ಅಪೊಸ್ತಲರ ಕೃತ್ಯಗಳು 20:35 - ಕನ್ನಡ ಸಮಕಾಲಿಕ ಅನುವಾದ35 ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು - ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ’ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಸಗ್ಳ್ಯಾ ವಿಶಯಾಕ್ನಿ ಮಿಯಾಚ್ ತುಮ್ಕಾ ಉದಾರನ್ ದಾಕ್ವುನ್ ದಿಲಾ, ತುಮಿ ಬಿ ತಸೆಚ್ ರಾಬುನ್ ಬಳ್ ನಸಲ್ಯಾಕ್ನಿ ಮಜ್ಜತ್ ಕರುಚೆ ಅನಿ “ಘೆತಲ್ಯಾಚ್ಯಾಕಿಂತಾ ದಿತಲ್ಯಾತ್ ಲೈ ಆಶಿರ್ವಾದ್ ಹಾಯ್” ಮನುನ್ ಧನಿಯಾ ಜೆಜುನ್ ಸಾಂಗಲಿ ಗೊಸ್ಟ್ ಯಾದ್ ಥವ್ನ್ ಘೆವಾ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |