Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:30 - ಕನ್ನಡ ಸಮಕಾಲಿಕ ಅನುವಾದ

30 ಆದರೆ ಪ್ರವಾದಿಯಾಗಿದ್ದ ದಾವೀದನ ಸಂತತಿಯವರಲ್ಲಿ ಒಬ್ಬರನ್ನು ಅವನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು, ಎಂದು ಆಣೆಯಿಟ್ಟು ದೇವರು ವಾಗ್ದಾನ ಮಾಡಿದ್ದನ್ನು ದಾವೀದನು ತಿಳಿದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವನು ಪ್ರವಾದಿಯಾಗಿದ್ದು - ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನೆಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದಾವೀದನು ಒಬ್ಬ ಪ್ರವಾದಿಯಾಗಿದ್ದನು ಮತ್ತು ‘ನಿನ್ನ ಕುಟುಂಬದ ಒಬ್ಬನನ್ನು ನಿನ್ನಂತೆಯೇ ರಾಜನನ್ನಾಗಿ ಮಾಡುವೆನು’ ಎಂದು ದೇವರು ಅವನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದು ಅವನಿಗೆ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ದಾವಿದ್ ಎಕ್ ಪ್ರವಾದಿ ಹೊತ್ತೊ, ದೆವಾನ್ ತೆಕಾ ತುಜ್ಯಾ ಘರಾನಾತ್ಲ್ಯಾ ಎಕ್ಲ್ಯಾಕ್ ತುಜ್ಯಾ ಸಾರ್ಕೊಚ್ ರಾಜಾ ಕರ್ತಾ ಮನುನ್ ಆನ್ ಥವ್ನ್ ಗೊಸ್ಟ್ ದಿಲ್ಲೆ ತೆಕಾ ಗೊತ್ತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:30
37 ತಿಳಿವುಗಳ ಹೋಲಿಕೆ  

“ಯೆಹೋವ ದೇವರ ಆತ್ಮರು ನನ್ನ ಮೂಲಕ ಮಾತನಾಡಿದರು; ಅವರ ನುಡಿ ನನ್ನ ಬಾಯಲ್ಲಿ ಇತ್ತು.


ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.


ನನ್ನ ಸುವಾರ್ತೆಯ ಸಾರೋಣಕ್ಕೆ ಅನುಸಾರವಾಗಿ ದಾವೀದನ ವಂಶದವರಾದ ಯೇಸು ಕ್ರಿಸ್ತರು ಸತ್ತವರೊಳಗಿಂದ ಎಬ್ಬಿಸಲಾದರೆಂದು ಜ್ಞಾಪಕಮಾಡಿಕೋ.


ಈ ಸುವಾರ್ತೆಯು ದೇವಪುತ್ರನ ವಿಷಯವಾದದ್ದು. ಯೇಸು ಮನುಷ್ಯತ್ವದ ಪ್ರಕಾರ ದಾವೀದನ ಸಂತಾನದವರೂ


ದಾವೀದನು ತಾನೇ ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದ್ದೇನೆಂದರೆ: “ ‘ಕರ್ತದೇವರು ನನ್ನ ಕರ್ತದೇವರಿಗೆ ಹೇಳಿದ್ದಾರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು.” ’


ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ಆದರೆ ಯೇಸು ದೇವರ ಆಣೆಯಿಂದಲೇ ಯಾಜಕರಾದರು. ಹೀಗೆ ದೇವರು ಹೇಳಿದ್ದೇನೆಂದರೆ: “ ಕರ್ತ ಆಗಿರುವ ನಾನು ಆಣೆಯಿಟ್ಟು ಹೇಳಿದ್ದೇನೆ. ನಾನು ಎಂದಿಗೂ ಮನಸ್ಸನ್ನು ಬದಲಾಯಿಸುವುದಿಲ್ಲ. ‘ನೀನು ಸದಾಕಾಲವೂ ಯಾಜಕನಾಗಿದ್ದೀ.’ ”


ದೇವರು ತಮ್ಮ ಮಾರ್ಪಡದ ಉದ್ದೇಶವನ್ನು ವಾಗ್ದಾನದ ಬಾಧ್ಯಸ್ಥರಿಗೆ ಇನ್ನೂ ಹೆಚ್ಚಾಗಿಯೇ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದರು.


ದೇವರು “ಈ ಹೊತ್ತೇ” ಎಂದು ಬೇರೊಂದು ದಿವಸವನ್ನು ಗೊತ್ತು ಮಾಡುತ್ತಾರೆ. ಈ ದಿನವನ್ನು ಕುರಿತೇ ಬಹುಕಾಲದ ನಂತರ ದಾವೀದನ ಮೂಲಕ ಮೊದಲೇ ಹೀಗೆ ಹೇಳಿದ್ದಾರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”


ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,


ಪುನಃ ಪ್ರವಾದಿ ಯೆಶಾಯನು ಹೇಳುವುದೇನೆಂದರೆ: “ಇಷಯನ ವಂಶದಿಂದ ಬೇರು ಒಂದು ಚಿಗುರುವುದು, ಜನಾಂಗಗಳನ್ನು ಆಳುವವರಾಗಿ ಅವರು ಉದಯಿಸುವರು. ಯೆಹೂದ್ಯರಲ್ಲದವರು ಆತನಲ್ಲಿ ನಿರೀಕ್ಷೆ ಇಡುವರು.”


“ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.


ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.


ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ, ಅವರ ಬಟ್ಟೆಗಳಿಗಾಗಿ ಸೈನಿಕರು ಚೀಟುಹಾಕಿ ಹಂಚಿಕೊಂಡರು


“ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ, ‘ಕರ್ತನು’ ಎಂದು ಕರೆದು,


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ಆದರೆ ಅವರು ತಮ್ಮ ದೇವರಾದ ಯೆಹೋವ ದೇವರಿಗೂ, ನಾನು ಅವರಿಗೋಸ್ಕರ ಎಬ್ಬಿಸುವ ಅವರ ಅರಸನಾದ ದಾವೀದನಿಗೂ ಸೇವೆಮಾಡುವರು.


ಗತಕಾಲದಲ್ಲಿ ನಮ್ಮ ಪಿತೃಗಳ ಸಂಗಡ ವಿವಿಧ ರೀತಿಯಲ್ಲಿಯೂ ಅನೇಕಬಾರಿ ಪ್ರವಾದಿಗಳ ಮುಖಾಂತರವೂ ಮಾತನಾಡಿದ ದೇವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು