Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:47 - ಕನ್ನಡ ಸಮಕಾಲಿಕ ಅನುವಾದ

47 ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ದೇವರನ್ನು ಕೊಂಡಾಡುವವರಾಗಿಯೂ ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ದಿನಾಲು ಅವರ ಮಂಡಲಿಗೆ ಸೇರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಅನಿ ದೆವಾಕ್ ಸ್ತುತಿ ಕರಿತ್, ಅನಿ ಸಗ್ಳ್ಯಾ ಲೊಕಾಕ್ನಿ ಮನಾನಿ ಸಗ್ಳೆ ಜಾನಾ ಮಜ್ಯಾ ಕರಿತ್. ಹರಿಎಕ್ ದಿಸ್ ಬಿ ಲೈ ದೆವಾಚಿ ರಾಕ್ವನ್ ಜೊಡುನ್ ಘೆಟಲ್ಲಿ ಲೊಕಾ ಹ್ಯಾ ತಾಂಡ್ಯಾತ್ ಧನಿ ಹಾನುನ್ ಮಿಳ್ವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:47
25 ತಿಳಿವುಗಳ ಹೋಲಿಕೆ  

ಹೀಗೆ ಸಭೆಗಳು ವಿಶ್ವಾಸದಲ್ಲಿ ಬಲಗೊಂಡು ಸಂಖ್ಯೆಯಲ್ಲಿ ಅನುದಿನ ಹೆಚ್ಚುತ್ತಾ ಬಂದವು.


ಶಿಲುಬೆಯ ಸಂದೇಶವು ವಿನಾಶದ ಮಾರ್ಗದಲ್ಲಿರುವವರಿಗೆ ಬುದ್ದಿಹೀನವಾಗಿದೆ. ರಕ್ಷಣೆ ಹೊಂದುತ್ತಿರುವ ನಮಗಾದರೋ, ಅದು ದೇವರ ಶಕ್ತಿಯಾಗಿದೆ.


ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.


ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.


ಈ ರೀತಿಯಲ್ಲಿ ಕ್ರಿಸ್ತನಿಗೆ ಸೇವೆಮಾಡುವವರು ದೇವರಿಗೆ ಮೆಚ್ಚುಗೆಯಾದವರೂ ಜನರಿಂದ ಅನುಮೋದನೆ ಹೊಂದಿದವರೂ ಆಗಿರುತ್ತಾರೆ.


ಬಾರ್ನಬನು ಸತ್ಪುರುಷನೂ ಪವಿತ್ರಾತ್ಮಭರಿತನೂ ಪೂರ್ಣನಂಬಿಕೆಯುಳ್ಳವನೂ ಆಗಿದ್ದನು. ಅಲ್ಲಿ ಅನೇಕರು ಕರ್ತ ಯೇಸುವಿನ ಕಡೆಗೆ ಬಂದರು.


ಯೆಹೂದ್ಯರಲ್ಲದವರು ಇದನ್ನು ಕೇಳಿದಾಗ, ಬಹಳ ಹರ್ಷಗೊಂಡು ಕರ್ತದೇವರ ವಾಕ್ಯವನ್ನು ಘನಪಡಿಸಿದರು. ನಿತ್ಯಜೀವಕ್ಕೆ ನೇಮಕರಾದ ಎಲ್ಲರೂ ವಿಶ್ವಾಸವನ್ನಿಟ್ಟರು.


ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು.


ಆದರೆ ದೇವರು ಯಾರನ್ನು ಮುಂದಾಗಿ ನೇಮಿಸಿದರೋ, ಅವರನ್ನು ಕರೆದರು; ಯಾರನ್ನು ಕರೆದರೋ, ಅವರನ್ನು ನೀತಿವಂತರೆಂದು ನಿರ್ಣಯಿಸಿದರು; ಯಾರನ್ನು ನೀತಿವಂತರೆಂದು ನಿರ್ಣಯಿಸಿದರೋ ಅವರನ್ನು ಮಹಿಮೆಪಡಿಸಿದರು.


ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆದು, ದೇವರ ಮೆಚ್ಚುಗೆ ಮತ್ತು ಮನುಷ್ಯರ ಮೆಚ್ಚುಗೆ ಹೆಚ್ಚಾಗಿ ಅವರಿಗೆ ದೊರೆಯಿತು.


ಅನಂತರ ನ್ಯಾಯಸಭೆಯವರು ಅವರನ್ನು ಬೆದರಿಸಿ ಕಳುಹಿಸಿಬಿಟ್ಟರು. ಅಲ್ಲಿ ಸಂಭವಿಸಿದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಾ ಇದ್ದುದರಿಂದ, ಪೇತ್ರ ಯೋಹಾನರನ್ನು ಹೇಗೆ ದಂಡಿಸಬೇಕೆಂಬುದನ್ನು ಅವರು ನಿರ್ಣಯಿಸಲಾರದೆ ಹೋದರು.


ಮಹಾಶಕ್ತಿಯಿಂದ ಅಪೊಸ್ತಲರು ಕರ್ತ ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಕೊಟ್ಟರು. ಅವರೆಲ್ಲರ ಮೇಲೆ ದೇವರ ಮಹಾಕೃಪೆಯಿತ್ತು.


ಜನರೆಲ್ಲರೂ ಯೇಸು ಹೇಳುವ ಒಂದೊಂದು ಮಾತಿಗೂ ಬಹಳ ಲಕ್ಷ್ಯಕೊಟ್ಟು ಯೇಸುವಿನ ಉಪದೇಶವನ್ನು ಕೇಳುತ್ತಿದ್ದುದರಿಂದ, ಅವರಿಗೆ ಏನು ಮಾಡಬೇಕೋ ತೋಚಲಿಲ್ಲ.


ಆದರೆ ಸಂದೇಶವನ್ನು ಕೇಳಿದವರಲ್ಲಿ ಅನೇಕರು ನಂಬಿದರು. ಅವರ ಸಂಖ್ಯೆ ಸುಮಾರು ಐದು ಸಾವಿರಕ್ಕೇರಿತು.


ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು.


ದೇವರ ವಾಕ್ಯವು ಅಭಿವೃದ್ಧಿಯಾಗುತ್ತಾ ಬಂತು. ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು. ಯಾಜಕರಲ್ಲಿಯೂ ಅನೇಕ ಜನರು ನಂಬಿಕೆಗೆ ವಿಧೇಯರಾದರು.


ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.


ಲುದ್ದ ಹಾಗೂ ಸಾರೋನಿನ ನಿವಾಸಿಗಳೆಲ್ಲರೂ ಅವನನ್ನು ಕಂಡು ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು.


ಕರ್ತ ಯೇಸುವಿನ ಹಸ್ತವು ಅವರೊಂದಿಗಿತ್ತು ಬಹಳಷ್ಟು ಜನರು ನಂಬಿ ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು.


ಇಕೋನ್ಯದಲ್ಲಿಯೂ ಪೌಲ ಮತ್ತು ಬಾರ್ನಬರು ವಾಡಿಕೆಯಂತೆ ಯೆಹೂದ್ಯರ ಸಭಾಮಂದಿರಕ್ಕೆ ಹೋದರು. ಅವರು ಅಲ್ಲಿ ಪರಿಣಾಮಕಾರಿಯಾಗಿ ಮಾತನಾಡಿದ್ದರಿಂದ ಬಹು ಸಂಖ್ಯೆಯಲ್ಲಿ ಯೆಹೂದ್ಯರೂ ಗ್ರೀಕರೂ ವಿಶ್ವಾಸವನ್ನಿಟ್ಟರು.


ಆ ಪಟ್ಟಣದಲ್ಲಿ ಪೌಲ, ಬಾರ್ನಬರು ಸುವಾರ್ತೆಯನ್ನು ಸಾರಿದರು. ಬಹುಜನರನ್ನು ಶಿಷ್ಯರನ್ನಾಗಿ ಮಾಡಿದರು. ಅನಂತರ ಅವರು ಲುಸ್ತ್ರ, ಇಕೋನ್ಯ ಮತ್ತು ಅಂತಿಯೋಕ್ಯಗಳಿಗೆ ಹಿಂದಿರುಗಿದರು.


ಆದ್ದರಿಂದ ಅವರಲ್ಲಿ ಅನೇಕರು ವಿಶ್ವಾಸ ಹೊಂದಿದರು. ಅನೇಕ ಗ್ರೀಕ್ ಪುರುಷರೂ ಪ್ರಮುಖ ಸ್ತ್ರೀಯರೂ ವಿಶ್ವಾಸವನ್ನಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು