Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:31 - ಕನ್ನಡ ಸಮಕಾಲಿಕ ಅನುವಾದ

31 ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದಕಾರಣ ನಾನು ಕಣ್ಣೀರುಸುರಿಸುತ್ತಾ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿಹೇಳಿದೆನೆಂದು ನೀವು ಜ್ಞಾಪಕಮಾಡಿಕೊಂಡು ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದ್ದರಿಂದ ಎಚ್ಚರಿಕೆಯಿಂದಿರಿ! ನಾನು ಮೂರು ವರ್ಷಗಳ ಕಾಲ ನಿಮ್ಮೊಂದಿಗೆ ಇದ್ದೆನು. ಈ ಕಾಲಾವಧಿಯಲ್ಲಿ ನಾನು ನಿಮಗೆ ಹಗಲಿರುಳು ಉಪದೇಶಿಸುತ್ತಾ ನಿಮಗಾಗಿ ಕಣ್ಣೀರಿಡುತ್ತಾ ನಿಮ್ಮನ್ನು ಎಚ್ಚರಿಸಿದ್ದನ್ನು ಮರೆಯದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತೆಸೆ ಹೊವ್ನ್, ಮಿಯಾ ರಡುನ್ಗೆತ್ ತಿನ್ ವರ್ಸಾಚೊ ದಿಸ್ ತುಮ್ಚ್ಯಾತ್ಲ್ಯಾ ಹರ್ ಎಕ್ಲ್ಯಾಕ್ಬಿ ಶಿಕ್ವಲ್ಲೆ ಹುಶ್ಯಾರ್ಕಿನ್ ಯಾದ್ ಥವ್ನ್ ಘೆವಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:31
22 ತಿಳಿವುಗಳ ಹೋಲಿಕೆ  

ಯೆಹೂದ್ಯರ ಒಳಸಂಚುಗಳಿಂದ ನಾನು ಕಠಿಣ ಪರೀಕ್ಷೆಗಳಿಗೆ ಒಳಗಾಗಿದ್ದರೂ ಬಹಳ ದೀನತೆಯಿಂದಲೂ ಕಣ್ಣೀರಿನಿಂದಲೂ ಕರ್ತ ಯೇಸುವಿನ ಸೇವೆ ಮಾಡಿದೆನು.


ಇದು ಎರಡು ವರ್ಷಗಳ ಕಾಲ ಮುಂದುವರಿಯಿತು. ಇದರಿಂದ ಏಷ್ಯಾ ಪ್ರಾಂತದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ ಗ್ರೀಕರೂ ಕರ್ತ ಯೇಸುವಿನ ವಾಕ್ಯವನ್ನು ಕೇಳಿದರು.


ಪೌಲನು ಸಭಾಮಂದಿರದೊಳಗೆ ಪ್ರವೇಶಿಸಿದನು. ಅಲ್ಲಿ ಮೂರು ತಿಂಗಳುಗಳ ಕಾಲ, ಧೈರ್ಯವಾಗಿ ಬೋಧನೆ ಮಾಡಿದನು. ದೇವರ ರಾಜ್ಯದ ಬಗ್ಗೆ ಅವರೊಡನೆ ಮನವೊಲಿಸುವಂತೆ ಚರ್ಚಿಸಿದನು.


ನಿಮ್ಮ ನಾಯಕರಿಗೆ ವಿಧೇಯರಾಗಿದ್ದು, ಅವರಿಗೆ ಅಧೀನರಾಗಿರಿ. ಏಕೆಂದರೆ ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಮನನೊಂದವರಾಗದೆ ಸಂತೋಷದಿಂದ ಇದನ್ನು ಮಾಡುವವರಾಗಲಿ. ಏಕೆಂದರೆ ಅವರು ಮನನೊಂದವರಾಗಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ಈ ಕ್ರಿಸ್ತ ಯೇಸುವನ್ನೇ ನಾವು ಸಾರುವವರಾಗಿದ್ದೇವೆ; ಪ್ರತಿಯೊಬ್ಬರೂ ಕ್ರಿಸ್ತ ಯೇಸುವಿನಲ್ಲಿ ಪರಿಪಕ್ವತೆಯುಳ್ಳವರಾಗಿ ಸಮರ್ಪಿಸುವಂತೆ, ಪ್ರತಿಯೊಬ್ಬರನ್ನೂ ಎಚ್ಚರಿಸಿ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬರಿಗೂ ಬೋಧಿಸುತ್ತಿದ್ದೇವೆ.


ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು.


ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ,” ಎಂದರು.


ಆದರೆ ಜನರು ನಿದ್ರಿಸುತ್ತಿರುವಾಗ, ಅವನ ವೈರಿಯು ಬಂದು ಗೋಧಿಯ ನಡುವೆ ಕಳೆಯನ್ನು ಬಿತ್ತಿ ಹೊರಟುಹೋದನು.


“ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು.”


ನಾವು ಉಚಿತವಾಗಿ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರದೆಂದು ಹಗಲಿರುಳೂ ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದೆವು.


ಪ್ರಿಯರೇ, ಶಿಸ್ತು ಇಲ್ಲದವರನ್ನು ಎಚ್ಚರಿಸಿರಿ. ಮನಗುಂದಿದವರನ್ನು ಆದರಿಸಿರಿ. ಬಲಹೀನರಿಗೆ ಆಧಾರವಾಗಿರಿ. ಎಲ್ಲರೊಂದಿಗೂ ತಾಳ್ಮೆಯುಳ್ಳವರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ನಾನು ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ, ನನ್ನ ಪ್ರಿಯ ಮಕ್ಕಳೆಂದು ನಿಮಗೆ ಬುದ್ಧಿ ಹೇಳುತ್ತೇನಷ್ಟೆ.


“ಅನೇಕ ವರ್ಷಗಳ ನಂತರ ದಾನಧರ್ಮಗಳನ್ನೂ ಕಾಣಿಕೆಗಳನ್ನೂ ನನ್ನ ಸ್ವದೇಶದವರಿಗೆ ಕೊಡಲು ಬಂದೆನು.


ಅನಂತರ ಪೌಲನು ಮೇಲಂತಸ್ತಿಗೆ ಹೋಗಿ ವಿಶ್ವಾಸಿಗಳೊಂದಿಗೆ ರೊಟ್ಟಿ ಮುರಿದು ಊಟಮಾಡಿ, ಬೆಳಗಾಗುವವರೆಗೆ ಅವರೊಡನೆ ಮಾತನಾಡಿ, ಅಲ್ಲಿಂದ ಹೊರಟನು.


ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು.


ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


ಆದರೂ ನೀತಿವಂತನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ, ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”


ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ಬಾಳುತ್ತಿದ್ದಾರೆ. ಅವರ ವಿಷಯದಲ್ಲಿ ನಾನು ನಿಮಗೆ ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.


ನಾನು ನಿಮ್ಮ ಸಂಗಡ ಇರುವಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು