Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:39 - ಕನ್ನಡ ಸಮಕಾಲಿಕ ಅನುವಾದ

39 ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವವರೆಲ್ಲರಿಗೆ ಮಾಡೋಣವಾಗಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಈ ವಾಗ್ದಾನವನ್ನು ನಿಮಗೂ ನಿಮ್ಮ ಮಕ್ಕಳಿಗೂ ಬಹು ದೂರದಲ್ಲಿರುವ ಜನರಿಗೂ ಕೊಡಲಾಗಿದೆ. ನಮ್ಮ ದೇವರಾದ ಪ್ರಭುವು ತನ್ನ ಬಳಿಗೆ ಕರೆಯುವ ಪ್ರತಿಯೊಬ್ಬರಿಗೂ ಈ ವಾಗ್ದಾನವನ್ನು ಕೊಟ್ಟಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಹಿ ಗೊಸ್ಟ್ ತುಮ್ಕಾ ತುಮ್ಚ್ಯಾ ಪೊರಾ ಬಾಳಾಕ್ನಿ, ಅನಿ ಲೈ ಧುರ್ ಹೊತ್ತ್ಯಾ ಲೊಕಾಕ್ನಿ ದಿಲ್ಲೆ ಹಾಯ್. ಅಮ್ಚ್ಯಾ ದೆವಾ ಧನಿಯಾನ್ ಅಪ್ನಾಚ್ಯಾ ಜಗ್ಗೊಳ್ ಬಲ್ವಲ್ಲ್ಯಾ ಹರ್ ಎಕ್ಲ್ಯಾಕ್ಬಿ ಹಿ ಗೊಸ್ಟ್ ದಿಲ್ಲಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:39
41 ತಿಳಿವುಗಳ ಹೋಲಿಕೆ  

ಆದರೆ ದೇವರು ಯಾರನ್ನು ಮುಂದಾಗಿ ನೇಮಿಸಿದರೋ, ಅವರನ್ನು ಕರೆದರು; ಯಾರನ್ನು ಕರೆದರೋ, ಅವರನ್ನು ನೀತಿವಂತರೆಂದು ನಿರ್ಣಯಿಸಿದರು; ಯಾರನ್ನು ನೀತಿವಂತರೆಂದು ನಿರ್ಣಯಿಸಿದರೋ ಅವರನ್ನು ಮಹಿಮೆಪಡಿಸಿದರು.


ಏಕೆಂದರೆ ನಾನು ಬಾಯಾರಿದ ಭೂಮಿಯ ಮೇಲೆ ನೀರನ್ನು ಸುರಿಸುವೆನು. ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.


ಯೆಹೋವ ದೇವರ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು. ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಅನೇಕರಿಗೆ ಮುಕ್ತಿ ದೊರಕುವುದು. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.


ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ,


ಹೃದಯವನ್ನು ಬಲ್ಲ ದೇವರು, ನಮಗೆ ಪವಿತ್ರಾತ್ಮ ದೇವರನ್ನು ಕೊಟ್ಟಂತೆಯೇ ಯಹೂದ್ಯರಲ್ಲದವರಿಗೂ ದಯಪಾಲಿಸಿ, ಅವರ ಬಗ್ಗೆ ಸಾಕ್ಷಿಕೊಟ್ಟರು.


ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು.


ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ಶಕ್ತಿಯು ನಮಗೆ ಕೊಡಲಾಗಿದೆ.


ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.


ನಿನ್ನ ಮಕ್ಕಳೆಲ್ಲಾ ಯೆಹೋವ ದೇವರಿಂದಲೇ ಬೋಧನೆ ಪಡೆಯುವರು. ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರುವುದು.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.


ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.


ದೇವರು ಕೊಡುವ ವರಗಳನ್ನು, ಕರೆಗಳನ್ನು ಅವರು ಎಂದಿಗೂ ಹಿಂತೆಗೆದುಕೊಳ್ಳುವವರಲ್ಲ.


ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.


ಏಕೆಂದರೆ, ಅವಿಶ್ವಾಸಿಯಾದ ಗಂಡನು ವಿಶ್ವಾಸಿಯಾದ ತನ್ನ ಹೆಂಡತಿಯಿಂದ ಮತ್ತು ಅವಿಶ್ವಾಸಿಯಾದ ಹೆಂಡತಿಯು ವಿಶ್ವಾಸಿಯಾದ ತನ್ನ ಗಂಡನಿಂದ ದೇವಜನರೊಂದಿಗೆ ಸಂಬಂಧವುಳ್ಳವರಾಗಿದ್ದಾರೆ. ಹಾಗಲ್ಲದಿದ್ದರೆ, ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವರಿಗಾಗಿ ಪವಿತ್ರರಾಗಿದ್ದಾರೆ.


“ಆಮೇಲೆ ನಾನು, ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು.


ನಮ್ಮ ದೇವರು ನೀಡಿರುವ ಕರೆಯುವಿಕೆಗೆ ನಿಮ್ಮನ್ನು ಯೋಗ್ಯರೆಂದು ಎಣಿಸಿ, ಒಳಿತನ್ನು ಮಾಡಲು ನಿಮ್ಮ ಎಲ್ಲಾ ಇಷ್ಟಾರ್ಥವನ್ನೂ ವಿಶ್ವಾಸದಿಂದ ಆಗಿರುವ ನಿಮ್ಮ ಎಲ್ಲಾ ಕಾರ್ಯಗಳನ್ನೂ ದೇವರು ತಮ್ಮ ಶಕ್ತಿಯಿಂದ ಪರಿಪೂರ್ಣಗೊಳಿಸುವಂತೆ ನಾವು ಯಾವಾಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡುತ್ತೇವೆ.


ಇದಕ್ಕಾಗಿಯೇ ದೇವರು ಯೆಹೂದ್ಯರನ್ನು ಮಾತ್ರವೇ ಕರೆಯದೆ ಯೆಹೂದ್ಯರಲ್ಲದವರನ್ನು ಸಹ ಕರೆದಿದ್ದಾರಲ್ಲಾ?


ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.


ದೇವರು ಯೆಹೂದ್ಯರಲ್ಲದವರೊಳಗಿಂದ ತಮ್ಮ ಹೆಸರಿಗಾಗಿ ಜನರನ್ನು ಆರಿಸಿಕೊಳ್ಳಲು ಹೇಗೆ ದಯೆತೋರಿಸಿದರೆಂದು ಸೀಮೋನನು ಈಗಾಗಲೇ ನಮಗೆ ವಿವರಿಸಿದ್ದಾನೆ.


ಆದ್ದರಿಂದ ಸಭೆಯವರು ಅವರನ್ನು ಸಾಗಕಳುಹಿಸಲು, ಅವರು ಫೊಯಿನಿಕೆಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣ ಮಾಡುವಾಗ, ಯೆಹೂದ್ಯರಲ್ಲದವರ ಪರಿವರ್ತನೆಯನ್ನು ವಿವರವಾಗಿ ಅಲ್ಲಿಯವರೆಗೆ ತಿಳಿಸುತ್ತಾ ಸಹೋದರರೆಲ್ಲರಿಗೂ ಮಹಾಸಂತೋಷವನ್ನುಂಟುಮಾಡಿದರು.


ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು.


ಯೆಹೂದ್ಯರಲ್ಲದವರ ಮೇಲೆಯೂ ಪವಿತ್ರಾತ್ಮ ದೇವರು ವರವನ್ನು ಸುರಿಸಿದ್ದಕ್ಕೆ ಪೇತ್ರನೊಂದಿಗೆ ಸುನ್ನತಿಯಾದ ವಿಶ್ವಾಸಿಗಳು ಅತ್ಯಾಶ್ಚರ್ಯಪಟ್ಟರು.


ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.


ಆಗ ಪಶ್ಚಿಮದ ಕಡೆಯವರು ಯೆಹೋವ ದೇವರ ಹೆಸರಿಗೂ, ಸೂರ್ಯೋದಯದ ಕಡೆಯವರು ದೇವರ ಘನಕ್ಕೂ ಭಯಪಡುವರು. ವೈರಿಯು ಪ್ರಳಯದಂತೆ ಬರುವಾಗ, ಯೆಹೋವ ದೇವರ ಆತ್ಮವು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವರು.


ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಈ ಹೊತ್ತು ಇಲ್ಲಿ ನಮ್ಮೊಡನೆ ನಮ್ಮ ದೇವರಾದ ಯೆಹೋವ ದೇವರ ಮುಂದೆ ನಿಂತವರ ಸಂಗಡ, ಈ ಹೊತ್ತು ಇಲ್ಲಿ ನಮ್ಮೊಡನೆ ಇಲ್ಲದವರ ಸಂಗಡ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.


“ವಿಮೋಚಕನು ಚೀಯೋನಿಗೂ ಯಾಕೋಬಿನಲ್ಲಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಡುವವರಿಗಾಗಿಯೂ ಬರುವನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ವ್ಯರ್ಥವಾಗಿ ದುಡಿಯರು. ಕಷ್ಟವನ್ನು ಎದುರುಗೊಳ್ಳುವುದಿಲ್ಲ. ಏಕೆಂದರೆ ಅವರು ಯೆಹೋವ ದೇವರ ಆಶೀರ್ವಾದ ಹೊಂದಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವಾದ ಹೊಂದುವುದು.


ಇದಲ್ಲದೆ ನೀವು ಆಗ ಕ್ರಿಸ್ತನಿಲ್ಲದವರೂ ಇಸ್ರಾಯೇಲಿನ ಪೌರತ್ವದಿಂದ ಪ್ರತ್ಯೇಕಿಸಲಾದವರೂ ಒಡಂಬಡಿಕೆಯ ವಾಗ್ದಾನಕ್ಕೆ ವಿದೇಶಿಯವರೂ ಲೋಕದಲ್ಲಿ ದೇವರೊಂದಿಗೆ ಯಾವ ಸಂಬಂಧವಿಲ್ಲದೆ ನಿರೀಕ್ಷೆಯಿಲ್ಲದವರೂ ಆಗಿದ್ದೀರೆಂದು ಜ್ಞಾಪಕಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು