Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:33 - ಕನ್ನಡ ಸಮಕಾಲಿಕ ಅನುವಾದ

33 ಆದರೆ ಯೆಹೂದ್ಯರು ಅಲೆಕ್ಸಾಂದ್ರ ಎಂಬುವನನ್ನು ಮುಂದಕ್ಕೆ ತಳ್ಳಿದರು. ಜನಸಮೂಹದಲ್ಲಿದ್ದ ಕೆಲವರು ಅವನಿಗೆ ವಿಷಯ ತಿಳಿಸಿದರು. ಆಗ ಅಲೆಕ್ಸಾಂದ್ರನು, ಜನರ ಎದುರಿನಲ್ಲಿ ವಾದಿಸಲಿಕ್ಕಾಗುವಂತೆ ಕೈಸನ್ನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಸಭೆಯ ಮುಂದಕ್ಕೆ ನೂಕಿದರು. ನೆರೆದಿದ್ದ ಕೆಲವರು ಅವನನ್ನು ಪುಸಲಾಯಿಸಿದರು. ಆಗ ಅಲೆಕ್ಸಾಂಡರನು ಮೌನವಾಗಿರುವಂತೆ ಕೈಸನ್ನೆಮಾಡಿ ಜನರಿಗೆ ಸಮಾಧಾನ ಹೇಳಲು ಪ್ರಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಜನರ ಮುಂದೆ ನೂಕಿ ಮಾತಾಡಲು ಪುಸಲಾಯಿಸಿದರು. ಅವನು ಜನರಿಗೆ ಮೌನವಾಗಿರುವಂತೆ ಕೈಸನ್ನೆಮಾಡಿ ಜನರ ಪರವಾಗಿ ವಾದಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಜುದೆವಾಂಚ್ಯಾ ಲೊಕಾಕ್ನಿ ಅಲೆಗ್ಸಾಂಡರ್ ಮನ್ತಲ್ಯಾಕ್ ಲೊಕಾಂಚ್ಯಾ ಇದ್ರಾಕ್ ಫಿಡೆ ಜಾವ್ನ್ ಬೊಲುಕ್ ತೆನಿ ಲೊಕಾಕ್ನಿ ಹಾತಿನ್ ಸೊನ್ನಿ ಕರುನ್ ಗಪ್ಪ್ ರ್‍ಹಾವಾ ಮನುನ್ ಲೊಕಾಂಚ್ಯಾ ವಾಂಗ್ಡಾ ವಾದ್ ಕರುನ್ ಅಪ್ಲ್ಯಾ ಸಾಟ್ನಿ ಬೊಲುಕ್ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:33
11 ತಿಳಿವುಗಳ ಹೋಲಿಕೆ  

ಸುಮ್ಮನಿರಬೇಕೆಂದು ಪೇತ್ರನು ಅವರಿಗೆ ಕೈಸನ್ನೆ ಮಾಡಿ ಕರ್ತದೇವರು ಹೇಗೆ ತನ್ನನ್ನು ಸೆರೆಮನೆಯಿಂದ ಬಿಡಿಸಿ ಹೊರಗೆ ಕರೆದುಕೊಂಡು ಬಂದರು ಎಂಬುದನ್ನು ವಿವರಿಸಿದನು. “ಇದನ್ನು ಯಾಕೋಬನಿಗೆ ಹಾಗೂ ಸಹೋದರರಿಗೆ ತಿಳಿಸಿರಿ,” ಎಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡು ಮಾಡಿದ್ದಾನೆ. ಕರ್ತದೇವರು ಅವನ ಕೃತ್ಯಗಳಿಗೆ ಅನುಸಾರವಾಗಿ ಅವನಿಗೆ ಪ್ರತಿಫಲವನ್ನು ಕೊಡಲಿ.


ಹುಮೆನಾಯನೂ ಅಲೆಕ್ಸಾಂಡರನೂ ಅಂಥವರಾಗಿದ್ದಾರೆ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನಿಗೆ ಒಪ್ಪಿಸಿಬಿಟ್ಟಿದ್ದೇನೆ.


ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ರಾಜ್ಯಪಾಲನು ಪೌಲನಿಗೆ ಮಾತನಾಡಬೇಕೆಂದು ಸನ್ನೆಮಾಡಿದಾಗ, ಪೌಲನು ಕೊಟ್ಟ ಉತ್ತರವಿದು: “ಅನೇಕ ವರ್ಷಗಳಿಂದ ತಾವು ಈ ದೇಶದ ಮೇಲೆ ನ್ಯಾಯಾಧೀಶರಾಗಿರುವುದನ್ನು ನಾನು ಬಲ್ಲೆ. ಆದ್ದರಿಂದ ನಾನು ಸಂತೋಷದಿಂದ ನನ್ನ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.


ಸಹಸ್ರಾಧಿಪತಿಯ ಅಪ್ಪಣೆ ಪಡೆದುಕೊಂಡು, ಪೌಲನು ಮೆಟ್ಟಲುಗಳ ಮೇಲೆ ನಿಂತುಕೊಂಡು ಜನಸಮೂಹಕ್ಕೆ ಸುಮ್ಮನಿರುವಂತೆ ಸನ್ನೆಮಾಡಲು, ಅವರು ಬಹು ನಿಶ್ಶಬ್ದರಾದಾಗ ಅವನು ಹೀಬ್ರೂ ಭಾಷೆಯಲ್ಲಿ ಅವರಿಗೆ ಹೀಗೆಂದನು:


ಪೌಲನು ಎದ್ದು ನಿಂತು, ಕೈಸನ್ನೆ ಮಾಡಿ ಹೀಗೆ ಹೇಳಿದನು: “ಇಸ್ರಾಯೇಲ್ ಜನರೇ, ದೇವರಲ್ಲಿ ಭಯಭಕ್ತಿಯುಳ್ಳವರೇ, ಕೇಳಿರಿ!


ಜಕರೀಯನು ಹೊರಗೆ ಬಂದಾಗ, ಅವರೊಂದಿಗೆ ಏನೂ ಮಾತನಾಡಲಾಗಲಿಲ್ಲ. ಅವನು ಅವರಿಗೆ ಸನ್ನೆಮಾಡುತ್ತಾ ಮೂಕನಾಗಿಯೇ ಇದ್ದುದರಿಂದ, ಅವರು ದೇವಾಲಯದಲ್ಲಿ ಅವನಿಗೆ ಏನೋ ದರ್ಶನವಾಗಿರಬೇಕೆಂದು ಗ್ರಹಿಸಿದರು.


ಆದರೆ ಅವನು ಯೆಹೂದ್ಯನೆಂದು ಜನರು ತಿಳಿದಾಗ, “ಎಫೆಸದ ಅರ್ತೆಮೀ ದೇವಿ ಮಹಾದೇವಿ!” ಎಂದು ಒಕ್ಕೊರಲಿನಿಂದ ಎರಡು ತಾಸುಗಳವರೆಗೆ ಆರ್ಭಟಿಸುತ್ತಲೇ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು