ಅಪೊಸ್ತಲರ ಕೃತ್ಯಗಳು 21:11 - ಕನ್ನಡ ಸಮಕಾಲಿಕ ಅನುವಾದ11 ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳಿಗೆ ಅದನ್ನು ಕಟ್ಟಿಕೊಂಡು, “ಪವಿತ್ರಾತ್ಮರು ಇಂತೆನ್ನುತ್ತಾರೆ, ‘ಈ ನಡುಪಟ್ಟಿ ಯಾರದೋ ಆ ಮನುಷ್ಯನನ್ನು ಯೆರೂಸಲೇಮಿನ ಯೆಹೂದ್ಯರು ಈ ರೀತಿಯಲ್ಲಿ ಬಂಧಿಸಿ, ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು,’ ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವನು ಪೌಲನ ಸೊಂಟಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳನ್ನು ಬಿಗಿದುಕೊಂಡು, “ಪವಿತ್ರಾತ್ಮ ಹೀಗೆನ್ನುತ್ತಾರೆ: ‘ಈ ಸೊಂಟಪಟ್ಟಿಯು ಯಾರದೋ ಅವನನ್ನು ಜೆರುಸಲೇಮಿನಲ್ಲಿ ಯೆಹೂದ್ಯರು ಹೀಗೆಯೇ ಕಟ್ಟಿ, ಅನ್ಯಧರ್ಮೀಯರ ವಶಕ್ಕೆ ಒಪ್ಪಿಸುವರು,’ “ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಪೌಲನ ನಡುಕಟ್ಟನ್ನು ತೆಗೆದು ತನ್ನ ಕೈಕಾಲುಗಳನ್ನು ಕಟ್ಟಿಕೊಂಡು - ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇವಿುನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿಕೊಡುವರು, ಹೀಗೆ ಪವಿತ್ರಾತ್ಮನು ಹೇಳುತ್ತಾನೆಂಬದಾಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ಅದರಿಂದ ತನ್ನ ಕೈಕಾಲುಗಳನ್ನು ಕಟ್ಟಿಕೊಂಡು, “ಪವಿತ್ರಾತ್ಮನು ನನಗೆ ಹೇಳುವುದೇನೆಂದರೆ, ‘ಈ ನಡುಪಟ್ಟಿಯನ್ನು ಕಟ್ಟಿಕೊಳ್ಳುವ ವ್ಯಕ್ತಿಯನ್ನು ಜೆರುಸಲೇಮಿನ ಯೆಹೂದ್ಯರು ಇದೇ ರೀತಿ ಕಟ್ಟಿಹಾಕುವರು. ಬಳಿಕ ಅವರು ಅವನನ್ನು ಯೆಹೂದ್ಯರಲ್ಲದ ಜನರಿಗೆ ಒಪ್ಪಿಸಿಕೊಡುವರು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತೆನಿ ಅಮ್ಚ್ಯಾ ಜಗ್ಗೊಳ್ ಯೆವ್ನ್ , ಪಾವ್ಲುಚೊ ಖಬ್ರೆಚೊ ಪಟ್ಟೊ ಕಾಡುನ್ ಘೆವ್ನ್ ಅಪ್ಲಿ ಹಾತಾ ಪಾಯಾ ಭಾಂದುನ್ ಘೆವ್ನ್ ಹ್ಯೊ ಕಂಬ್ರೆಚೊ ಪಟ್ಟೊ ಕೊನಾಚೊ, ತ್ಯಾ ಮಾನ್ಸಾಕ್ ಜೆರುಜಲೆಮಾತ್ಲಿ ಜುದೆವಾಂಚಿ ಲೊಕಾ ಅಶೆ ಬಾಂಧುನ್ ಘಾಲ್ತಾತ್, ಅನಿ ತೆನಿ ತೆಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಹಾತಿತ್ ಒಪ್ಸುನ್ ದಿತ್ಯಾತ್, ಮನುನ್ ಪವಿತ್ರ್ ಆತ್ಮೊ ಸಾಂಗುಲ್ಲಾ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |