ತಾ ಯೆಹೂದ್ಯರನ್ನು ಮತ್ತು ಗ್ರೀಕರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರತಿ ಸಬ್ಬತ್‌ದಿನದಂದು ಪೌಲನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ಗ್ರೀಕರೊಂದಿಗೂ ಚರ್ಚಿಸುತ್ತಾ ಯೇಸುವಿನಲ್ಲಿ ನಂಬಿಕೆ ಇಡುವಂತೆ ಅವರನ್ನು ಪ್ರೋತ್ಸಾಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹರ್ ಸಬ್ಬತ್‍ ದಿಸಾದಿಸಿ ಪಾವ್ಲುನ್ ದೆವಾಚ್ಯಾ ಲೊಕಾಂಚ್ಯಾ ಸಿನಾಗೊತ್ ಜುದೆವಾಂಚ್ಯಾ ವಾಂಗ್ಡಾ ಅನಿ ಗ್ರಿಕಾಂಚ್ಯಾ ವಾಂಗ್ಡಾ ಚರ್ಚಾ ಕರುನ್ ಎಕ್ ಕರುಚೆ ಮನುನ್ ಬಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:4
18 ತಿಳಿವುಗಳ ಹೋಲಿಕೆ  

ಕರ್ತನ ಭಯಭಕ್ತಿಯನ್ನು ಅರಿತಿರುವ ಕಾರಣ, ಜನರ ಮನವೊಲಿಸಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲವರಾಗಿದ್ದಾರೆ. ಅದು ನಿಮ್ಮ ಮನಸ್ಸಾಕ್ಷಿಗೂ ತಿಳಿದಿದೆ ಎಂದು ನಾನು ನಂಬುತ್ತೇನೆ.


ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.


ಆದ್ದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ದೇವಭಕ್ತಿಯುಳ್ಳ ಗ್ರೀಕರೊಂದಿಗೂ ಅಲ್ಲದೆ ಬಹಿರಂಗ ಸಂತೆಪೇಟೆ ಸ್ಥಳದಲ್ಲಿ ದಿನದಿನವೂ ಬರುತ್ತಿದ್ದ ಜನರೊಂದಿಗೂ ಚರ್ಚೆ ಮಾಡುತ್ತಿದ್ದನು.


ಆಗ ಅಗ್ರಿಪ್ಪನು ಪೌಲನಿಗೆ, “ಅಲ್ಪ ಸಮಯದಲ್ಲಿಯೇ ನನ್ನನ್ನು ಕ್ರಿಸ್ತ ವಿಶ್ವಾಸಿಯನ್ನಾಗಿ ಮಾಡಬೇಕೆಂದಿದ್ದೀಯಾ?” ಎಂದನು.


ಪೌಲನೆಂಬ ಈ ಮನುಷ್ಯನು ಎಫೆಸದಲ್ಲಿಯೂ ಇಡೀ ಏಷ್ಯಾ ಪ್ರಾಂತದಲ್ಲಿಯೂ ದೊಡ್ಡ ಸಂಖ್ಯೆಯಲ್ಲಿ ಜನರನ್ನು ಮನವೊಲಿಸಿ, ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲ ಎಂದು ಹೇಳಿ, ಅವರನ್ನು ಮಾರ್ಪಡಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ಕೇಳಿದ್ದೀರಿ ಹಾಗೂ ಕಂಡಿದ್ದೀರಿ.


ಪೌಲನು ಸಭಾಮಂದಿರದೊಳಗೆ ಪ್ರವೇಶಿಸಿದನು. ಅಲ್ಲಿ ಮೂರು ತಿಂಗಳುಗಳ ಕಾಲ, ಧೈರ್ಯವಾಗಿ ಬೋಧನೆ ಮಾಡಿದನು. ದೇವರ ರಾಜ್ಯದ ಬಗ್ಗೆ ಅವರೊಡನೆ ಮನವೊಲಿಸುವಂತೆ ಚರ್ಚಿಸಿದನು.


“ಮೋಶೆಯ ನಿಯಮಕ್ಕೆ ವಿರುದ್ಧವಾದ ರೀತಿಯಲ್ಲಿ ದೇವರನ್ನು ಆರಾಧಿಸಬೇಕೆಂದು ಈ ಮನುಷ್ಯನು ಜನರನ್ನು ಪ್ರೇರೇಪಿಸುತ್ತಿದ್ದಾನೆ,” ಎಂದು ದೂರು ಹೇಳಿದರು.


ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.


ಉಳಿದವರು ಪೆರ್ಗೆದಿಂದ ಪಿಸಿದ್ಯದ ಅಂತಿಯೋಕ್ಯಕ್ಕೆ ಹೋದರು. ಸಬ್ಬತ್ ದಿನ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.


“ಅದಕ್ಕೆ ಅಬ್ರಹಾಮನು ಅವನಿಗೆ, ‘ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನೇ ಅವರು ಕೇಳದೆ ಹೋದರೆ, ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವುದಿಲ್ಲ,’ ಎಂದು ಹೇಳಿದನು.”


ಯೇಸು ತಾವು ಬೆಳೆದ ನಜರೇತಿಗೆ ಬಂದು, ತಮ್ಮ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಕ್ಕೆ ಹೋಗಿ ಪವಿತ್ರ ವೇದದ ಸುರುಳಿಯನ್ನು ಓದುವುದಕ್ಕಾಗಿ ಎದ್ದು ನಿಂತರು.


‘ನಮ್ಮ ದೇವರಾದ ಯೆಹೋವ ದೇವರು ಅಸ್ಸೀರಿಯದ ಅರಸನ ಕೈಯಿಂದ ನಮ್ಮನ್ನು ಬಿಡಿಸುವರು,’ ಎಂದು ಹಿಜ್ಕೀಯನು ಹೇಳಿ, ನಿಮ್ಮನ್ನು ಹಸಿವೆ ಮತ್ತು ದಾಹದಿಂದ ಸಾಯಿಸುವುದಕ್ಕೆ ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?


ಯೆಫೆತನ ಮೇರೆಗಳನ್ನು ದೇವರು ವಿಸ್ತರಿಸಲಿ. ಯೆಫೆತನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಯೆಫೆತನಿಗೆ ದಾಸನಾಗಿರಲಿ.”


ಆಗ ಯೆಹೂದಿ ನಾಯಕರು, “ನಾವು ಈತನನ್ನು ಕಾಣದ ಹಾಗೆ ಈತ ಎಲ್ಲಿಗೆ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿ ಹೋದವರ ಬಳಿಗೆ ಹೋಗಿ ಗ್ರೀಕರಿಗೆ ಬೋಧಿಸುವನೋ?


ತಡಮಾಡದೆ, ಯೇಸುವೇ “ದೇವಪುತ್ರ” ಎಂದು ಸಭಾಮಂದಿರಗಳಲ್ಲಿ ಸಾರಲು ಪ್ರಾರಂಭಿಸಿದನು.


ಇಕೋನ್ಯದಲ್ಲಿಯೂ ಪೌಲ ಮತ್ತು ಬಾರ್ನಬರು ವಾಡಿಕೆಯಂತೆ ಯೆಹೂದ್ಯರ ಸಭಾಮಂದಿರಕ್ಕೆ ಹೋದರು. ಅವರು ಅಲ್ಲಿ ಪರಿಣಾಮಕಾರಿಯಾಗಿ ಮಾತನಾಡಿದ್ದರಿಂದ ಬಹು ಸಂಖ್ಯೆಯಲ್ಲಿ ಯೆಹೂದ್ಯರೂ ಗ್ರೀಕರೂ ವಿಶ್ವಾಸವನ್ನಿಟ್ಟರು.


ಎಫೆಸಕ್ಕೆ ತಲುಪಿದಾಗ, ಪೌಲನು ಅವರನ್ನು ಅಲ್ಲಿಯೇ ಬಿಟ್ಟು ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚೆ ನಡೆಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು