ಅಪೊಸ್ತಲರ ಕೃತ್ಯಗಳು 20:24 - ಕನ್ನಡ ಸಮಕಾಲಿಕ ಅನುವಾದ24 ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಕಾಯ್ ಬಿ ಹೊಂವ್ದಿತ್, ಮಿಯಾ ಮಾಜ್ಯಾ ಸ್ವತಾಚ್ಯಾ ಜಿವಾಚ್ಯಾ ವಿಶಯಾತ್ ಚಿಂತಾ ಕರಿನಾ ಮಾಕಾ ಧನಿಯಾ ಜೆಜುನ್ ದಿಲ್ಲಿ ಎಕುಚ್ ಗುರಿ ಹಾಯ್, ಮಾಜೆ ಪಳಾಪ್ ಮಿಯಾ ಪಳುನ್ ಸಾರುಚೆ, ತೆ ದೆವಾಚ್ಯಾ ಬರ್‍ಯಾ ಖಬ್ರೆಚ್ಯಾ ಕುರ್ಪೆಕ್ ಸಾಕ್ಷಿ ಹೊತಲ್ಲೆ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |