Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:19 - ಕನ್ನಡ ಸಮಕಾಲಿಕ ಅನುವಾದ

19 ಪೌಲನು ಅವರನ್ನು ವಂದಿಸಿ, ತನ್ನ ಸೇವೆಯ ಮೂಲಕ ದೇವರು ಯೆಹೂದ್ಯರಲ್ಲದವರ ಮಧ್ಯದಲ್ಲಿ ಮಾಡಿದ ಕಾರ್ಯಗಳನ್ನು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಪೌಲನು ಅವರಿಗೆ ನಮಸ್ಕರಿಸಿ ತನ್ನ ಸೇವೆಯ ಮೂಲಕ ದೇವರು ಯೆಹೂದ್ಯೇತರರ ಮಧ್ಯೆ ಮಾಡಿದ ಮಹತ್ಕಾರ್ಯಗಳನ್ನು ಒಂದೊಂದಾಗಿ ವರದಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪೌಲನು ಅವರೆಲ್ಲರನ್ನು ವಂದಿಸಿದನು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ಅನೇಕ ಕಾರ್ಯಗಳನ್ನು ಮಾಡುವುದಕ್ಕಾಗಿ ದೇವರು ತನ್ನನ್ನು ಉಪಯೋಗಿಸಿಕೊಂಡ ಬಗೆಯನ್ನೂ ತನ್ನ ಮೂಲಕವಾಗಿ ದೇವರು ಮಾಡಿದ ಎಲ್ಲಾ ಕಾರ್ಯಗಳ ಕುರಿತಾಗಿಯೂ ಅವನು ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಪಾವ್ಲುನ್ ತೆಂಕಾ ನಮಸ್ಕಾರ್ ಕರುನ್ಗೆತ್, ದೆವಾನ್ ಕರಲಿ ಸಗ್ಳಿ ಕಾಮಾಬಿ ಜುದೆವ್ ನ್ಹಯ್ ಹೊಲ್ಲ್ಯಾ ಲೊಕಾಂಚ್ಯಾ ಮದ್ದಿ ಸಾಂಗುನ್ಗೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:19
13 ತಿಳಿವುಗಳ ಹೋಲಿಕೆ  

ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು.


ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದು ಈ ಸೇವೆಯಲ್ಲಿ ಪಾಲುಗಾರನಾಗಿದ್ದನು.”


ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ.


ನಾನು ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ, ಮಹತ್ಕಾರ್ಯಗಳನ್ನೂ ನಡೆಸುವುದರಲ್ಲಿ ಸರ್ವ ಸಹನೆಯಲ್ಲಿಯೂ ಸತ್ಯ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳನ್ನು ನಿಮ್ಮ ನಡುವೆ ತೋರಿಸಿದೆನು.


ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ಇದಕ್ಕೆ ಜನರು ಮೌನವಾಗಿದ್ದು, ಯೆಹೂದ್ಯರಲ್ಲದವರ ಮಧ್ಯದಲ್ಲಿ ದೇವರು ತಮ್ಮ ಮೂಲಕ ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕುರಿತು ಬಾರ್ನಬ ಮತ್ತು ಪೌಲ ಹೇಳುವುದನ್ನು ಕೇಳಿಸಿಕೊಂಡರು.


ಅವರು ಯೆರೂಸಲೇಮನ್ನು ತಲುಪಿದಾಗ, ಸಭೆಯವರು, ಅಪೊಸ್ತಲರು ಹಾಗೂ ಹಿರಿಯರು ಅವರನ್ನು ಸ್ವಾಗತಿಸಿದರು. ದೇವರು ತಮ್ಮ ಮುಖಾಂತರವಾಗಿ ಮಾಡಿದ್ದನ್ನು ಅವರು ತಿಳಿಸಿದರು.


ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ, ‘ಬೋಧಕರೇ,’ ಎಂದು ಕರೆಯಿಸಿಕೊಳ್ಳಲು ಅವರು ಇಚ್ಛಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು