ಅಪೊಸ್ತಲರ ಕೃತ್ಯಗಳು 19:34 - ಕನ್ನಡ ಸಮಕಾಲಿಕ ಅನುವಾದ34 ಆದರೆ ಅವನು ಯೆಹೂದ್ಯನೆಂದು ಜನರು ತಿಳಿದಾಗ, “ಎಫೆಸದ ಅರ್ತೆಮೀ ದೇವಿ ಮಹಾದೇವಿ!” ಎಂದು ಒಕ್ಕೊರಲಿನಿಂದ ಎರಡು ತಾಸುಗಳವರೆಗೆ ಆರ್ಭಟಿಸುತ್ತಲೇ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಎರಡು ಘಂಟೆ ಹೊತ್ತು ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆದರೆ ಅವನು ಯೆಹೂದ್ಯನೆಂದು ಗುರುತಿಸಿದ ಕೂಡಲೇ, ಅವರೆಲ್ಲರೂ ಎರಡು ಗಂಟೆಗಳ ಕಾಲ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ,” ಎಂದು ಒಂದೇ ಸಮನೆ ಬೊಬ್ಬೆಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ - ಎಫೆಸದವರ ಅರ್ತೆಮೀದೇವಿ ಮಹಾದೇವಿ ಎಂದು ಎರಡು ಗಂಟೆ ಹೊತ್ತು ಕೂಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆದರೆ ಅಲೆಕ್ಸಾಂಡರನು ಯೆಹೂದ್ಯನೆಂದು ತಿಳಿದಾಗ ಜನರೆಲ್ಲರು, “ಎಫೆಸದ ಅರ್ತೆಮಿಯು ಮಹಾದೇವಿ! ಎಫೆಸದ ಅರ್ತೆಮಿಯು ಮಹಾದೇವಿ! ಅರ್ತೆಮಿಯು ಮಹಾದೇವಿ…!” ಎಂದು ಒಂದೇಸಮನೆ ಎರಡು ತಾಸುಗಳವರೆಗೆ ಕೂಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಹೊಲ್ಯಾರ್ ಅಲೆಕ್ಸಾಂಡರ್ ಮನ್ತಲ್ಲೊ ಮಾನುಸ್ ಜುದೆವಾಂಚೊ ಮನುನ್ ಕಳಲ್ಲ್ಯಾ ತನ್ನಾ ಲೊಕಾನಿ, ಎಫೆಸ್ ಶಾರಾಚ್ಯಾ ಅರ್ತೆಮಿ ಮನ್ತಲಿ ಮಹಾದೆವಿ! ಮನುನ್ ಎಕುಚ್ ಸಮಾ ದೊನ್ ತಾಸ್ ಪತರ್ ಬೊಬ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |