ಅಪೊಸ್ತಲರ ಕೃತ್ಯಗಳು 20:18 - ಕನ್ನಡ ಸಮಕಾಲಿಕ ಅನುವಾದ18 ಅವರು ಬಂದ ಮೇಲೆ, ಪೌಲನು ಅವರಿಗೆ ಹೀಗೆಂದನು: “ನಾನು ಏಷ್ಯಾ ಪ್ರಾಂತಕ್ಕೆ ಬಂದ ಪ್ರಥಮ ದಿನದಿಂದ ನಿಮ್ಮೊಂದಿಗಿದ್ದು ಪೂರ್ತಿ ಸಮಯ ಹೇಗೆ ಕಳೆದನೆಂಬುದನ್ನು ನೀವು ಅರಿತಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಬಂದಮೇಲೆ ಅವರಿಗೆ ಹೀಗೆಂದನು : “ನಾನು ಏಷ್ಯಪ್ರಾಂತ್ಯದಲ್ಲಿ ಕಾಲಿಟ್ಟ ದಿನ ಮೊದಲ್ಗೊಂಡು ಇಂದಿನವರೆಗೆ ನಿಮ್ಮ ಮಧ್ಯೆ ಹೇಗೆ ಬಾಳಿದೆನೆಂದು ನಿಮಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ - ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲದಲ್ಲಿಯೂ ಹೇಗೆ ನಡಕೊಂಡೆನೆಂಬದನ್ನು ನೀವೇ ಬಲ್ಲಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆ ಹಿರಿಯರು ಬಂದಾಗ ಪೌಲನು ಅವರಿಗೆ, “ನಾನು ಏಷ್ಯಾ ಪ್ರಾಂತ್ಯಕ್ಕೆ ಬಂದ ಮೊದಲನೆಯ ದಿನದಿಂದಲೂ ನೀವು ನನ್ನ ಜೀವಿತದ ಬಗ್ಗೆ ತಿಳಿದಿದ್ದೀರಿ. ನಾನು ನಿಮ್ಮೊಂದಿಗೆ ಇದ್ದ ಕಾಲದಲ್ಲೆಲ್ಲಾ ನಾನು ಯಾವ ರೀತಿಯಲ್ಲಿ ಜೀವಿಸಿದೆನೆಂಬುದು ನಿಮಗೆ ಗೊತ್ತಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಮಿಯಾ ಎಶ್ಯಾ ಸಿಮೆತ್ ಪಾಯ್ ಥವಲ್ಯಾ ಅದ್ದಿಚ್ಯಾ ದಿಸಾಕ್ನಾ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ಸಗ್ಳ್ಯಾ ಯೆಳಾರ್ಬಿ ಕಸೊ ರ್‍ಹಾಲೊ ಅನಿ ಕಸೊ ಎಳ್ ಕಳದ್ಲೊ ಮನ್ತಲೆ ತುಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |