Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:19 - ಕನ್ನಡ ಸಮಕಾಲಿಕ ಅನುವಾದ

19 ಯೆಹೂದ್ಯರ ಒಳಸಂಚುಗಳಿಂದ ನಾನು ಕಠಿಣ ಪರೀಕ್ಷೆಗಳಿಗೆ ಒಳಗಾಗಿದ್ದರೂ ಬಹಳ ದೀನತೆಯಿಂದಲೂ ಕಣ್ಣೀರಿನಿಂದಲೂ ಕರ್ತ ಯೇಸುವಿನ ಸೇವೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಯೆಹೂದ್ಯರ ಕುತಂತ್ರಗಳಿಂದ ನನಗೆ ಬಂದೊದಗಿದ ಸಂಕಷ್ಟಗಳಲ್ಲಿ ನಾನು ಅತಿ ನಮ್ರತೆಯಿಂದಲೂ ಕಣ್ಣೀರಿಡುತ್ತಲೂ ಪ್ರಭುವಿನ ಸೇವೆಮಾಡಿಕೊಂಡು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರ ಒಳ ಸಂಚುಗಳಿಂದ ಸಂಭವಿಸಿದ ಕಷ್ಟಗಳನ್ನು ಸಹಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೂದ್ಯರು ನನಗೆ ವಿರೋಧವಾಗಿ ಮಾಡಿದ ಒಳಸಂಚುಗಳಿಂದ ನಾನು ಬಹಳ ಕಷ್ಟಪಡಬೇಕಾಯಿತು. ಅನೇಕ ಸಲ ಕಣ್ಣೀರಿಡಬೇಕಾಯಿತು. ಆದರೆ ನಾನು ಯಾವಾಗಲೂ ಪ್ರಭುವಿನ ಸೇವೆ ಮಾಡಿದೆನೆಂಬುದು ನಿಮಗೆ ಗೊತ್ತಿದೆ. ನಾನು ನನ್ನ ಬಗ್ಗೆ ಚಿಂತಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಜುದೆವಾಂಚ್ಯಾ ಲೊಕಾನಿ ಮಾಕಾ ವಿರೊದ್ ಹೊವ್ನ್ ಕರಲ್ಲ್ಯಾ ಘುಟ್ಟಾನಿ ಡೊಳ್ಯಾತ್ನಿ ಪಾನಿ ಘಾಲುನ್ಗೆತ್ ಧನಿಯಾಚ್ಯಾ ಸೆವಕಾನ್ ಸಾರ್ಕೆ ಮಾಜೆ ಕಾಮ್ ಕರುನ್ಗೆತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:19
37 ತಿಳಿವುಗಳ ಹೋಲಿಕೆ  

ಕರ್ತ ಯೇಸುವಿನಿಂದ ಬಾಧ್ಯತೆಯನ್ನು ಬಹುಮಾನವಾಗಿ ಹೊಂದುವಿರೆಂದು ತಿಳಿದಿದ್ದೀರಲ್ಲಾ. ಏಕೆಂದರೆ ನೀವು ಕರ್ತ ಆಗಿರುವ ಕ್ರಿಸ್ತ ಯೇಸುವನ್ನೇ ಸೇವೆಮಾಡುವವರಾಗಿದ್ದೀರಿ.


ಏಕೆಂದರೆ, ನಿಮಗೆ ದುಃಖವಾಗಬೇಕೆಂದಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಮಹಾ ದುಃಖದಿಂದಲೂ ಬಹಳ ಕಣ್ಣೀರಿನಿಂದಲೂ ಹೃದಯದ ವೇದನೆಯಿಂದಲೂ ನಿಮಗೆ ಬರೆದೆನು.


ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ.


ಇಲ್ಲಿ ಮೂರು ತಿಂಗಳುಗಳ ಕಾಲ ಇದ್ದ ಮೇಲೆ, ಅವನು ಸಿರಿಯಕ್ಕೆ ಪ್ರಯಾಣ ಮಾಡಬೇಕೆಂದು ಯೋಚಿಸುತ್ತಿದ್ದಾಗ ಅವನಿಗೆ ವಿರೋಧವಾಗಿ ಯೆಹೂದ್ಯರು ಒಳಸಂಚು ಮಾಡಿದ್ದು ಅವನಿಗೆ ತಿಳಿದು ಬಂದದ್ದರಿಂದ ಮಕೆದೋನ್ಯ ಮಾರ್ಗವಾಗಿ ಹಿಂತಿರುಗಿ ಹೋಗಲು ನಿರ್ಣಯಿಸಿದನು.


ನಾವು ಮಕೆದೋನ್ಯಕ್ಕೆ ಬಂದಿದ್ದಾಗ ನಮ್ಮ ದೇಹಕ್ಕೆ ವಿಶ್ರಾಂತಿ ದೊರೆಯಲಿಲ್ಲ. ಎಲ್ಲಾ ವಿಧದಲ್ಲಿಯೂ ಒತ್ತಡಗಳು: ಹೊರಗೆ ಹೋರಾಟ, ಒಳಗೆ ಅಂಜಿಕೆ.


ನೀವು ಕೇಳದಿದ್ದರೆ, ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು, ಯೆಹೋವ ದೇವರ ಮಂದೆಯು ಸೆರೆಯಾಗಿ ಹೋದದ್ದರಿಂದ ಬಹಳವಾಗಿ ಅಳುವೆನು. ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ನನ್ನ ಪ್ರಿಯರೇ, ನಿಮ್ಮ ನಂಬಿಕೆಯು ವಿವಿಧ ಕಷ್ಟಗಳಿಗೆ ಗುರಿಯಾಗುವಾಗ ಅವುಗಳನ್ನು ಸಂತೋಷದಿಂದ ಎಣಿಸಿಕೊಳ್ಳಿರಿ.


ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ಬಾಳುತ್ತಿದ್ದಾರೆ. ಅವರ ವಿಷಯದಲ್ಲಿ ನಾನು ನಿಮಗೆ ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.


ನೀವು ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರವೇ ಸೇವೆ ಮಾಡುವಂತೆ, ಪೂರ್ಣಮನಸ್ಸಿನಿಂದ ಸೇವೆಮಾಡಿರಿ.


ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ.


ನಮ್ಮಿಂದಲೇ ಉಂಟಾಯಿತು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಯಾವ ಸಾಮರ್ಥ್ಯವೂ ಇಲ್ಲ. ನಮ್ಮ ಸಾಮರ್ಥ್ಯವು ದೇವರಿಂದಲೇ ಬರುತ್ತದೆ.


ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.


ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.


ದೇವಪುತ್ರನ ಸುವಾರ್ತೆಯನ್ನು ಸಾರುವುದರಿಂದ ದೇವರನ್ನೇ ನನ್ನ ಆತ್ಮದಲ್ಲಿ ಸೇವೆ ಮಾಡುವವನಾಗಿದ್ದೇನೆ. ಇದಕ್ಕೆ ದೇವರೇ ನನ್ನ ಸಾಕ್ಷಿ.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ.


ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು,


ಆದರೆ ಪೌಲನು ದೇವರ ವಾಕ್ಯವನ್ನು ಬೆರೋಯದಲ್ಲಿ ಬೋಧಿಸುತ್ತಿದ್ದಾನೆಂಬುದು ಥೆಸಲೋನಿಕದಲ್ಲಿದ್ದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು, ಜನಸಮೂಹವನ್ನು ಪ್ರಚೋದಿಸಿ ಗಲಭೆ ಎಬ್ಬಿಸಿದರು.


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


ತರುವಾಯ ಯೇಸು ಯೆರೂಸಲೇಮ ಪಟ್ಟಣವನ್ನೂ ಅದರ ಸ್ಥಿತಿಯನ್ನೂ ಕಂಡು, ಅದರ ಸಲುವಾಗಿ ಅತ್ತು,


ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು.


ನಿಮ್ಮ ನಿಯಮವನ್ನು ಕೈಗೊಳ್ಳದೇ ಇರುವಾಗ ನನ್ನ ಕಣ್ಣಿನಿಂದ ಕಣ್ಣೀರು ಧಾರೆಯಾಗಿ ಹರಿಯುತ್ತಿವೆ.


ಆದ್ದರಿಂದ, “ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು, ದೇವರ ಆಲಯದಲ್ಲಿ ಹಗಲಿರುಳೂ ದೇವರನ್ನು ಸೇವೆಮಾಡುವರು. ಸಿಂಹಾಸನದ ಮೇಲೆ ಕೂತಿದ್ದವರು ಅವರನ್ನು ಆವರಿಸಿ ಸಂರಕ್ಷಿಸಿದರು.


ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು, ನಿನ್ನನ್ನು ನೋಡಿ ಆನಂದಭರಿತನಾಗಬೇಕೆಂದು ಬಹಳವಾಗಿ ಹಂಬಲಿಸುತ್ತೇನೆ.


ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಬೀದಿಗಳಲ್ಲಿ ತಿರುಗಾಡುವ ಕೆಲವು ದುಷ್ಟವ್ಯಕ್ತಿಗಳನ್ನು ಕೂಡಿಸಿ ಪಟ್ಟಣದಲ್ಲಿ ಗಲಭೆ ಎಬ್ಬಿಸಿದರು. ಜನಸಮೂಹದ ಮುಂದೆ ಪೌಲ, ಸೀಲರನ್ನು ಎಳೆದು ತರುವಂತೆ ಅವರನ್ನು ಹುಡುಕುತ್ತಾ ಯಾಸೋನ ಎಂಬುವನ ಮನೆಯನ್ನು ಮುತ್ತಿದರು.


ಏಳು ದಿನಗಳ ಅವಧಿ ಮುಗಿಯುತ್ತಿದ್ದಾಗ, ಏಷ್ಯಾ ಪ್ರಾಂತದ ಕೆಲವು ಯೆಹೂದ್ಯ ಜನರು ದೇವಾಲಯದಲ್ಲಿ ಪೌಲನನ್ನು ಕಂಡರು. ಅವರು ಇಡೀ ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು