Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:29 - ಕನ್ನಡ ಸಮಕಾಲಿಕ ಅನುವಾದ

29 “ಪ್ರಿಯರೇ, ಮೂಲಪಿತೃ ದಾವೀದನು ಮರಣಹೊಂದಿದನು; ಸಮಾಧಿಮಾಡಲಾಯಿತು. ಇಂದಿಗೂ ಅವನ ಸಮಾಧಿ ನಮ್ಮಲ್ಲಿದೆ ಎಂಬುದನ್ನು ನಾನು ನಿಮಗೆ ಧೈರ್ಯದಿಂದ ಹೇಳಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸಹೋದರರೇ, ಮೂಲ ಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತಾಡಬಹುದು ಏನಂದರೆ - ಅವನು ತೀರಿಹೋಗಿ ಹೂಣಲ್ಪಟ್ಟನು; ಅವನ ಸಮಾಧಿ ಈ ದಿನದವರೆಗೂ ನಮ್ಮಲ್ಲಿ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ನನ್ನ ಸಹೋದರರೇ, ನಮ್ಮ ಪಿತೃವಾದ ದಾವೀದನ ಬಗ್ಗೆ ನಾನು ನಿಮಗೆ ನಿಜವಾಗಿಯೂ ಹೇಳಬಲ್ಲೆನು. ಅವನು ಸತ್ತುಹೋದನು ಮತ್ತು ಅವನಿಗೆ ಸಮಾಧಿಯಾಯಿತು. ಅವನ ಸಮಾಧಿಯು ನಮ್ಮ ಮಧ್ಯದಲ್ಲಿ ಇಂದಿನವರೆಗೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಮಾಜ್ಯಾ ಭಾವಾನು ಅನಿ ಭೆನಿಯಾನು, ಅಮ್ಚ್ಯಾ ವಾಡ್ವಡ್ಲಾ ದಾವಿದ್ ರಾಜಾಚ್ಯಾ ವಿಶಯಾತ್ ಮಿಯಾ ತುಮ್ಕಾ ಖರೆ ಸಾಂಗ್ತಾ, ತೊ ಮರುನ್ ಗೆಲೊ ತೆಕಾ ಮಾಟಿ ದಿವ್ನ್ ಹೊಲಿ, ತೆಚಿ ಸಮಾದಿ ಅಜುನ್ಬಿ ಆಮ್ಚ್ಯಾ ಮದ್ದಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:29
8 ತಿಳಿವುಗಳ ಹೋಲಿಕೆ  

“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.


ಮೆಲ್ಕಿಜೆದೇಕನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ಮೂಲ ಪಿತೃವಾದ ಅಬ್ರಹಾಮನು ಗೆದ್ದು ತಂದವುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಇವನಿಗೇ ಕೊಟ್ಟನಲ್ಲಾ.


ಇವನ ಆಚೆ ಎಂದರೆ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯರ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವನು ಬೇತ್ ಚೂರಿನ ಅರೆನಾಡೊಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.


ಹೀಗೆಯೇ ದಾವೀದನು ಮರಣಹೊಂದಿ ತನ್ನ ಪಿತೃಗಳ ಜೊತೆ ಸೇರಿದನು. ದಾವೀದನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು.


ಏಕೆಂದರೆ ರಾಜರಿಗೆ ಈ ಎಲ್ಲಾ ಸಂಗತಿಗಳ ಪರಿಚಯವಿದೆ. ರಾಜರೊಂದಿಗೆ ನಾನು ಸಹ ಭರವಸೆಯಿಂದ ಮಾತನಾಡುತ್ತಿರುವೆನು. ಇವುಗಳಲ್ಲಿ ಯಾವುದೂ ರಾಜರ ಗಮನಕ್ಕೆ ಬಾರದೆ ಹೋಗಿಲ್ಲ ಎಂಬುದು ನನ್ನ ದೃಢ ನಂಬಿಕೆ. ಏಕೆಂದರೆ ಇದು ಮೂಲೆಯಲ್ಲಿ ನಡೆದ ಸಂಗತಿಯಲ್ಲ.


ನೀವು ನನಗೆ ಜೀವಮಾರ್ಗಗಳನ್ನು ತಿಳಿಯಪಡಿಸಿರುವಿರಿ; ನಿಮ್ಮ ಸನ್ನಿಧಿಯಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿರಿ.’


ಮಹಾಯಾಜಕನೂ ಹಿರಿಸಭೆಯವರೆಲ್ಲರೂ ಇದಕ್ಕೆ ಸಾಕ್ಷಿ. ಅವರಿಂದಲೇ ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ದಂಡಿಸುವುದಕ್ಕಾಗಿಯೂ ಸೆರೆಹಿಡಿದು ಯೆರೂಸಲೇಮಿಗೆ ತರುವುದಕ್ಕಾಗಿಯೂ ದಮಸ್ಕಕ್ಕೆ ಪ್ರಯಾಣಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು