Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:19 - ಕನ್ನಡ ಸಮಕಾಲಿಕ ಅನುವಾದ

19 ಮಾಟಮಂತ್ರ ಮಾಡುತ್ತಿದ್ದವರು ತಮ್ಮ ಗ್ರಂಥಗಳನ್ನು ತೆಗೆದುಕೊಂಡು ಬಂದು ಎಲ್ಲರ ಮುಂದೆ ಸುಟ್ಟು ಹಾಕಿದರು. ಅವುಗಳ ಒಟ್ಟು ಮೌಲ್ಯ ಐವತ್ತು ಸಾವಿರ ಬೆಳ್ಳಿನಾಣ್ಯಗಳಷ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಮಾಟಮಂತ್ರಗಳ ಪುಸ್ತಕಗಳನ್ನು ತಂದು, ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಮೌಲ್ಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಆಯಿತೆಂದು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮಾಯಮಂತ್ರಮಾಡುತ್ತಿದ್ದ ಅನೇಕರು ತಮ್ಮ ಪುಸ್ತಕಗಳನ್ನು ತೆಗೆದುಕೊಂಡು ಬಂದು ಅವುಗಳನ್ನು ಎಲ್ಲರ ಮುಂದೆ ಸುಟ್ಟುಹಾಕಿದರು. ಆ ಪುಸ್ತಕಗಳ ಬೆಲೆಯನ್ನು ಎಣಿಕೆಮಾಡಿದಾಗ ಅದರ ಮೊತ್ತ ಐವತ್ತು ಸಾವಿರ ಬೆಳ್ಳಿನಾಣ್ಯಗಳಷ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳೀ ನಾಣ್ಯ ಆಯಿತೆಂದು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ವಿಶ್ವಾಸಿಗಳಲ್ಲಿ ಕೆಲವರು ಮಂತ್ರಗಳನ್ನು ಮಾಡುತ್ತಿದ್ದರು. ಈ ವಿಶ್ವಾಸಿಗಳು ತಮ್ಮ ಮಂತ್ರ ಪುಸ್ತಕಗಳನ್ನು ತೆಗೆದುಕೊಂಡು ಬಂದು ಜನರೆಲ್ಲರ ಮುಂದೆ ಅವುಗಳನ್ನು ಸುಟ್ಟುಹಾಕಿದರು. ಈ ಪುಸ್ತಕಗಳ ಬೆಲೆಯು ಸುಮಾರು ಐವತ್ತು ಸಾವಿರ ಬೆಳ್ಳಿನಾಣ್ಯಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತವ್ಡೆ ನಸ್ತಾನಾ ಮೊಡಿ ಮಂತ್ರಾ ಕರ್ತಲ್ಯಾ ಲೊಕಾನಿ ಅನಿ ಥೈ ಹೊತ್ತ್ಯಾ ವಿಶ್ವಾಸಿ ಲೊಕಾನಿ ಅಪ್ಲಿ ಮೊಡಿಯಾಂಚಿ ಪುಸ್ತಕಾ ಹಾನುನ್ ಲೊಕಾಂಚ್ಯಾ ಇದ್ರಾಕ್ ತೆ ಜಾಳ್ವುನ್ ಟಾಕ್ಲ್ಯಾನಿ, ತ್ಯಾ ಪುಸ್ತಕಾಂಚಿ ಕಿಮ್ಮತ್ ಮೆಜುನ್ ಬಗಲ್ಲ್ಯಾ ತನ್ನಾ ಪನ್ನಾಸ್ ಹಜಾರ್ ಚಾಂದಿಚೆ ಪೈಸೆ ಹೊವ್ನ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:19
23 ತಿಳಿವುಗಳ ಹೋಲಿಕೆ  

ಆದರೆ ಮಂತ್ರವಾದಿಯಾದ ಎಲುಮನು ಅವರನ್ನು ವಿರೋಧಿಸಿ ರಾಜ್ಯಪಾಲನು ವಿಶ್ವಾಸಿಯಾಗದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. ಎಲುಮ ಎಂಬ ಹೆಸರಿಗೆ ಮಂತ್ರವಾದಿ ಎಂಬುದೇ ಅರ್ಥ.


ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು, ಅದನ್ನು ಬೆಂಕಿಯಿಂದ ಸುಟ್ಟು ಪುಡಿಯಾಗುವವರೆಗೆ ಅರೆದು ನೀರಿನ ಮೇಲೆ ಚೆಲ್ಲಿ, ಆ ನೀರನ್ನು ಇಸ್ರಾಯೇಲರು ಕುಡಿಯುವಂತೆ ಮಾಡಿದನು.


ಆಗ ಅವರು ತಮ್ಮ ಬಳಿಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ, ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ತೆಗೆದು, ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಊರಿಗೆ ಸಮೀಪವಾಗಿದ್ದ ಏಲಾ ಮರದ ಕೆಳಗೆ ಹೂಳಿಟ್ಟರು.


ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡಿ ಪಾಫೋಸ್ ಎಂಬಲ್ಲಿಗೆ ಬಂದರು. ಅಲ್ಲಿ ಮಂತ್ರವಾದಿಯೂ ಸುಳ್ಳುಪ್ರವಾದಿಯೂ ಆಗಿದ್ದ “ಬಾರ್ ಯೇಸು” ಎಂಬ ಹೆಸರಿನ ಒಬ್ಬ ಯೆಹೂದ್ಯನನ್ನು ಕಂಡರು.


ಆದ್ದರಿಂದ, ಅರಸನು ತನ್ನ ಕನಸನ್ನು ತಿಳಿಸಲು ಮಂತ್ರಗಾರರನ್ನೂ, ಜೋತಿಷ್ಯರನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಲು ಆಜ್ಞಾಪಿಸಿದನು. ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಸ್ಥಿರವಾದ ಉತ್ತಮ ಆಸ್ತಿಯಿದೆ ಎಂದು ತಿಳಿದು, ನಿಮ್ಮ ಆಸ್ತಿ ಸುಲಿಗೆಯಾದಾಗ ಸಂತೋಷವಾಗಿ ಬಿಟ್ಟುಕೊಟ್ಟಿದ್ದೀರಿ.


ಆದ್ದರಿಂದ ನಿಮ್ಮಲ್ಲಿ ಯಾರಾದರೂ ತಮಗಿರುವುದನ್ನೆಲ್ಲಾ ಬಿಟ್ಟುಬಿಡದಿದ್ದರೆ, ಅವರು ನನ್ನ ಶಿಷ್ಯರಾಗಲಾರರು.


ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?


ಇದಲ್ಲದೆ ಮನಸ್ಸೆಯು ಬೆನ್ ಹಿನ್ನೋಮ್ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನೂ ಮಾಟವನ್ನೂ ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


ಹೀಗೆಯೇ ಸೌಲನು ಯೆಹೋವ ದೇವರಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಯೆಹೋವ ದೇವರ ವಾಕ್ಯವನ್ನು ಕೈಗೊಳ್ಳದೆ, ಅದಕ್ಕೆ ವಿರೋಧವಾಗಿ ನಡೆದು, ಯೆಹೋವ ದೇವರನ್ನು ವಿಚಾರಿಸದೆ, ಯಕ್ಷಿಣಿಗಾರರನ್ನು ವಿಚಾರಿಸಿದ್ದರಿಂದ,


ಆದರೆ ಈಜಿಪ್ಟಿನ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಯೆಹೋವ ದೇವರು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.


ಫರೋಹನು ಜ್ಞಾನಿಗಳನ್ನೂ, ಮಂತ್ರವಾದಿಗಳನ್ನೂ ಕರೆಸಿದನು. ಆಗ ಈಜಿಪ್ಟಿನ ಮಂತ್ರಗಾರರೂ ಸಹ ತಮ್ಮ ಮಾಟಗಳಿಂದ ಹಾಗೆಯೇ ಮಾಡಿದರು.


“ಒಬ್ಬ ಸ್ತ್ರೀಯು ತನ್ನ ಬಳಿ ಹತ್ತು ಬೆಳ್ಳಿಯ ನಾಣ್ಯವಿರಲಾಗಿ, ಒಂದು ನಾಣ್ಯವನ್ನು ಕಳೆದುಕೊಂಡರೆ, ಅವಳು ದೀಪಹಚ್ಚಿ ಮನೆಯನ್ನು ಗುಡಿಸಿ, ಅದು ಸಿಕ್ಕುವವರೆಗೆ ಜಾಗ್ರತೆಯಿಂದ ಹುಡುಕುವುದಿಲ್ಲವೇ?


ವಿಶ್ವಾಸವಿಟ್ಟವರಲ್ಲಿ ಅನೇಕರು ಅಲ್ಲಿಗೆ ಬಂದು ತಮ್ಮ ಕೃತ್ಯಗಳನ್ನು ಅರಿಕೆಮಾಡಿದರು.


ಆದ್ದರಿಂದ ಅವನು ಆ ಉಡುಪುಗಳನ್ನು ಅಂದರೆ ಅದು ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಎಲ್ಲಿ ಬೂಜಿದೆಯೋ ಅದನ್ನು ಸುಡಬೇಕು. ಏಕೆಂದರೆ ಅದು ನಾಶಕರವಾದ ಬೂಜುರೋಗವಾಗಿದೆ. ಅದನ್ನು ಬೆಂಕಿಯಿಂದ ಸುಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು