Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:27 - ಕನ್ನಡ ಸಮಕಾಲಿಕ ಅನುವಾದ

27 ಇದರಿಂದ ಈಗ ನಮ್ಮ ವೃತ್ತಿಗೆ ಅಪಾಯ ಬಂದಿರುವುದಲ್ಲದೆ ಅರ್ತೆಮೀ ಮಹಾದೇವಿಯ ಗುಡಿಯ ಬಗ್ಗೆಯೂ ಯೋಚಿಸಬೇಕು. ಏಕೆಂದರೆ ಏಷ್ಯಾದಲ್ಲಿಯೂ ಇಡೀ ಜಗತ್ತಿನಲ್ಲೆಲ್ಲಾ ಪೂಜಿಸುತ್ತಿರುವ ದೇವಿಯ ಮಹತ್ವವು ಸಹ ಕುಂದಿಹೋಗುವಂತಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇದರಿಂದಾಗಿ ನಮ್ಮ ಕಸಬಿಗೇ ಕೆಟ್ಟ ಹೆಸರು ಬರುವ ಅಪಾಯವಿದೆ. ಅಷ್ಟೇ ಏಕೆ, ಅರ್ತೆಮೀ ಮಹಾದೇವಿಯ ಗುಡಿ ಹೇಳಹೆಸರಿಲ್ಲದಂತಾಗುವ ಸಂಭವವಿದೆ. ಇಡೀ ಏಷ್ಯದಲ್ಲೂ ಜಗತ್ತಿನ ಎಲ್ಲೆಲ್ಲೂ ಪೂಜಿಸಲಾಗುವ ಆ ದೇವತೆಯ ವೈಭವ ಅಳಿದುಹೋಗುವ ಅಪಾಯವಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇದರಿಂದ ನಮ್ಮ ಉದ್ಯೋಗಕ್ಕೆ ಅಪಕೀರ್ತಿ ಬರುವ ಹಾಗಿರುವದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ ಎಲ್ಲಾ ಆಸ್ಯಸೀಮೆಯೂ ಲೋಕವೂ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆಯೂ ಗಂಡಾಂತರವುಂಟೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಇದರಿಂದಾಗಿ ಜನರು ನಮ್ಮ ಕೆಲಸದ ವಿರುದ್ಧ ರೊಚ್ಚಿಗೇಳಬಹುದು. ಅಷ್ಟೇ ಅಲ್ಲ, ಮಹಾದೇವತೆಯಾದ ಅರ್ತೆಮಿಯ ಗುಡಿಯನ್ನು ಜನರು ಕಡೆಗಣಿಸುವ ಸಾಧ್ಯತೆಯೂ ಇದೆ. ಆಗ, ಏಷ್ಯಾದಲ್ಲಿ ಮತ್ತು ಇಡೀ ಪ್ರಪಂಚದಲ್ಲಿ ಪೂಜಿಸಲ್ಪಡುತ್ತಿರುವ ಅರ್ತೆಮಿಯ ದೇವತೆಯ ವೈಭವ ಅಳಿದುಹೋಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅಶೆ ರಾತಾನಾ ಅಮ್ಚ್ಯಾ ಹ್ಯಾ ವ್ಯಾಪಾರಾಚೆ ನಾವ್ ಬುರ್ಶೆ ಹೊವ್ನ್ ಜಾವ್ಕ್ ಲಾಗ್ಲಾ, ತವ್ಡೆಚ್ ನ್ಹಯ್ ಅಮ್ಚ್ಯಾ ಅರ್ತಮೆ ದೆವತೆಚಿ ಗುಡಿಬಿ ತರಾಸಾತ್ ಹಾಯ್, ತಿಚೆ ಮೊಟೆಪಾನಬಿ ನಾಸ್ ಹೊವ್ನ್ ಜಾತಾ, ಆಸ್ಯಾ ಶಾರಾತ್ಲಿ ಸಗ್ಳಿ ಲೊಕಾ ಪುಜ್ಯಾ ಕರ್‍ತಲೆ ಹಿಚೆ ನಾವ್ ನಾಸ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:27
11 ತಿಳಿವುಗಳ ಹೋಲಿಕೆ  

ಅವರು ಭೂಮಿಯ ಎಲ್ಲಾ ದೇವರುಗಳನ್ನು ನಾಶಮಾಡುವಾಗ, ಯೆಹೋವ ದೇವರು ಅವರಿಗೆ ಭಯಂಕರವಾಗಿರುವರು. ಇತರ ಜನಾಂಗಗಳ ದ್ವೀಪಗಳವರೆಲ್ಲರು ತಮ್ಮ ತಮ್ಮ ಸ್ಥಳಗಳಲ್ಲಿ ಅವರನ್ನು ಆರಾಧಿಸುವರು.


ಹೀಗೆ ಅನಾರೋಗ್ಯಕರವಾದ ವಿವಾದಗಳನ್ನೂ ಕೆಲವು ಮಾತುಗಳ ಕುರಿತಾಗಿರುವ ತರ್ಕಗಳನ್ನೂ ಸೃಷ್ಟಿಸುವ ಪ್ರಸಿದ್ಧರಾಗಿದ್ದಾರೆ. ಅಂಥವರು ದೇವಭಕ್ತಿಯನ್ನು ಆರ್ಥಿಕ ಲಾಭವನ್ನಾಗಿ ಭಾವಿಸುವವರಾಗಿದ್ದಾರೆ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಮೃಗದ ತಲೆಗಳಲ್ಲಿ ಒಂದು ಮರಣಾಂತಿಕ ಗಾಯ ಹೊಂದಿದಂತಿರುವುದನ್ನು ನೋಡಿದೆನು. ಆದರೆ ಆ ಮರಣಕರವಾದ ಗಾಯವು ವಾಸಿಯಾಯಿತು. ಭೂಲೋಕವೆಲ್ಲಾ ಆ ಮೃಗವನ್ನು ಕಾಣುತ್ತಾ ಆಶ್ಚರ್ಯಪಟ್ಟಿತು.


ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.


ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ, ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ಕಾಪಾಡು,” ಎಂದು ಬೇಡಿಕೊಳ್ಳುವನು.


ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು.


ಇದು ಎರಡು ವರ್ಷಗಳ ಕಾಲ ಮುಂದುವರಿಯಿತು. ಇದರಿಂದ ಏಷ್ಯಾ ಪ್ರಾಂತದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ ಗ್ರೀಕರೂ ಕರ್ತ ಯೇಸುವಿನ ವಾಕ್ಯವನ್ನು ಕೇಳಿದರು.


ಅವರ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು, “ಯಾವುದಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ, ಕೈಯ ಮೇಲಾಗಲಿ ಗುರುತು ಹಾಕಿಸಿಕೊಂಡರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು