Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:5 - ಕನ್ನಡ ಸಮಕಾಲಿಕ ಅನುವಾದ

5 ಆಗ ಜಗತ್ತಿನ ಪ್ರತಿಯೊಂದು ದೇಶದಿಂದಲೂ ಬಂದ ದೇವಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದೇ ಸಮಯದಲ್ಲಿ ವಿಶ್ವದ ಎಲ್ಲಾ ದೇಶಗಳಿಂದ ಧರ್ಮನಿಷ್ಠ ಯೆಹೂದ್ಯರು ಜೆರುಸಲೇಮಿಗೆ ಬಂದು ತಂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಕಾಶದ ಕೆಳಗಿರುವ ಎಲ್ಲಾ ದೇಶದವರೊಳಗಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇವಿುನಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬಹು ಧಾರ್ಮಿಕರಾದ ಅನೇಕ ಯೆಹೂದ್ಯರು ಆ ಸಮಯದಲ್ಲಿ ಜೆರುಸಲೇಮಿನಲ್ಲಿದ್ದರು. ಇವರಲ್ಲಿ ಪ್ರಪಂಚದ ಪ್ರತಿಯೊಂದು ದೇಶದಿಂದ ಬಂದ ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಲೈ ಭಕ್ತಿವಂತ್ ಹೊತ್ತಿ ಜುದೆವಾಂಚಿ ಲೊಕಾ ತ್ಯಾ ವೆಳಾರ್ ಜೆರುಜಲೆಮಾತ್ ಹೊತ್ತಿ, ತೆಂಚ್ಯಾತ್ ಜಗಾತ್ಲ್ಯಾ ಹರ್ ಎಕ್ ದೆಶ್ಯಾಕ್ನಾ ಯೆಲ್ಲಿ ಲೊಕಾಬಿ ಹೊತ್ತಿ, ತೊ ಆವಾಜ್ ಯೆಲ್ಲ್ಯಾ ತನ್ನಾ ಥೈ ಲೈ ಲೊಕಾ ಗೊಳಾ ಹೊಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:5
17 ತಿಳಿವುಗಳ ಹೋಲಿಕೆ  

ದೇವಭಕ್ತರು ಸ್ತೆಫನನ ಶವಸಂಸ್ಕಾರ ಮಾಡಿ, ಅವನಿಗಾಗಿ ಬಹಳ ಗೋಳಾಡಿದರು.


ಆಗ ಸಿಮೆಯೋನನೆಂಬ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಅವನು ನೀತಿವಂತನೂ ಭಕ್ತನೂ ಆಗಿದ್ದನು. ಅವನು ಇಸ್ರಾಯೇಲರನ್ನು ಸಂತೈಸುವ ಒಬ್ಬರ ಬರುವಿಕೆಗಾಗಿ ಕಾಯುತ್ತಿದ್ದನು. ಪವಿತ್ರಾತ್ಮ ದೇವರ ಪ್ರಸನ್ನತೆ ಅವನ ಮೇಲಿತ್ತು.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


“ಅನನೀಯ ಎಂಬ ಹೆಸರಿನವನೊಬ್ಬನು ನನ್ನ ಬಳಿ ಬಂದನು. ಅವನು ಮೋಶೆಯ ನಿಯಮಕ್ಕನುಗುಣವಾಗಿ ಭಕ್ತಿವಂತನೂ ಆ ಸ್ಥಳದ ಯೆಹೂದ್ಯರೆಲ್ಲರಿಂದ ಸಾಕ್ಷಿಹೊಂದಿದವನೂ ಆಗಿದ್ದನು.


ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.


ತನ್ನೊಂದಿಗೆ ಮಾತನಾಡಿದ ದೇವದೂತನು ಅದೃಶ್ಯವಾದ ಮೇಲೆ ಕೊರ್ನೇಲ್ಯನು ತನ್ನ ಇಬ್ಬರು ಸೇವಕರನ್ನು ಮತ್ತು ತನ್ನ ಪರಿಚಾರಕರಲ್ಲಿ ಭಕ್ತಿವಂತನಾದ ಒಬ್ಬ ಸಿಪಾಯಿಯನ್ನು ಕರೆದು,


ಅವನೂ ಅವನ ಕುಟುಂಬದವರು ಭಕ್ತಿವಂತರೂ ದೇವರಿಗೆ ಭಯಪಡುವವರೂ ಆಗಿದ್ದರು. ಅವನು ಕೊರತೆಯಲ್ಲಿರುವವರಿಗೆ ಧಾರಾಳವಾಗಿ ಕೊಡುತ್ತಿದ್ದನು. ಅವನು ಅನುದಿನವೂ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದನು.


ಅದರಂತೆ ಅವನು ಹೋಗುತ್ತಿದ್ದಾಗ, ಮಾರ್ಗದಲ್ಲಿ ಐಥಿಯೋಪ್ಯದ ರಾಣಿ ಕಂದಾಕೆಯ ಹಣಕಾಸಿನ ಮುಖ್ಯ ಅಧಿಕಾರಿಯಾಗಿದ್ದ ಕಂಚುಕಿಯನ್ನು ಭೇಟಿಯಾದನು. ಈ ಮನುಷ್ಯನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿದ್ದನು.


ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬದಂದು, ಅವರೆಲ್ಲರೂ ಒಂದೇ ಸ್ಥಳದಲ್ಲಿ ಒಂದಾಗಿ ಕೂಡಿ ಬಂದಿದ್ದರು.


ಹಬ್ಬದ ಆರಾಧನೆಗೆ ಗ್ರೀಕರಲ್ಲಿ ಕೆಲವರು ಬಂದಿದ್ದರು.


ಆಗ ಅವರಲ್ಲಿ ಒಬ್ಬನಾದ, ಕ್ಲೆಯೊಫ ಎಂಬುವನು ಯೇಸುವಿಗೆ, “ಇತ್ತೀಚೆಗೆ ಯೆರೂಸಲೇಮಿನೊಳಗೆ ನಡೆದಿರುವ ಘಟನೆಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನೇ ಆಗಿದ್ದೀಯಾ?” ಎಂದು ಕೇಳಿದನು.


ಏಕೆಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಪುತ್ರನಾದ ನಾನು ಬರುವ ದಿನದಲ್ಲಿ ಕಾಣಿಸಿಕೊಳ್ಳುವೆನು.


ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು.


ಯೆಹೋವ ದೇವರ ವಾಕ್ಯವು ಪುನಃ ನನಗೆ ಬಂದು ಹೇಳಿದ್ದೇನೆಂದರೆ,


“ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು. ಆಗ ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.


“ನೀವು ಬಿತ್ತಿದ ಹೊಲದಲ್ಲಿ ಪ್ರಥಮ ಫಲವು ದೊರೆತಾಗ ಸುಗ್ಗಿ ಹಬ್ಬವನ್ನು ಆಚರಿಸಬೇಕು. “ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ, ವರ್ಷದ ಕೊನೆಯಲ್ಲಿ ಫಲಸಂಗ್ರಹದ ಹಬ್ಬವನ್ನು ಆಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು