Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:1 - ಕನ್ನಡ ಸಮಕಾಲಿಕ ಅನುವಾದ

1 ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬದಂದು, ಅವರೆಲ್ಲರೂ ಒಂದೇ ಸ್ಥಳದಲ್ಲಿ ಒಂದಾಗಿ ಕೂಡಿ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪಂಚಾಶತ್ತಮ ಹಬ್ಬದ ದಿನ ಭಕ್ತವಿಶ್ವಾಸಿಗಳೆಲ್ಲರೂ ಒಂದು ಸ್ಥಳದಲ್ಲಿ ಸಭೆಸೇರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರು ಏಕಮನಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪಂಚಾಶತ್ತಮ ಹಬ್ಬದ ದಿನ ಬಂದಾಗ ಅವರೆಲ್ಲರು ಒಂದು ಸ್ಥಳದಲ್ಲಿ ಒಟ್ಟಾಗಿ ಸೇರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪೆಂತೆಕೊಸ್ತಾಚ್ಯಾ ಸನಾದಿಸಿ ದೆವಾಚಿ ಸಗ್ಳ್ಯಿ ಲೊಕಾ ಎಕ್ ಜಾಗ್ಯಾರ್ ಗೊಳಾ ಹೊವ್ನ್ ಯೆಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:1
23 ತಿಳಿವುಗಳ ಹೋಲಿಕೆ  

ಹೀಗೆ ನೀವು ಒಂದೇ ಮನಸ್ಸುಳ್ಳವರಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರನ್ನು ಒಂದೇ ಬಾಯಿಂದ ಮಹಿಮೆ ಪಡಿಸುವಿರಿ.


ನೀವು ಒಂದೇ ಮನಸ್ಸು, ಒಂದೇ ಪ್ರೀತಿ, ಆತ್ಮ, ಹಾಗೂ ಒಂದೇ ಗುರಿಯುಳ್ಳವರಾಗಿ, ನನ್ನ ಸಂತೋಷವನ್ನು ಪರಿಪೂರ್ಣಗೊಳಿಸಿರಿ.


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಆದರೆ ಐವತ್ತು ದಿನಗಳ ಹಬ್ಬದ ತನಕ ಎಫೆಸದಲ್ಲಿರುವೆನು.


“ಆಗ ನಾನು ಜನರ ತುಟಿಗಳನ್ನು ಶುದ್ಧೀಕರಿಸುವೆನು. ಅವರೆಲ್ಲರೂ ಯೆಹೋವ ದೇವರ ಹೆಸರಿನಿಂದ ಮೊರೆಯಿಡುವರು. ಏಕಮನಸ್ಸಿನಿಂದ ಆತನಿಗೆ ಸೇವೆಮಾಡುವರು.


ವಿಶ್ವಾಸಿಗಳೆಲ್ಲರ ಹೃದಯ ಹಾಗೂ ಮನಸ್ಸುಗಳು ಒಂದಾಗಿದ್ದವು. ಯಾವನೂ ತನ್ನ ಆಸ್ತಿಯನ್ನು ತನ್ನದೇ ಎಂದು ಹಕ್ಕು ಸಾಧಿಸಲಿಲ್ಲ. ಆದರೆ ಅವರೆಲ್ಲರೂ ತಮಗಿದ್ದ ಎಲ್ಲವನ್ನು ಹಂಚಿಕೊಂಡರು.


“ನೀವು ಬಿತ್ತಿದ ಹೊಲದಲ್ಲಿ ಪ್ರಥಮ ಫಲವು ದೊರೆತಾಗ ಸುಗ್ಗಿ ಹಬ್ಬವನ್ನು ಆಚರಿಸಬೇಕು. “ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ, ವರ್ಷದ ಕೊನೆಯಲ್ಲಿ ಫಲಸಂಗ್ರಹದ ಹಬ್ಬವನ್ನು ಆಚರಿಸಬೇಕು.


ಸಾಧ್ಯವಾದರೆ, ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬಕ್ಕೆ ಯೆರೂಸಲೇಮನ್ನು ತಲುಪಬೇಕೆಂಬ ಅವಸರ ಪೌಲನಿಗಿದ್ದುದ್ದರಿಂದ, ಏಷ್ಯಾ ಪ್ರಾಂತದಲ್ಲಿ ಕಾಲ ಕಳೆಯುವುದನ್ನು ತಪ್ಪಿಸಿ ಎಫೆಸವನ್ನು ದಾಟಿ ಹೋಗಬೇಕೆಂದು ನಿರ್ಧರಿಸಿದ್ದನು.


ಇದನ್ನು ಕೇಳಿ ಅವರೆಲ್ಲರೂ ಒಟ್ಟಾಗಿ ಸ್ವರವೆತ್ತಿ ದೇವರಿಗೆ ಪ್ರಾರ್ಥನೆ ಮಾಡಿದರು: “ಕರ್ತದೇವರೇ, ನೀನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿರುವಿರಿ.


ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.


“ಪ್ರಥಮ ಗೋಧಿ ಸುಗ್ಗಿಯ ವಾರಗಳ ಹಬ್ಬವನ್ನು ಮತ್ತು ವರ್ಷದ ಕೊನೆಯಲ್ಲಿ ಬೆಳೆ ಸಂಗ್ರಹದ ಹಬ್ಬವನ್ನು ಆಚರಿಸಬೇಕು.


ಜನರ ಮಧ್ಯದಲ್ಲಿ ಅಪೊಸ್ತಲರಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ನಡೆದವು. ಅವರೆಲ್ಲರೂ ಒಂದೇ ಮನಸ್ಸುಳ್ಳವರಾಗಿ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳದಲ್ಲಿ ಸೇರುತ್ತಿದ್ದರು.


ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.


ಸಹೋದರರು ಒಂದಾಗಿ ಬಾಳುವುದು ಎಷ್ಟೋ ಒಳ್ಳೆಯದು! ಎಷ್ಟೋ ರಮ್ಯವಾದದ್ದು!


ತುತೂರಿ ಊದುವವರೂ, ಸಂಗೀತಗಾರರೂ ಯೆಹೋವ ದೇವರನ್ನು ಕೊಂಡಾಡುತ್ತಾ, ಹೊಗಳುತ್ತಾ ಧ್ವನಿ ಎತ್ತಿ ಸ್ತೋತ್ರ ಮಾಡುವಂತೆ ತುತೂರಿಗಳೂ, ತಾಳಗಳೂ ಮೊದಲಾದ ಗೀತ ವಾದ್ಯಗಳಿಂದ ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು, ಅವರ ಕೃಪೆಯು ಯುಗಯುಗಕ್ಕೆ ಇರುವುದು,” ಎಂದು ಯೆಹೋವ ದೇವರನ್ನು ಹೊಗಳುತ್ತಿದ್ದ ಹಾಗೆ, ಯೆಹೋವ ದೇವರ ಆಲಯವು ಮೇಘದಿಂದ ತುಂಬಿತು.


ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.


ಏಕೆಂದರೆ ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದನು. ಆದರೆ ಇನ್ನು ಕೆಲವೇ ದಿನಗಳಲ್ಲಿ ಪವಿತ್ರಾತ್ಮ ದೇವರಿಂದ ನೀವು ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.


ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು