Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:23 - ಕನ್ನಡ ಸಮಕಾಲಿಕ ಅನುವಾದ

23 ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜೆಜುಕ್ ತುಮ್ಕಾ ಹಾತಾತ್ ಒಪ್ಸುನ್ ದಿತಲಿ ದೆವಾಚಿಚ್ ಯವ್ಜನ್ ಹೊತ್ತಿ, ದೆವಾನ್ ಲೈ ಫಾಟಿಚ್ ಹೆ ನಿರ್ಧಾರ್ ಕರುನ್ ಥವಲ್ಲ್ಯಾನ್. ಖರೆ ತುಮಿ ಪಾಪಿ ಲೊಕಾಂಚ್ಯಾ ಮಜತಿನ್ ತೆಕಾ ಕುರ್ಸಾರ್ ಮಾರ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:23
39 ತಿಳಿವುಗಳ ಹೋಲಿಕೆ  

ನೇಮಕವಾದ ಪ್ರಕಾರ ಮನುಷ್ಯಪುತ್ರನಾದ ನಾನು ಹೊರಟುಹೋಗುತ್ತೇನೆ; ಆದರೆ ನನಗೆ ದ್ರೋಹಬಗೆಯುವವನಿಗೋ ಎಷ್ಟೋ ಕಷ್ಟ!” ಎಂದು ಹೇಳಿದರು.


ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.


ಆದರೆ ತಮ್ಮ ಕ್ರಿಸ್ತ ಯೇಸು ಹಿಂಸೆಗೊಳಗಾಗಬೇಕೆಂದು, ಎಲ್ಲಾ ಪ್ರವಾದಿಗಳ ಬಾಯಿಯ ಮುಖಾಂತರ ದೇವರು ಮುಂತಿಳಿಸಿದ್ದನ್ನು ಈ ರೀತಿ ನೆರವೇರಿಸಿದರು.


ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ.


ಅವರು ಜಗದುತ್ಪತ್ತಿಗೆ ಮೊದಲೇ ನೇಮಕಗೊಂಡು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷರಾದರು.


ಯೆರೂಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಯೇಸುವನ್ನು ಯಾರೆಂದು ಗುರುತಿಸಿಲಿಲ್ಲ. ಆದರೂ ಅವರು ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನೂ ಗ್ರಹಿಸಲಿಲ್ಲ. ಅವರು ಯೇಸುವನ್ನು ಅಪರಾಧಿಯೆಂದು ತೀರ್ಪು ಮಾಡಿ, ಪ್ರವಾದಿಗಳ ವಾಕ್ಯಗಳನ್ನು ನೆರವೇರಿಸಿದರು.


ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದರು.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಒಬ್ಬ ತಂದೆಯನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರ ವೇದದಲ್ಲಿ ಲಿಖಿತವಾಗಿದೆ. ದೇವರು ಸತ್ತವರಿಗೆ ಜೀವಕೊಡುವವರೂ ಇಲ್ಲದವುಗಳನ್ನು ಇರುವವುಗಳೋ ಎಂಬಂತೆ ಕರೆಯುವವರೂ ಆಗಿರುತ್ತಾರೆಂದು ಅಬ್ರಹಾಮನು ದೇವರ ಸನ್ನಿಧಿಯಲ್ಲಿ ನಂಬಿದನು.


ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಎಂದು ನಿತ್ಯತ್ವವನ್ನು ತಿಳಿದಿರುವವರೂ ಇವುಗಳನ್ನೆಲ್ಲಾ ಮಾಡುವವರೂ ಆಗಿರುವ ದೇವರು ಹೇಳುತ್ತಾರೆ.


ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಯೇಸುವನ್ನು ಮರಣದಂಡನೆಗೆ ಒಪ್ಪಿಸಿಕೊಟ್ಟು, ಅವರನ್ನು ಶಿಲುಬೆಗೆ ಹಾಕಿದರು.


ಏಕೆಂದರೆ, ‘ಆತನು ಪಾತಕರಲ್ಲಿ ಒಬ್ಬನಂತೆ ಎಣಿಸಿಕೊಂಡನು,’ ಎಂಬುದಾಗಿ ಪವಿತ್ರ ವೇದದಲ್ಲಿ ಬರೆದಿರುವುದೆಲ್ಲವೂ ನೆರವೇರಬೇಕು ಎಂದು ನಾನು ನಿಮಗೆ ಹೇಳುತ್ತೇನೆ. ಹೌದು, ನನ್ನ ವಿಷಯವಾಗಿ ಬರೆದದ್ದು ನೆರವೇರಲಿದೆ,” ಎಂದರು.


ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ.


ಆದ್ದರಿಂದ ಅವರು, “ನಾವು ಅದನ್ನು ಹರಿಯುವುದು ಬೇಡ. ಆದರೆ ಅದು ಯಾರಿಗಾಗುವುದೋ ಎಂದು ನೋಡುವುದಕ್ಕಾಗಿ ಚೀಟು ಹಾಕಿಕೊಳ್ಳೋಣ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಹೀಗೆ, “ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿಕೊಂಡರು. ನನ್ನ ಒಳ ಅಂಗಿಗಾಗಿ ಚೀಟುಹಾಕಿದರು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆ, ಸೈನಿಕರು ಚೀಟುಹಾಕಿ ಪಾಲುಮಾಡಿಕೊಂಡರು.


ಮತ್ತು, “ಜನರು ಎಡವಲು ಕಾರಣವಾಗುವ ಕಲ್ಲೂ ಅವರು ಬಿದ್ದುಹೋಗುವಂತೆ ಮಾಡುವ ಬಂಡೆಯೂ ಆಗಿರುತ್ತದೆ,” ಅವರು ವಾಕ್ಯಕ್ಕೆ ಅವಿಧೇಯರಾದ್ದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.


“ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ


ಇದಲ್ಲದೆ ನನ್ನನ್ನು ಹಾಸ್ಯಮಾಡುವುದಕ್ಕೂ ಕೊರಡೆಗಳಿಂದ ಹೊಡೆಯುವುದಕ್ಕೂ ಶಿಲುಬೆಗೆ ಹಾಕುವುದಕ್ಕೂ ಯೆಹೂದ್ಯರಲ್ಲದವರ ಕೈಗೆ ಒಪ್ಪಿಸಿಕೊಡುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು.


ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ, ಅವರ ಬಟ್ಟೆಗಳಿಗಾಗಿ ಸೈನಿಕರು ಚೀಟುಹಾಕಿ ಹಂಚಿಕೊಂಡರು


ಅವರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರ ಬಟ್ಟೆಗಳನ್ನು ಪಾಲುಮಾಡಿಕೊಂಡರು. ಯಾರಿಗೆ ಯಾವುದು ಬರುವುದೋ ಎಂದು ಚೀಟುಹಾಕಿದರು.


ಅವರು “ತಲೆಬುರುಡೆಯ ಸ್ಥಳ” ಎಂದು ಕರೆಯಲಾಗುವ ಸ್ಥಳಕ್ಕೆ ಬಂದಾಗ, ಅಲ್ಲಿ ಯೇಸುವನ್ನು ಶಿಲುಬೆಗೆ ಹಾಕಿದರು. ಆ ಅಪರಾಧಿಗಳಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿ ಮತ್ತೊಬ್ಬನನ್ನು ಅವರ ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.


ಅಲ್ಲಿ ಯೇಸುವನ್ನೂ ಅವರ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಗೂ ಮತ್ತೊಬ್ಬನನ್ನು ಅವರ ಎಡಗಡೆಗೂ ಇಟ್ಟರು.


“ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು.


ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು.


ನಿಯಮವಿಲ್ಲದವರಾಗಿ ಪಾಪಮಾಡಿದವರು ನಿಯಮವಿಲ್ಲದೆಯೇ ನಾಶಹೊಂದುವರು. ನಿಯಮಕ್ಕೆ ಅಧೀನರಾಗಿದ್ದು ಪಾಪಮಾಡಿದವರು ನಿಯಮದ ಮೂಲಕವಾಗಿ ತೀರ್ಪನ್ನು ಹೊಂದುವರು.


ಆ ಯೆಹೂದ್ಯರು ನಮಗೆ ಕರ್ತ ಆಗಿರುವ ಯೇಸುವನ್ನು ಮತ್ತು ಪ್ರವಾದಿಗಳನ್ನು ಕೊಂದರು. ನಮ್ಮನ್ನೂ ಓಡಿಸಿಬಿಟ್ಟರು. ಅವರು ದೇವರನ್ನು ಮೆಚ್ಚಿಸದೆ ಜನರೆಲ್ಲರಿಗೂ ವಿರೋಧಿಗಳಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು