Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:26 - ಕನ್ನಡ ಸಮಕಾಲಿಕ ಅನುವಾದ

26 ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; ನನ್ನ ಶರೀರವು ಸಹ ನಿರೀಕ್ಷೆಯಿಂದ ನೆಲೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು, ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇದಕಾರಣ ಹರ್ಷಿಸಿತು ಎನ್ನ ಹೃದಯ ತುಳುಕಿತು ಸಂತಸ ಎನ್ನ ನಾಲಗೆಯಿಂದ ನಂಬಿ ನಿರೀಕ್ಷೆಯಿಂದಿರುವುದು ಎನ್ನ ಮರ್ತ್ಯದೇಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು. ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ನನ್ನ ಹೃದಯವು ಹರ್ಷಿಸುತ್ತದೆ. ನನ್ನ ಬಾಯಿ ಆನಂದದಿಂದ ಮಾತಾಡುತ್ತದೆ. ಹೌದು, ನನ್ನ ದೇಹವು ಸಹ ನಿರೀಕ್ಷೆಯಿಂದ ಜೀವಿಸುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತಸೆ ಹೊವ್ನ್ ಮಾಜ್ಯಾ ಮನಾಕ್ ಲೈ ಕುಶಿ ಹೊತಾ, ಅನಿ ಮಾಜಿ ಬೊಲ್ನಿ ಕುಶಿನ್ ಭರುನ್ ರ್‍ಹಾತ್ಯಾತ್, ಅನಿ ಮರ್ತಲ್ಯಾ ಸಾರ್ಕೊ ಹೊತ್ತೊ ಮಿಯಾ ಬರೊಸ್ಯಾನ್ ಜಿವನ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:26
7 ತಿಳಿವುಗಳ ಹೋಲಿಕೆ  

ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; ನನ್ನ ಶರೀರವು ಸಹ ಸುರಕ್ಷಿತವಾಗಿ ವಿಶ್ರಮಿಸುವುದು.


ನೀವು ನನ್ನನ್ನು ಬಿಡಿಸಿದ್ದಕ್ಕಾಗಿ ನನ್ನ ತುಟಿಗಳು ಆನಂದದಿಂದ ಹಾಡಿ ಸ್ತುತಿಸುತ್ತವೆ.


ಮೃಷ್ಟ ಭೋಜನದಿಂದಲೋ ಎಂಬಂತೆ ನಾನು ನಿಮ್ಮಲ್ಲಿ ಸಂತೃಪ್ತನಾಗಿದ್ದೇನೆ. ಉತ್ಸಾಹದ ತುಟಿಗಳಿಂದ ನನ್ನ ಬಾಯಿಯು ನಿಮ್ಮನ್ನು ಸ್ತುತಿಸುವುದು.


ನೀವು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರುಗಿಸಿದ್ದೀರಿ; ನೀವು ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಹರ್ಷವಸ್ತ್ರವನ್ನು ನನಗೆ ಧರಿಸಿದ್ದೀರಿ.


ದಾವೀದನು ಯೇಸುಸ್ವಾಮಿಯವರ ಬಗ್ಗೆ ಹೀಗೆ ಹೇಳಿದ್ದಾನೆ: “ ‘ನಾನು ಕರ್ತದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ನಾನು ಕದಲದಂತೆ ಕರ್ತದೇವರು ನನ್ನ ಬಲಗಡೆಯಲ್ಲಿದ್ದಾರೆ.


ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ, ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು