Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:13 - ಕನ್ನಡ ಸಮಕಾಲಿಕ ಅನುವಾದ

13 ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ಪೌಲನು - ನೀವು ಅತ್ತತ್ತು ಯಾಕೆ ನನ್ನನ್ನು ಎದೆ ಒಡಿಸುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿವಿುತ್ತವಾಗಿ ಯೆರೂಸಲೇವಿುನಲ್ಲಿ ಬೇಡೀಹಾಕಿಸಿಕೊಳ್ಳುವದಕ್ಕೆ ಮಾತ್ರವಲ್ಲದೆ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಪೌಲನು, “ನೀವು ಯಾಕೆ ಅಳುತ್ತಿರುವಿರಿ? ನೀವು ನನಗೆ ಬಹು ದುಃಖವನ್ನು ಯಾಕೆ ಉಂಟು ಮಾಡುತ್ತಿದ್ದೀರಿ? ನಾನು ಜೆರುಸಲೇಮಿನಲ್ಲಿ ಬಂಧಿಸಲ್ಪಡುವುದಕ್ಕಲ್ಲದೆ ಪ್ರಭು ಯೇಸುವಿನ ಹೆಸರಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಪಾವ್ಲುನ್ ತುಮಿ ಕಶ್ಯಾಕ್ ರಡುನ್ಗೆತ್ ಮಾಜೆ ಹಿರ್‍ದೆ ಫುಟಿ ಸಾರ್ಕೆ ಕರುಲ್ಲ್ಯಾಸಿ? ಮಿಯಾ ಜೆರುಜಲೆಮಾತ್ ಬಂಧಿಹೊವ್ಕ್ ಥವ್ಡೆಚ್ ನ್ಹಯ್ ಧನಿಯಾ ಜೆಜುಚ್ಯಾ ನಾವಾಸಾಟಿ ಮರುಕ್ಬಿ ತಯಾರ್ ಹಾಂವ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:13
25 ತಿಳಿವುಗಳ ಹೋಲಿಕೆ  

ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು.


ಏಕೆಂದರೆ ನಾನು ಈಗಲೇ ಪಾನ ಅರ್ಪಣೆಯಾಗಿ ಇದ್ದೇನೆ. ನಾನು ಹೊರಟುಹೋಗಬೇಕಾದ ಸಮಯವು ಹತ್ತಿರ ಬಂದಿದೆ.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ನನಗೆ ಸ್ಪಷ್ಟ ಪಡಿಸಿದ ಪ್ರಕಾರ, ಈ ನನ್ನ ದೇಹವೆಂಬ ಗುಡಾರವನ್ನು ತೆಗೆದುಹಾಕುವ ಕಾಲ ಬೇಗನೆ ಬರುತ್ತದೆಂದು ನಾನು ಬಲ್ಲೆನು.


ಅವರೆಲ್ಲರೂ ಪೌಲನ ಕೊರಳನ್ನು ಅಪ್ಪಿಕೊಂಡು ಕಣ್ಣೀರಿಡುತ್ತಾ ಅವನಿಗೆ ಮುದ್ದಿಟ್ಟರು.


ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು.


ನೀನು ನನ್ನ ವಾಕ್ಯವನ್ನು ಸಹನೆಯಿಂದ ಕಾಪಾಡಿಕೊಂಡಿದ್ದರಿಂದ, ಭೂನಿವಾಸಿಗಳನ್ನು ಪರೀಕ್ಷಿಸಲು ಇಡೀ ಲೋಕದಲ್ಲೆಲ್ಲಾ ಬರಲಿರುವ ಶೋಧನೆಯ ಸಮಯದಲ್ಲಿ ನಾನು ಸಹ ನಿನ್ನನ್ನು ಸುರಕ್ಷಿತವಾಗಿಡುವೆನು.


ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು, ನಿನ್ನನ್ನು ನೋಡಿ ಆನಂದಭರಿತನಾಗಬೇಕೆಂದು ಬಹಳವಾಗಿ ಹಂಬಲಿಸುತ್ತೇನೆ.


ಸಹೋದರರೇ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನನಗೆ ನಿಮ್ಮ ಬಗ್ಗೆ ನಿಶ್ಚಯವಾಗಿರುವ ಹೆಮ್ಮೆಯಿಂದ ನಾನು ದಿನದಿನವು ಸಾಯುತ್ತಲಿದ್ದೇನೆ.


ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು.


ಏಕೆಂದರೆ ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮಗೆ ಮುಟ್ಟಿತೆಂದು ತಿಳಿದು ತುಂಬಾ ವ್ಯಸನಪಡುತ್ತಿದ್ದಾನೆ.


ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು, “ನೀನು ನಿದ್ರೆ ಮಾಡುವುದೇಕೆ? ಎದ್ದು ನಿನ್ನ ದೇವರನ್ನು ಪ್ರಾರ್ಥಿಸು. ಒಂದು ವೇಳೆ ನಿನ್ನ ದೇವರು ನಮ್ಮ ಮೇಲೆ ಲಕ್ಷ್ಯವಿಟ್ಟು, ನಾವು ನಾಶವಾಗದಂತೆ ಕಾಪಾಡಿಯಾರು!” ಎಂದನು.


“ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಈ ಗಾದೆಯನ್ನು ಉಲ್ಲೇಖಿಸುವುದರ ಅರ್ಥವೇನು: “ ‘ಪಿತೃಗಳು ಹುಳಿದ್ರಾಕ್ಷಿಗಳನ್ನು ತಿಂದರು, ಮಕ್ಕಳ ಹಲ್ಲು ಚಳಿತು ಹೋಯಿತು.’


ನೀವು ನನ್ನ ಪ್ರಜೆಯನ್ನು ಹೊಡೆದು, ಚೂರುಗಳನ್ನಾಗಿ ಮಾಡಿ, ಬಡವರ ಮುಖಗಳನ್ನು ಹಿಂಡುವುದರ ಅರ್ಥವೇನು?” ಎಂದು ಸರ್ವಶಕ್ತ ದೇವರಾದ ಯೆಹೋವ ದೇವರು ವಾದಿಸುತ್ತಾರೆ.


ಆಗ ಸಮುಯೇಲನು ಅವನಿಗೆ, “ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು?” ಎಂದನು.


ಆಗ ಅವಳ ಗಂಡ ಎಲ್ಕಾನನು ಅವಳಿಗೆ, “ಹನ್ನಳೇ, ಏಕೆ ಅಳುತ್ತೀ? ಏಕೆ ಊಟಮಾಡದೆ ಇದ್ದೀ? ನಿನ್ನ ಮನ ಏಕೆ ಕುಂದಿದೆ? ಹತ್ತು ಮಂದಿ ಪುತ್ರರಿಗಿಂತ ನಾನು ನಿನಗೆ ಹೆಚ್ಚಲ್ಲವೆ?” ಎಂದನು.


ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಸಂಕೋಲೆಗಳಿಂದ ಕಟ್ಟಿಸಿ, ಬಾಬಿಲೋನಿಗೆ ಒಯ್ಯುವ ಯೆರೂಸಲೇಮಿನ ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತೆಗೆದುಕೊಂಡುಹೋಗಿ, ರಾಮದಿಂದ ಬಿಟ್ಟು ಕಳುಹಿಸಿದ ಮೇಲೆ, ಯೆರೆಮೀಯನಿಗೆ ಯೆಹೋವ ದೇವರಿಂದ ವಾಕ್ಯವು ಬಂದಿತು.


ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು