Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:23 - ಕನ್ನಡ ಸಮಕಾಲಿಕ ಅನುವಾದ

23 ಕ್ರಿಸ್ತ ಯೇಸುವಿನ ಮಾರ್ಗದ ವಿಷಯವಾಗಿ ಆ ಸಮಯದಲ್ಲಿ ದೊಡ್ಡ ಗಲಭೆ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದೇ ಸಮಯಕ್ಕೆ ಎಫೆಸದಲ್ಲಿ ಕ್ರಿಸ್ತಮಾರ್ಗ ಅನ್ವೇಷಣೆಯ ನಿಮಿತ್ತ ತೀವ್ರಗಲಭೆ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ಕಾಲದಲ್ಲಿ ಕ್ರಿಸ್ತ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಆ ಸಮಯದಲ್ಲಿ ದೇವರ ಮಾರ್ಗದ ಬಗ್ಗೆ ತೀವ್ರ ಗಲಭೆಯೊಂದು ಎಫೆಸದಲ್ಲಿ ಉಂಟಾಯಿತು. ಅದು ನಡೆದ ರೀತಿ ಇಂತಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತ್ಯಾ ಎಳಾರ್ ಎಪೆಸಾತ್ ಧನಿಯಾಚ್ಯಾ ವಾಟೆಚ್ಯಾ ವಿಶಯಾತ್ ಲೈ ಮೊಟೊ ಧಂಗೊ ಉಟಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:23
10 ತಿಳಿವುಗಳ ಹೋಲಿಕೆ  

ಈ ಮಾರ್ಗದ ವಿಷಯದ ಬಗ್ಗೆ ಬಹು ಸೂಕ್ಷ್ಮವಾಗಿ ತಿಳಿದುಕೊಂಡಿದ್ದ ಫೇಲಿಕ್ಸನು ವಿಚಾರಣೆಯನ್ನು ಮುಂದಕ್ಕೆ ಹಾಕಿದನು. ಅನಂತರ ಅವನು, “ಸಹಸ್ರಾಧಿಪತಿ ಲೂಸ್ಯನು ಬಂದ ಮೇಲೆ ನಿನ್ನ ಈ ವ್ಯಾಜ್ಯ ತೀರ್ಮಾನಿಸುತ್ತೇನೆ,” ಎಂದು ಹೇಳಿದನು.


ಆದರೆ ಅವರಲ್ಲಿ ಕೆಲವರು ಕಠಿಣ ಹೃದಯದವರಾಗಿ; ಒಡಂಬಡದೆ ಈ ಮಾರ್ಗವನ್ನು ಬಹಿರಂಗವಾಗಿ ದೂಷಿಸಿದರು. ಆದ್ದರಿಂದ ಪೌಲನು ಅವರನ್ನು ಬಿಟ್ಟು, ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ಅನುದಿನವೂ ತುರನ್ನನ ತರ್ಕಶಾಲೆಯಲ್ಲಿ ಅವರೊಂದಿಗೆ ಚರ್ಚಿಸುತ್ತಾ ಬಂದನು.


ಈ ಮಾರ್ಗಕ್ಕೆ ಸಂಬಂಧಪಟ್ಟ ಪುರುಷರಾಗಲಿ ಸ್ತ್ರೀಯರಾಗಲಿ ದಮಸ್ಕದಲ್ಲಿದ್ದರೆ ಅವರನ್ನು ತಾನು ಬಂಧಿಸಿ ಯೆರೂಸಲೇಮಿಗೆ ತರಲಿಕ್ಕಾಗುವಂತೆ ದಮಸ್ಕದಲ್ಲಿಯ ಸಭಾಮಂದಿರಗಳಿಗೆ ಕೊಡಲು ಮಹಾಯಾಜಕನಿಂದ ಪತ್ರ ಪಡೆದುಕೊಂಡನು.


ಪ್ರಖ್ಯಾತರಾಗಿದ್ದರೂ ಅಪ್ರಖ್ಯಾತರಾಗಿದ್ದೇವೆ; ಸಾಯುತ್ತಿದ್ದರೂ ನಾವು ಜೀವಿಸುತ್ತಿದ್ದೇವೆ, ನಾವು ಪೆಟ್ಟು ತಿಂದಿದ್ದೇವೆ, ಕೊಲೆಗೆ ಗುರಿಯಾಗಲಿಲ್ಲ.


ಆದರೂ ಅವರು ಒಂದು ಪಂಗಡ ಎಂದು ಕರೆಯುವ ಮಾರ್ಗದ ಅನುಯಾಯಿಯಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮೋಶೆಯ ನಿಯಮ ಒಪ್ಪಿಕೊಳ್ಳುವಂಥದೆಲ್ಲವನ್ನೂ ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವುದೆಲ್ಲವನ್ನೂ ನಾನು ನಂಬುತ್ತೇನೆ.


ಈ ಮಾರ್ಗದವರನ್ನು ಸಾಯುವಷ್ಟು ಹಿಂಸಿಸಿದೆನು. ಸ್ತ್ರೀಪುರುಷರೆನ್ನದೆ ಅವರನ್ನು ಬಂಧಿಸಿ ಅವರನ್ನು ಸೆರೆಮನೆಗೆ ಹಾಕಿಸುತ್ತಿದ್ದೆನು,


ಇವನು ಸಭಾಮಂದಿರದಲ್ಲಿ ಧೈರ್ಯದಿಂದ ಬೋಧಿಸಲು ಪ್ರಾರಂಭಿಸಿದನು. ಆಗ ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನು ಮಾತನಾಡುವುದನ್ನು ಕೇಳಿ, ಅವನನ್ನು ತಮ್ಮ ಮನೆಗೆ ಆಮಂತ್ರಿಸಿದರು. ಅವರು ದೇವರ ಮಾರ್ಗವನ್ನು ಇನ್ನೂ ಹೆಚ್ಚಾದ ರೀತಿಯಲ್ಲಿ ಅಪೊಲ್ಲೋಸನಿಗೆ ವಿವರಿಸಿ ಹೇಳಿದರು.


ನಾವು ಪೆಟ್ಟು ತಿಂದಿದ್ದೇವೆ, ಸೆರೆವಾಸವಾಗಿದ್ದೇವೆ, ಕಲಹಗಳನ್ನು ಅನುಭವಿಸಿದ್ದೇವೆ, ಶ್ರಮೆಪಟ್ಟು ದುಡಿದಿದ್ದೇವೆ, ರಾತ್ರಿಯಲ್ಲಿ ನಿದ್ರೆಗೆಟ್ಟಿದ್ದೇವೆ, ಊಟವಿಲ್ಲದೆ ಹಸಿದಿದ್ದೇವೆ,


ಊರಿಂದೂರಿಗೆ ಪ್ರಯಾಣ ಮಾಡುತ್ತಲೇ ಇದ್ದೆನು, ನದಿಗಳಿಂದ ಅಪಾಯ, ದಾರಿಗಳ್ಳರಿಂದ ಅಪಾಯ, ನನ್ನ ಸ್ವಂತ ಜನರಿಂದ ಅಪಾಯ, ಯೆಹೂದ್ಯರಲ್ಲದವರಿಂದ ಅಪಾಯ, ಪಟ್ಟಣಗಳಲ್ಲಿ ಅಪಾಯ, ಹೊರ ಪ್ರದೇಶಗಳಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ ಮತ್ತು ಸುಳ್ಳು ಸಹೋದರರಿಂದ ಅಪಾಯಗಳನ್ನೆಲ್ಲಾ ನಾನು ಎದುರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು