Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:3 - ಕನ್ನಡ ಸಮಕಾಲಿಕ ಅನುವಾದ

3 ಅಗ್ನಿ ಜ್ವಾಲೆಗಳು ಬೆಂಕಿಯ ನಾಲಿಗೆಗಳಂತೆ ವಿಂಗಡವಾಗಿ ಬಂದು ಪ್ರತಿಯೊಬ್ಬರ ಮೇಲೆ ಇಳಿಯುವುದನ್ನು ಅವರು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಲ್ಲದೆ ಅಗ್ನಿಜ್ವಾಲೆಗಳು ಕೆನ್ನಾಲಿಗೆಯಂತೆ ಕಾಣಿಸಿಕೊಂಡವು. ಅವು ವಿಂಗಡ ವಿಂಗಡವಾಗಿ ಪ್ರತಿಯೊಬ್ಬರ ಮೇಲೂ ನೆಲೆಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದಲ್ಲದೆ ಉರಿಯಂತಿದ್ದ ನಾಲಿಗೆಗಳು ವಿಂಗಡಿಸಿಕೊಳ್ಳುವ ಹಾಗೆ ಅವರಿಗೆ ಕಾಣಿಸಿ ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕೂತುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬೆಂಕಿಯ ಜ್ವಾಲೆಗಳಂತಿದ್ದ ಏನನ್ನೊ ಅವರು ಕಂಡರು. ಜ್ವಾಲೆಗಳು ವಿಂಗಡವಾಗಿ ಅಲ್ಲಿದ್ದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ನೆಲೆಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ತೆನಿ ಜಿಬ್ಲಿಯಾಂಚ್ಯಾ ಸಾರ್ಕೆ ಹೊತ್ತಿ ಆಗ್ ಬಗಟ್ಲ್ಯಾನಿ, ತಿ ಆಗಿಚಿ ಜಿಬ್ಲಿಯಾ ಪಗ್ಳುನ್ ಥೈ ಹೊತ್ತ್ಯಾ ಹರ್ ಎಕ್ಲ್ಯಾಚ್ಯಾ ವರ್‍ತಿ ಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:3
18 ತಿಳಿವುಗಳ ಹೋಲಿಕೆ  

“ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.


“ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.


ಅವರು ಒಬ್ಬರಿಗೊಬ್ಬರು, “ಅವರು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ, ಪವಿತ್ರ ವೇದವನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ಬೆಂಕಿಯಂತೆ ದಹಿಸಿತಲ್ಲವೇ?” ಎಂದುಕೊಂಡರು.


ಯೆಹೋವ ದೇವರು, “ಇವರಿಗೆ ಒಂದೇ ಜನಾಂಗವೂ ಒಂದೇ ಭಾಷೆಯೂ ಇದೆ. ಇವರು ಇದನ್ನು ಮಾಡಲಾರಂಭಿಸಿದ್ದಾರೆ. ಈಗ ಇನ್ನು ಮುಂದೆ ಇವರು ಮಾಡುವುದಕ್ಕೆ ಉದ್ದೇಶಿಸುವುದು ಇವರಿಗೆ ಅಸಾಧ್ಯವಾಗುವುದಿಲ್ಲ.


ಮತ್ತೊಬ್ಬ ದೇವದೂತನು ಆಕಾಶದ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ರಾಷ್ಟ್ರ, ಹಿನ್ನಲೆ, ಭಾಷೆ ಹಾಗೂ ಪ್ರಜೆಗಳವರಿಗೂ ಸಾರಿ ಹೇಳುವುದಕ್ಕೆ ನಿತ್ಯ ಸುವಾರ್ತೆಯು ಅವನಲ್ಲಿತ್ತು.


ಒಬ್ಬನಿಗೆ ಅದ್ಭುತಕಾರ್ಯಗಳ ಶಕ್ತಿಯೂ ಒಬ್ಬನಿಗೆ ಪ್ರವಾದನೆಯೂ ಒಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವೂ ಒಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಶಕ್ತಿಯೂ ಮತ್ತೊಬ್ಬನಿಗೆ ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವೂ ಕೊಡಲಾಗುತ್ತದೆ.


ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು.


ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.


ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,”


ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ.


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ಯೆಹೋವ ದೇವರೇ, ದುಷ್ಟರನ್ನು ಕಳವಳಗೊಳಿಸಿರಿ, ಅವರ ಮಾತುಗಳನ್ನು ನಿಲ್ಲಿಸಿಬಿಡಿರಿ. ಬಲಾತ್ಕಾರವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ಕಾಣುತ್ತಿದ್ದೇನೆ.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:


ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು