Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:13 - ಕನ್ನಡ ಸಮಕಾಲಿಕ ಅನುವಾದ

13 ಕೆಲವು ಯೆಹೂದ್ಯರು ದುರಾತ್ಮಗಳನ್ನು ಬಿಡಿಸಲು ಪ್ರಯತ್ನಿಸಿ, “ಪೌಲನು ಸಾರುತ್ತಿರುವ ಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಆಜ್ಞಾಪಿಸುತ್ತೇನೆ,” ಎಂದು ಅವರು ಕರ್ತ ಯೇಸುವಿನ ಹೆಸರನ್ನು ಬಳಸಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ದೆವ್ವಬಿಡಿಸುವವರು” ಎನಿಸಿಕೊಂಡು ಊರೂರು ಸುತ್ತುತ್ತಿದ್ದ ಕೆಲವು ಯೆಹೂದ್ಯರು ಸಹ ಪ್ರಭು ಯೇಸುವಿನ ನಾಮವನ್ನು ಬಳಸಿ ದೆವ್ವಬಿಡಿಸಲು ಯತ್ನಿಸಿದರು. ಇವರು ದೆವ್ವಗಳಿಗೆ, “ಪೌಲನು ಸಾರುತ್ತಿರುವ ಯೇಸುವಿನ ನಾಮದಲ್ಲಿ ನಿಮಗೆ ಆಣೆಯಿಟ್ಟು ಆಜ್ಞಾಪಿಸುತ್ತೇವೆ,” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೆವ್ವಬಿಡಿಸುವವರೆನಿಸಿಕೊಂಡು ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದೆವ್ವಹಿಡಿದವರ ಮೇಲೆ - ಪೌಲನು ಸಾರುವ ಯೇಸುವಿನ ಆಣೆ ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವದಕ್ಕೆ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13-14 ಕೆಲವು ಯೆಹೂದ್ಯರು ಸಹ ಊರೂರುಗಳಿಗೆ ಸಂಚರಿಸುತ್ತಾ ದೆವ್ವದಿಂದ ಪೀಡಿತರಾಗಿದ್ದ ಜನರೊಳಗಿಂದ ದೆವ್ವಗಳನ್ನು ಯೇಸುವಿನ ಹೆಸರಿನ ಮೂಲಕ ಹೊರಡಿಸುತ್ತಿದ್ದರು. ಸ್ಕೇವ ಎಂಬವನ ಏಳು ಮಂದಿ ಗಂಡುಮಕ್ಕಳೂ ಹೀಗೇ ಮಾಡುತ್ತಿದ್ದರು. (ಸ್ಕೇವನು ಪ್ರಧಾನಯಾಜಕನಾಗಿದ್ದನು.) ಅವರೆಲ್ಲರೂ, “ಪೌಲನು ಯಾವ ಯೇಸುವಿನ ಬಗ್ಗೆ ಹೇಳುತ್ತಿದ್ದಾನೋ ಆ ಯೇಸುವಿನ ಹೆಸರಿನಿಂದಲೇ ನೀನು ಹೊರಗೆ ಬರಬೇಕೆಂದು ನಾವು ಆಜ್ಞಾಪಿಸುತ್ತೇವೆ” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಗಿರೆ ಸೊಡಸ್ತಲಿ ಜುದೆವಾಂಚಿ ಲೊಕಾ ಥೈ ಫಿರುಂಗೆತ್ ಹೊತ್ತಿ ತೆಂಚ್ಯಾತ್ಲಿ ಉಲ್ಲಿ ಲೊಕಾ ಧನಿಯಾ ಜೆಜುಚೆ ನಾವ್ ವಾಪ್ರುನ್ ಘೆವ್ನ್ ಗಿರೆ ಸೊಡ್ಸುಕ್ ಕಟ್ಪಟ್ ಕರಿತ್ ಹೊತ್ತಿ, ತೆನಿ ಪಾವ್ಲು ಪರ್ಗಟ್ ಕರುಲಾಗಲ್ಯಾ ಜೆಜುಚ್ಯಾ ನಾವಾನ್ ಹುಕುಮ್ ದಿತಾ, ಭಾಯ್ರ್ ಯೆ ಮನುನ್ ಮ್ಹಾರ್‍ವಾಕ್ನಿ ಸಾಂಗಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:13
15 ತಿಳಿವುಗಳ ಹೋಲಿಕೆ  

ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಜನರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.


ಆಗ ಯೋಹಾನನು, “ಬೋಧಕರೇ, ನಮ್ಮನ್ನು ಹಿಂಬಾಲಿಸದ ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವ ಓಡಿಸುವುದನ್ನು ನಾವು ಕಂಡೆವು. ಅವನು ನಮ್ಮವನು ಅಲ್ಲದ್ದರಿಂದ ನಾವು ಅವನನ್ನು ತಡೆದೆವು,” ಎಂದು ಹೇಳಿದನು.


ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.


ಯೋಹಾನನು, “ಬೋಧಕರೇ, ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವುದನ್ನು ನಾವು ಕಂಡು ಅವನಿಗೆ ಅಡ್ಡಿಮಾಡಿದೆವು, ಏಕೆಂದರೆ ಅವನು ನಮ್ಮೊಂದಿಗೆ ಸೇರಿದವನಲ್ಲ,” ಎಂದನು.


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.


ಆದರೆ ಯೇಸು ಸುಮ್ಮನಿದ್ದರು. ಆಗ ಮಹಾಯಾಜಕನು ಉತ್ತರವಾಗಿ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ನಮಗೆ ಇದನ್ನು ಹೇಳು: ನೀನು ದೇವಪುತ್ರನಾದ ಕ್ರಿಸ್ತನೋ?” ಎಂದನು.


ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.


ಇಸ್ರಾಯೇಲರು ಆ ದಿವಸ ಬಹಳ ಬಳಲಿ ಹೋದರು. ಏಕೆಂದರೆ ಸೌಲನು, “ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾಲದವರೆಗೆ ಯಾವನು ಆಹಾರ ತಿನ್ನುತ್ತಾನೋ, ಅವನು ಶಾಪಗ್ರಸ್ತನಾಗಲಿ,” ಎಂದು ಆಣೆ ಇಟ್ಟದ್ದರಿಂದ, ಜನರೆಲ್ಲರು ಆಹಾರದ ರುಚಿ ನೋಡದೆ ಇದ್ದರು.


ಆ ಕಾಲದಲ್ಲಿ ಯೆಹೋಶುವನು ಅವರಿಗೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಯೆರಿಕೋವೆಂಬ ಈ ನಗರವನ್ನು ಮತ್ತೆ ಕಟ್ಟುವವನು, ಯೆಹೋವ ದೇವರ ದೃಷ್ಟಿಯಲ್ಲಿ ಶಾಪಗ್ರಸ್ತನಾಗುವನು. “ಅದರ ಅಸ್ತಿವಾರವನ್ನು ಹಾಕುವವನು, ಅವನು ತನ್ನ ಚೊಚ್ಚಲು ಮಗನನ್ನು ಕಳೆದುಕೊಳ್ಳುವನು. ಪಟ್ಟಣದ ಬಾಗಿಲುಗಳನ್ನಿಡುವಾಗ ತನ್ನ ಕಿರಿ ಮಗನನ್ನು ಕಳೆದುಕೊಳ್ಳುವನು.”


ಇಗೋ, ನೀವು ಈ ದಿನ ನನ್ನನ್ನು ಸ್ವದೇಶದಿಂದ ಓಡಿಸುತ್ತಿದ್ದೀರಲ್ಲಾ! ನಿಮ್ಮ ಸಮ್ಮುಖದಿಂದ ನಾನು ಮರೆಯಾಗಿರಬೇಕಾಯಿತು. ಭೂಮಿಯಲ್ಲಿ ಅಲೆಮಾರಿಯಾಗಿರಬೇಕು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು,” ಎಂದನು.


ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ ಅದು ಇನ್ನು ಮುಂದೆ ಫಲಿಸುವುದಿಲ್ಲ. ನೀನು ಭೂಲೋಕದಲ್ಲಿ ಅಲೆಮಾರಿಯಾಗಿ ತಿರುಗುವವನು ಆಗಿರುವೆ,” ಎಂದರು.


ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಲಿ, ತಮ್ಮ ಹಾಳು ಮನೆಯಿಂದ ಹೊರಟು ಹೋಗಲಿ.


ಯೆಹೂದ್ಯ ಮುಖ್ಯಯಾಜಕ ಸ್ಕೇವ ಎಂಬುವನ ಏಳು ಜನ ಗಂಡು ಮಕ್ಕಳು ಈ ರೀತಿ ಮಾಡುತ್ತಿದ್ದರು.


ಏಕೆಂದರೆ ಯಾವನಾದರೂ ನಿಮ್ಮ ಬಳಿಗೆ ಬಂದು ನಾನು ನಿಮಗೆ ಬೋಧಿಸದೆ ಇರುವ ಬೇರೊಬ್ಬ ಯೇಸುವಿನ ವಿಷಯ ಬೋಧಿಸಿದರೆ, ನೀವು ಸ್ವೀಕರಿಸುವಿರಿ. ನೀವು ಹೊಂದಿದ ಆತ್ಮನ ಬದಲಿಗೆ ಬೇರೊಂದು ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನೀವು ಕೇಳಿರುವ ಸುವಾರ್ತೆಯ ಬದಲು ಬೇರೊಂದು ಸುವಾರ್ತೆಯನ್ನು ಯಾರಾದರೂ ಬೋಧಿಸಿದರೆ, ನೀವು ಬೇಗನೇ ಒಪ್ಪಿಕೊಳ್ಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು