Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:36 - ಕನ್ನಡ ಸಮಕಾಲಿಕ ಅನುವಾದ

36 “ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆದದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಒಡೆಯನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಆದ್ದರಿಂದ ಯೆಹೂದ್ಯರೆಲ್ಲರೂ ಇದನ್ನು ನಿಜವಾಗಿಯೂ ತಿಳಿದುಕೊಳ್ಳಬೇಕು. ದೇವರು ಯೇಸುವನ್ನು ಪ್ರಭುವನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆ. ನೀವು ಶಿಲುಬೆಗೇರಿಸಿದ ವ್ಯಕ್ತಿಯೇ ಆತನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತಸೆ ಹೊವ್ನ್ ತುಮಿ ಕುರ್ಸಾರ್ ಮಾರಲ್ಲ್ಯಾ ಮಾನ್ಸಾಕ್ ಜೆಜುಕುಚ್, ದೆವಾನ್ ಧನಿ ಅನಿ ಕ್ರಿಸ್ತ್ ಕರ್ಲ್ಯಾನ್ ಮನ್ತಲೆ ತುಮಿ ಇಸ್ರಾಯೆಲಾಚಿ ಸಗ್ಳಿ ಲೊಕಾ ಕಳ್ವುನ್ ಘೆವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:36
25 ತಿಳಿವುಗಳ ಹೋಲಿಕೆ  

ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು.


ಆಗ ಅವರು ತಮ್ಮ ಯೆಹೋವ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.


ಅದೇನೆಂದರೆ, ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕರು ಹುಟ್ಟಿದ್ದಾರೆ. ಅವರು ಯಾರೆಂದರೆ ಕರ್ತದೇವರು ಆಗಿರುವ ಕ್ರಿಸ್ತ.


“ ‘ಇಗೋ, ದಿನಗಳು ಬರಲಿವೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ಇಸ್ರಾಯೇಲಿನ ಮತ್ತು ಯೆಹೂದದ ಮನೆಯವರ ಸಂಗಡ ಹೇಳಿದ ಒಳ್ಳೆಯ ವಾಗ್ದಾನವನ್ನು ನೆರವೇರಿಸುವೆನು.


ಯೆಹೋವ ದೇವರು ಹೇಳುವುದನ್ನು ಕೇಳಿ: “ನಾನು ಇಸ್ರಾಯೇಲ್ ವಂಶದವರೊಂದಿಗೂ, ಯೆಹೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.


ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಲಗಳೇ, ಯೆಹೋವ ದೇವರ ವಾಕ್ಯವನ್ನು ನೀವು ಕೇಳಿರಿ.


“ಆದ್ದರಿಂದ ನೀನು ಇಸ್ರಾಯೇಲರ ಮನೆತನದವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡುತ್ತಿಲ್ಲ. ಆದರೆ ನೀವು ಇತರ ಜನಾಂಗಗಳ ನಡುವೆ ಅಪವಿತ್ರಪಡಿಸಿದ ನನ್ನ ಪರಿಶುದ್ಧ ನಾಮಕ್ಕಾಗಿ ಮಾಡುತ್ತೇನೆ.


ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳಿಗೆ ನಾಚಿಕೆಪಟ್ಟು ಲಜ್ಜೆಹೊಂದಿರಿ.


“ ‘ನೀವು ಪಟ್ಟಣದ ಸೊತ್ತನ್ನು ಕಾಣಿಕೆಯಾದ ಪರಿಶುದ್ಧಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು. ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವುದು.


ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕುಳಿತುಕೊಂಡಿರು.” ’


ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು