Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:38 - ಕನ್ನಡ ಸಮಕಾಲಿಕ ಅನುವಾದ

38 ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಸಹ ಶಿಲ್ಪಿಗಳಿಗೂ ಯಾವುದೇ ವ್ಯಕ್ತಿಯ ವಿರುದ್ಧ ಏನಾದರೂ ಆಪಾದನೆಗಳಿದ್ದರೆ ಅವರಿಗಾಗಿ ನ್ಯಾಯಾಲಯಗಳು ತೆರೆದಿವೆ. ರಾಜ್ಯಪಾಲರು ಇದ್ದಾರೆ; ಅವರ ಮುಂದೆ ದೂರುಗಳನ್ನು ಸಲ್ಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಅಕ್ಕಸಾಲಿಗರಿಗೂ ಯಾವನ ಮೇಲಾದರೂ ದೂರುಗಳಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ದೆಮೆತ್ರಿಯನಿಗೇ ಆಗಲಿ, ಅವನ ಜೊತೆ ಕೆಲಸಗಾರರಿಗೇ ಆಗಲಿ, ಯಾರ ಮೇಲಾದರೂ ಏನಾದರೂ ಆಪಾದನೆ ಇದ್ದರೆ, ಅದಕ್ಕೆ ನ್ಯಾಯಾಲಯಗಳು ತೆರೆದಿವೆ; ರಾಜ್ಯಪಾಲರಿದ್ದಾರೆ; ಅವರು ಅಲ್ಲಿಗೆ ಹೋಗಿ ದೂರು ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ಒಂದು ವ್ಯವಹಾರವಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನಮ್ಮಲ್ಲಿ ನ್ಯಾಯಾಲಯಗಳಿವೆ ಮತ್ತು ನ್ಯಾಯಾಧೀಶರುಗಳು ಇದ್ದಾರೆ. ದೇಮೇತ್ರಿಯನಿಗಾಗಲಿ ಮತ್ತು ಅವನೊಂದಿಗೆ ಕೆಲಸ ಮಾಡುವ ಜನರಿಗಾಗಲಿ ಯಾರ ಮೇಲಾದರೂ ದೂರುಗಳಿವೆಯೇ? ದೂರುಗಳಿದ್ದರೆ, ಅವರು ನ್ಯಾಯಾಲಯಗಳಿಗೆ ಹೋಗಬೇಕು! ಅವರು ಪರಸ್ಪರ ವಾದ ಮಾಡಲು ಅದೇ ತಕ್ಕ ಸ್ಥಳ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಅಶೆ ರಾತಾನಾ ದೆಮೆತ್ರಿ ಅನಿ ತೆಚಿ ಕಾಮಾ ಕರ್ತಲ್ಯಾಕ್ನಿ ಕೊನಾಚ್ಯಾ ವಿರೊದ್‍ಬಿ ಝಗ್ಡೊ ರ್‍ಹಾಲ್ಯಾರ್ ಅಮ್ಚೆ ಅಧಿಕಾರಿ ಹಾತ್, ಅನಿ ಝಡ್ತಿ ಕರ್‍ತಲೊ ಜಾಗೊ ಹಾಯ್, ಥೈ ಜಾವ್ನ್ ತಕ್ರಾರ್ ಸಾಂಗುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:38
8 ತಿಳಿವುಗಳ ಹೋಲಿಕೆ  

ಅವನು ರಾಜ್ಯಪಾಲ ಸೆರ್ಗ್ಯಪೌಲನ ಜೊತೆಗಿದ್ದನು. ಈ ರಾಜ್ಯಪಾಲನು ಬುದ್ಧಿವಂತನಾಗಿದ್ದನು. ಇವನು ದೇವರ ವಾಕ್ಯವನ್ನು ಕೇಳುವ ಉದ್ದೇಶದಿಂದ ಬಾರ್ನಬ ಮತ್ತು ಸೌಲರನ್ನು ಕರೆಕಳುಹಿಸಿದನು.


ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ, ನ್ಯಾಯವಿಚಾರಣೆಗಾಗಿ ಕರ್ತದೇವರ ಜನರ ಮುಂದೆ ಹೋಗದೆ, ಭಕ್ತಿಹೀನರ ಮುಂದೆ ಹೋಗುವುದಕ್ಕೆ ಧೈರ್ಯವಿದೆಯೋ?


ಪೌಲನು ಮಾತನಾಡಬೇಕೆಂದಿದ್ದಾಗ, ಗಲ್ಲಿಯೋನನು ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧ ಇಲ್ಲವೆ ದುಷ್ಕಾರ್ಯದ ಬಗ್ಗೆ ನಿಮಗೇನಾದರು ಹೇಳುವುದು ಇದ್ದರೆ, ಅದನ್ನು ಸಹನೆಯಿಂದ ಕೇಳುವುದು ನನಗೆ ಯೋಗ್ಯವಾದದ್ದು.


ನಿಮ್ಮ ಊರುಗಳಲ್ಲಿ ಉಂಟಾದ ವಿವಾದಗಳ ವಿಷಯವಾಗಿ ಅಂದರೆ, ಕೊಲೆಯ ವ್ಯಾಜ್ಯವಾಗಲಿ, ವಾದಿ ಪ್ರತಿವಾದ ವ್ಯಾಜ್ಯವಾಗಲಿ, ಹೊಡೆದಾಟದ ವ್ಯಾಜ್ಯವಾಗಲಿ, ನಿಮಗೆ ನ್ಯಾಯತೀರಿಸುವುದು ಕಷ್ಟವಾದರೆ, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ.


ಆದರೆ ಮಂತ್ರವಾದಿಯಾದ ಎಲುಮನು ಅವರನ್ನು ವಿರೋಧಿಸಿ ರಾಜ್ಯಪಾಲನು ವಿಶ್ವಾಸಿಯಾಗದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. ಎಲುಮ ಎಂಬ ಹೆಸರಿಗೆ ಮಂತ್ರವಾದಿ ಎಂಬುದೇ ಅರ್ಥ.


ಸಂಭವಿಸಿದ್ದೆಲ್ಲವನ್ನೂ ರಾಜ್ಯಪಾಲನು ಕಂಡು, ಕರ್ತ ಯೇಸುವಿನ ವಿಷಯವಾಗಿದ್ದ ಬೋಧನೆಯ ಬಗ್ಗೆ ಆಶ್ಚರ್ಯಪಟ್ಟು ವಿಶ್ವಾಸವನ್ನಿಟ್ಟನು.


ಏಕೆಂದರೆ ದೇಮೇತ್ರಿಯ ಎಂಬ ಒಬ್ಬ ಅಕ್ಕಸಾಲಿಗನು ಅರ್ತೆಮೀ ದೇವಿಯ ಬೆಳ್ಳಿಯ ಮೂರ್ತಿಗಳನ್ನು ಮಾಡುವವನಾಗಿದ್ದು, ಆ ಶಿಲ್ಪಿಗಳ ಹಣ ಸಂಪಾದನೆಗೆ ಬಹಳ ವ್ಯಾಪಾರವನ್ನು ಒದಗಿಸುತ್ತಿದ್ದನು.


ಆದರೆ ನೀವು ಇದಕ್ಕಿಂತ ಹೆಚ್ಚಾಗಿ ಬೇರೆ ಏನನ್ನಾದರೂ ತರುವುದಾದರೆ ಅದು ಕಾನೂನುಬದ್ಧ ಸಭೆಯಲ್ಲಿ ತೀರ್ಮಾನವಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು