Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:4 - ಕನ್ನಡ ಸಮಕಾಲಿಕ ಅನುವಾದ

4 ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಅವರೆಲ್ಲರು ಪವಿತ್ರಾತ್ಮಭರಿತರಾಗಿ ಆ ಆತ್ಮ ತಮತಮಗೆ ನುಡಿಯುವ ಶಕ್ತಿಯನ್ನು ಕೊಡುವ ಪ್ರಕಾರ ಬೇರೆಬೇರೆ ಭಾಷೆಗಳಿಂದ ಮಾತಾಡುವದಕ್ಕೆ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ತೆನಿ ಸಗ್ಳೆ ಪವಿತ್ರ್ ಆತ್ಮ್ಯಾನ್ ಭರುನ್, ತೊ ಆತ್ಮೊ ತೆಂಕಾ ಕಸಿ ಬಳ್ ದಿತಾ ತಸೆ ದುಸ್ರ್ಯಾ ದುಸ್ರ್ಯಾ ಭಾಶಾತ್ನಿ ಬೊಲುಕ್ ಲಾಗ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:4
55 ತಿಳಿವುಗಳ ಹೋಲಿಕೆ  

ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವುವು: ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವರು, ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು.


ಶಿಷ್ಯರು ಬಹಳ ಸಂತೋಷದಿಂದಲೂ ಪವಿತ್ರಾತ್ಮ ದೇವರಿಂದಲೂ ತುಂಬಿದವರಾದರು.


ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,


ಒಬ್ಬನಿಗೆ ಅದ್ಭುತಕಾರ್ಯಗಳ ಶಕ್ತಿಯೂ ಒಬ್ಬನಿಗೆ ಪ್ರವಾದನೆಯೂ ಒಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವೂ ಒಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಶಕ್ತಿಯೂ ಮತ್ತೊಬ್ಬನಿಗೆ ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವೂ ಕೊಡಲಾಗುತ್ತದೆ.


ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಪೌಲನು ಅವರ ಮೇಲೆ ತನ್ನ ಕೈಗಳನ್ನಿಡಲು, ಅವರ ಮೇಲೆ ಪವಿತ್ರಾತ್ಮ ಬಂದರು. ಆಗ ಅವರು ಅನ್ಯಭಾಷೆಗಳಲ್ಲಿ ಮಾತನಾಡಿದರು ಹಾಗೂ ಪ್ರವಾದಿಸಿದರು.


ಏಕೆಂದರೆ ಅವರು ಅನ್ಯಭಾಷೆಗಳಲ್ಲಿ ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಿದ್ದುದನ್ನು ಅವರು ಕೇಳಿಸಿಕೊಂಡರು, ಆಗ ಪೇತ್ರನು,


ಆಮೇಲೆ ಅನನೀಯನು ಆ ಮನೆಗೆ ಹೋಗಿ ಒಳಗೆ ಪ್ರವೇಶಿಸಿದನು. ತನ್ನ ಕೈಗಳನ್ನು ಸೌಲನ ಮೇಲಿಟ್ಟು, “ಸಹೋದರ ಸೌಲನೇ, ನೀನು ಇಲ್ಲಿಗೆ ಬರುತ್ತಿದ್ದಾಗ ದಾರಿಯಲ್ಲಿ ನಿನಗೆ ದರ್ಶನಕೊಟ್ಟ ಕರ್ತ ಯೇಸು, ನಿನಗೆ ಪುನಃ ದೃಷ್ಟಿ ಬರುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದು ಹೇಳಲು,


ಆದರೆ ಪವಿತ್ರಾತ್ಮಭರಿತನಾದ ಸ್ತೆಫನನು ಪರಲೋಕದ ಕಡೆಗೆ ನೋಡಿ, ದೇವರ ಮಹಿಮೆಯನ್ನೂ ದೇವರ ಬಲಗಡೆಯಲ್ಲಿ ಯೇಸು ನಿಂತುಕೊಂಡಿರುವುದನ್ನೂ ಕಂಡನು.


ಏಕೆಂದರೆ ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದನು. ಆದರೆ ಇನ್ನು ಕೆಲವೇ ದಿನಗಳಲ್ಲಿ ಪವಿತ್ರಾತ್ಮ ದೇವರಿಂದ ನೀವು ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.


ಪ್ರೀತಿಯು ಎಂದಿಗೂ ಅಳಿದುಹೋಗುವುದಿಲ್ಲ, ಪ್ರವಾದನೆಗಳಾದರೋ ಇಲ್ಲದಂತಾಗುವುವು, ಅನ್ಯ ಭಾಷೆಗಳು ಗತಿಸಿ ಹೋಗುವುವು, ವಿದ್ಯೆಯೋ ಇಲ್ಲದಂತಾಗುವುವು.


ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ನನಗೆ ಪ್ರೀತಿಯಿಲ್ಲದಿದ್ದರೆ, ನಾದ ಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ.


ಆಗ ಪೌಲನೆಂದೂ ಕರೆಯಲಾಗುತ್ತಿದ್ದ ಸೌಲನು, ಪವಿತ್ರಾತ್ಮಭರಿತನಾಗಿ, ಎಲುಮನನ್ನು ನೇರವಾಗಿ ದೃಷ್ಟಿಸಿ,


ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು.


ಆ ಸಮಯದಲ್ಲಿ ನೀವು ಹೇಳಬೇಕಾದದ್ದನ್ನು ಪವಿತ್ರಾತ್ಮರು ನಿಮಗೆ ಕಲಿಸಿಕೊಡುವರು.”


ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಅನ್ಯಭಾಷೆಗಳನ್ನಾಡುತ್ತೇನೆಂದು ದೇವರಿಗೆ ಕೃತಜ್ಞತೆ ಮಾಡುತ್ತೇನೆ.


ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.


ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ, “ಜನರ ಅಧಿಕಾರಿಗಳೇ, ಜನರ ಹಿರಿಯರೇ!


ಯೇಸು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮರನ್ನು ಪಡೆದುಕೊಳ್ಳಿರಿ.


ಯೇಸು ಪವಿತ್ರಾತ್ಮಭರಿತರಾಗಿ, ಯೊರ್ದನ್ ನದಿ ತೀರದಿಂದ ಹಿಂದಿರುಗಿ ಬಂದು, ದೇವರಾತ್ಮರಿಂದ ಅರಣ್ಯದೊಳಕ್ಕೆ ಮಾರ್ಗದರ್ಶನ ಹೊಂದಿ,


ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ಈಗ ನಾನು ಅಪೇಕ್ಷಿಸಿದರೂ, ಅದಕ್ಕಿಂತ ಹೆಚ್ಚಾಗಿ ನೀವು ಪ್ರವಾದಿಸಬೇಕೆಂದು ಅಪೇಕ್ಷಿಸುತ್ತೇನೆ. ಅನ್ಯಭಾಷೆಗಳನ್ನಾಡುವವನು ಸಭೆಗೆ ಭಕ್ತಿವೃದ್ಧಿಯಾಗುವಂತೆ ಅದರ ಅರ್ಥವನ್ನು ಹೇಳದೆ ಹೋದರೆ, ಅವನಿಗಿಂತ ಪ್ರವಾದಿಸುವವನೇ ಶ್ರೇಷ್ಠನು.


“ನಾನು ಮಾತನಾಡಲು ಪ್ರಾರಂಭ ಮಾಡಿದಾಗ, ಪವಿತ್ರಾತ್ಮ ದೇವರು ಮೊದಲು ನಮ್ಮ ಮೇಲೆ ಇಳಿದಂತೆಯೇ ಅವರ ಮೇಲೆಯೂ ಇಳಿದು ಬಂದರು.


ಈ ಮಾತು ಇಡೀ ಸಮೂಹಕ್ಕೆ ಮೆಚ್ಚುಗೆಯಾಯಿತು. ಅವರು ಪೂರ್ಣನಂಬಿಕೆಯುಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೆಫನನ್ನು ಆರಿಸಿಕೊಂಡರು; ಅಲ್ಲದೆ ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮಾರ್ಗ ಅನುಸರಿಸುತ್ತಿದ್ದ ಅಂತಿಯೋಕ್ಯದ ನಿಕೊಲಾಯನನ್ನು ಆಯ್ಕೆಮಾಡಿದರು.


ಸಹೋದರರೇ, ನಿಮ್ಮಲ್ಲಿ ಪವಿತ್ರಾತ್ಮಭರಿತರೂ ಜ್ಞಾನವಂತರೂ ಎಂದು ಸಾಕ್ಷಿ ಹೊಂದಿರುವ ಏಳು ಜನರನ್ನು ಆಯ್ಕೆ ಮಾಡಿರಿ. ನಾವು ಅವರನ್ನು ಈ ಕಾರ್ಯಕ್ಕಾಗಿ ನೇಮಿಸುವೆವು.


ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.


ಮಾತ್ರವಲ್ಲದೆ, “ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ. ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ಮೇಲಿರುವ ನನ್ನ ಆತ್ಮನೂ, ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ, ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ, ನಿನ್ನ ಸಂತಾನದ ಬಾಯಿಂದಲೂ ತೊಲಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರೊಡನೆ ಮಾತನಾಡುತ್ತಾನೆ.


“ಯೆಹೋವ ದೇವರ ಆತ್ಮರು ನನ್ನ ಮೂಲಕ ಮಾತನಾಡಿದರು; ಅವರ ನುಡಿ ನನ್ನ ಬಾಯಲ್ಲಿ ಇತ್ತು.


ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.


ಮತ್ತು ತಿಳುವಳಿಕೆಗೆ ಅಪಾರವಾದ ಕ್ರಿಸ್ತನ ಪ್ರೀತಿಯನ್ನು ನೀವು ತಿಳಿದುಕೊಂಡು ದೇವರ ಸರ್ವಸಂಪೂರ್ಣತೆಯಿಂದ ತುಂಬಿದವರಾಗಲಿ ಎಂದು ಅವರನ್ನು ಬೇಡಿಕೊಳ್ಳುತ್ತೇನೆ.


ಬಾರ್ನಬನು ಸತ್ಪುರುಷನೂ ಪವಿತ್ರಾತ್ಮಭರಿತನೂ ಪೂರ್ಣನಂಬಿಕೆಯುಳ್ಳವನೂ ಆಗಿದ್ದನು. ಅಲ್ಲಿ ಅನೇಕರು ಕರ್ತ ಯೇಸುವಿನ ಕಡೆಗೆ ಬಂದರು.


ದೇವರ ಕೃಪೆಯಿಂದಲೂ ಶಕ್ತಿಯಿಂದಲೂ ತುಂಬಿದ್ದ ಸ್ತೆಫನನಿಂದ ಜನರಲ್ಲಿ ಮಹಾ ಅದ್ಭುತಗಳೂ ಸೂಚಕಕಾರ್ಯಗಳೂ ನಡೆದವು.


ಏಕೆಂದರೆ ನಿಮ್ಮ ವಿರೋಧಿಗಳು ಸಹ ಪ್ರತಿವಾದಿಸಲಾಗದ ಇಲ್ಲವೆ ವಿರೋಧಿಸಲಾಗದ ಮಾತನ್ನೂ ಜ್ಞಾನವನ್ನೂ ನಾನು ನಿಮಗೆ ಕೊಡುವೆನು.


ಆಗ ಮಗುವಿನ ತಂದೆ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು:


ಮರಿಯಳ ವಂದನೆಯನ್ನು ಕೇಳಿದಾಗ, ಎಲಿಸಬೇತಳ ಗರ್ಭದಲ್ಲಿದ್ದ ಕೂಸು ನಲಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮ ಭರಿತಳಾಗಿ


ಆದರೆ ನಿಶ್ಚಯವಾಗಿ ನಾನು ಯಾಕೋಬಿನ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವುದಕ್ಕೆ ಯೆಹೋವ ದೇವರ ಆತ್ಮದ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.


ಆದರೆ ಅವರು ನಿಮ್ಮನ್ನು ಬಂಧಿಸುವಾಗ, ನೀವು ಹೇಗೆ ಇಲ್ಲವೆ ಏನು ಮಾತನಾಡಬೇಕೆಂದು ಯೋಚಿಸಬೇಡಿರಿ. ನೀವು ಏನು ಮಾತನಾಡಬೇಕೆಂಬುದು ಆ ಗಳಿಗೆಯಲ್ಲೇ ನಿಮಗೆ ತಿಳಿಸಲಾಗುವುದು,


ಅವನು ಗಿಬೆಯದ ಗುಡ್ಡಕ್ಕೆ ಬಂದಾಗ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು. ಆಗ ದೇವರ ಆತ್ಮವು ಅವನ ಮೇಲೆ ಬಂದದ್ದರಿಂದ, ಅವರಲ್ಲಿದ್ದು ಪ್ರವಾದಿಸಿದನು.


ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.


ಸೆರೆಯಾಗಿರುವ ನಿನ್ನ ಜನರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು. ಅವರು ಕೇಳಿದರೂ ಕೇಳದಿದ್ದರೂ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಅವರಿಗೆ ಹೇಳು,” ಎಂದನು.


ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. “ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು.


ಏಲಿಯು ಅವಳಿಗೆ, “ಎಷ್ಟರವರೆಗೂ ಅಮಲೇರಿದವಳಾಗಿರುವೆ? ನಿನ್ನ ಬಳಿಯಿಂದ ನಿನ್ನ ದ್ರಾಕ್ಷಾರಸವನ್ನು ತೊರೆದುಬಿಡು,” ಎಂದನು.


ಅಗ್ನಿ ಜ್ವಾಲೆಗಳು ಬೆಂಕಿಯ ನಾಲಿಗೆಗಳಂತೆ ವಿಂಗಡವಾಗಿ ಬಂದು ಪ್ರತಿಯೊಬ್ಬರ ಮೇಲೆ ಇಳಿಯುವುದನ್ನು ಅವರು ಕಂಡರು.


ಆಗ ಪೇತ್ರ ಮತ್ತು ಯೋಹಾನರು ಅವರ ಮೇಲೆ ತಮ್ಮ ಕೈಗಳನ್ನಿಡಲು, ಅವರು ಪವಿತ್ರಾತ್ಮ ವರವನ್ನು ಹೊಂದಿದರು.


“ನೀರಿನಿಂದ ದೀಕ್ಷಾಸ್ನಾನವನ್ನು ಹೊಂದದಂತೆ ಯಾರಾದರೂ ಅಡ್ಡಿಮಾಡುವವರಿದ್ದಾರೋ? ನಾವು ಹೊಂದಿದಂತೆಯೇ ಇವರು ಸಹ ಪವಿತ್ರಾತ್ಮ ದೇವರನ್ನು ಹೊಂದಿಕೊಂಡಿದ್ದಾರಲ್ಲಾ?” ಎಂದು ಹೇಳಿದನು.


ಹೃದಯವನ್ನು ಬಲ್ಲ ದೇವರು, ನಮಗೆ ಪವಿತ್ರಾತ್ಮ ದೇವರನ್ನು ಕೊಟ್ಟಂತೆಯೇ ಯಹೂದ್ಯರಲ್ಲದವರಿಗೂ ದಯಪಾಲಿಸಿ, ಅವರ ಬಗ್ಗೆ ಸಾಕ್ಷಿಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು