Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:40 - ಕನ್ನಡ ಸಮಕಾಲಿಕ ಅನುವಾದ

40 ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, ಸಾಕ್ಷಿ ನುಡಿದು, “ಈ ಕೆಟ್ಟ ಸಂತತಿಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಬೇರೆ ಅನೇಕವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು - ವಕ್ರಬುದ್ಧಿಯುಳ್ಳ ಈ ಸಂತತಿಯವರಿಂದ ತಪ್ಪಿಸಿಕೊಳ್ಳಿರಿ ಎಂದು ಅವರನ್ನು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, “ಈ ದುಷ್ಟ ಸಂತತಿಯಿಂದ ತಪ್ಪಿಸಿಕೊಳ್ಳಿ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಪೆದ್ರುನ್ ಅನಿ ಲೈ ಬೊಲ್ನ್ಯಾನಿ ಉಶಾರ್ಕಿ ದಿವ್ನ್, ತೆಂಕಾ, “ತುಮಿ ತುಮ್ಕಾ ಹ್ಯಾ ಬುರ್ಶ್ಯಾ ಲೊಕಾಂಚ್ಯಾ ವರ್ತಿ ಯೆತಲ್ಯಾ ಶಿಕ್ಷಾತ್ನಾ ಹುರ್ವುನ್ ಘೆವಾ!” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:40
34 ತಿಳಿವುಗಳ ಹೋಲಿಕೆ  

ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, “ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,” ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.


ಇಸ್ರಾಯೇಲರು ತಮ್ಮನ್ನು ಕೆಡಿಸಿಕೊಂಡರು. ದೇವರ ಮಕ್ಕಳಿಗೆ ತಕ್ಕಂತೆ ನಡೆಯದವರು. ಅವರು ಮೂರ್ಖರಾದ ವಕ್ರ ಸಂತತಿ.


ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ.


ಆದ್ದರಿಂದ, ಯೆಹೂದ್ಯರಲ್ಲದವರು ವ್ಯರ್ಥ ಆಲೋಚನೆಯುಳ್ಳವರಾಗಿ ಬಾಳುವ ರೀತಿಯಲ್ಲಿ ನೀವು ಇನ್ನು ಮೇಲೆ ಬಾಳದಂತೆ, ಕರ್ತನಲ್ಲಿ ನಾನು ನಿಮಗೆ ಸಾಕ್ಷಿಕೊಟ್ಟು ಹೇಳುತ್ತೇನೆ.


ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”


ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.


ವ್ಯಭಿಚಾರಿಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ, ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಸಿಕ್ಕುವುದಿಲ್ಲ,” ಎಂದು ಹೇಳಿ, ಯೇಸು ಅವರನ್ನು ಬಿಟ್ಟು ಹೊರಟು ಹೋದರು.


ಸುನ್ನತಿ ಮಾಡಿಸಿಕೊಳ್ಳಲು ಬಯಸುವ ಪ್ರತಿಯೊಬ್ಬನೂ ನಿಯಮವನ್ನೆಲ್ಲಾ ಕೈಗೊಳ್ಳುವ ಹಂಗಿನಲ್ಲಿದ್ದಾನೆ ಎಂದು ಪುನಃ ದೃಢವಾಗಿ ಹೇಳುತ್ತೇನೆ.


ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.


“ಹಾವುಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆಯಿಂದ ಹೇಗೆ ತಪ್ಪಿಸಿಕೊಂಡೀರಿ?


ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಿಮಗೆ ನಂಬಿಗಸ್ತ ಆಗಿರುವ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಸಹಾಯದಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.


ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನನ್ನು ನಡೆಸಿದೆವು.


ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ,” ಎಂದರು.


ಯಾರಾದರೂ ವ್ಯಭಿಚಾರದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯವಾಗಿ ನಾಚಿಕೊಳ್ಳುವರೋ ಅವರ ವಿಷಯದಲ್ಲಿ ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿಕೊಳ್ಳುವೆನು,” ಎಂದು ಹೇಳಿದರು.


ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.


ಇದಲ್ಲದೆ ಯೇಸು ಮಾಡಿದ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನು ಒಂದೊಂದಾಗಿ ಬರೆಯುವುದಾದರೆ, ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಸಾಕಾಗುವುದಿಲ್ಲ ಎಂದು ನಾನು ನೆನಸುತ್ತೇನೆ.


ಅನಂತರ ಪೌಲನು ಮೇಲಂತಸ್ತಿಗೆ ಹೋಗಿ ವಿಶ್ವಾಸಿಗಳೊಂದಿಗೆ ರೊಟ್ಟಿ ಮುರಿದು ಊಟಮಾಡಿ, ಬೆಳಗಾಗುವವರೆಗೆ ಅವರೊಡನೆ ಮಾತನಾಡಿ, ಅಲ್ಲಿಂದ ಹೊರಟನು.


ಒಂದು ಕಿಟಿಕಿಯಲ್ಲಿ ಯೂತಿಖ ಎಂಬ ಹೆಸರಿನ ಒಬ್ಬ ಯುವಕನು ಕುಳಿತುಕೊಂಡಿದ್ದನು. ಪೌಲನು ಬಹಳ ಹೊತ್ತು ಬೋಧಿಸುತ್ತಲೇ ಇದ್ದುದರಿಂದ ಅವನಿಗೆ ಗಾಢನಿದ್ರೆ ಹತ್ತಿತು. ನಿದ್ರಿಸುತ್ತಿದ್ದ ಅವನು ಮೂರನೇ ಅಂತಸ್ತಿನಿಂದ ಕೆಳಕ್ಕೆ ಬಿದ್ದನು. ಅವನನ್ನು ಎತ್ತಿಕೊಂಡಾಗ ಅವನು ಸತ್ತೇ ಹೋಗಿದ್ದನು.


ಆ ಪ್ರದೇಶದಲ್ಲೆಲ್ಲಾ ಜನರಿಗೆ ಅನೇಕ ಪ್ರೋತ್ಸಾಹದ ಮಾತುಗಳನ್ನು ಹೇಳುತ್ತಾ ಪ್ರಯಾಣಮಾಡಿ ಗ್ರೀಸ್ ತಲುಪಿದನು.


ಯೂದ ಮತ್ತು ಸೀಲರು ಸ್ವತಃ ಪ್ರವಾದಿಗಳಾಗಿದ್ದುದರಿಂದ ಅಲ್ಲಿದ್ದ ವಿಶ್ವಾಸಿಗಳನ್ನು ಅನೇಕ ಬುದ್ಧಿವಾದಗಳಿಂದ ಬಲಪಡಿಸಿದರು.


ಜೀವಿಸುವವರಿಗೂ ಸತ್ತವರಿಗೂ ನ್ಯಾಯಾಧೀಶರಾಗಿ ದೇವರಿಂದ ನೇಮಕವಾದವರು ಯೇಸುವೇ ಎಂದು ನಾವು ಜನರಿಗೆ ಬೋಧಿಸಿ ಸಾಕ್ಷಿ ಕೊಡಬೇಕೆಂದೂ ಕ್ರಿಸ್ತ ಯೇಸು ನಮಗೆ ಆಜ್ಞಾಪಿಸಿದ್ದಾರೆ.


ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.


“ನಿಮ್ಮ ಮೂಢತ್ವವನ್ನು ಬಿಟ್ಟು ಬಾಳಿರಿ ಮತ್ತು ವಿವೇಕದ ಮಾರ್ಗದಲ್ಲಿ ಹೋಗು,” ಎಂದೂ ಕೂಗುತ್ತಾಳೆ.


“ನನ್ನ ಜನರೇ, ಅದರೊಳಗಿಂದ ಹೊರಡಿರಿ. ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ಯೆಹೋವ ದೇವರ ಕೋಪಕ್ಕೆ ತಪ್ಪಿಸಿರಿ.


ನನಗೆ ಐದು ಮಂದಿ ಸಹೋದರರಿದ್ದಾರೆ. ಅವರೂ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಲಾಜರನು ಅವರನ್ನು ಎಚ್ಚರಿಸಲಿ,’ ಎಂದನು.


ಸೈಪ್ರಸ್ ಎಂಬಲ್ಲಿ ಹುಟ್ಟಿದ ಒಬ್ಬ ಲೇವಿಯನು ಇದ್ದನು, ಅವನ ಹೆಸರು ಯೋಸೇಫ, ಅಪೊಸ್ತಲರು ಅವನನ್ನು “ಬಾರ್ನಬ” ಎಂದು ಕರೆದರು. ಬಾರ್ನಬ ಅಂದರೆ “ಆದರಣೆಯ ಪುತ್ರನು” ಎಂದು ಅರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು