Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:3 - ಕನ್ನಡ ಸಮಕಾಲಿಕ ಅನುವಾದ

3 ಸೈಪ್ರಸ್ ಹತ್ತಿರ ಬಂದು ಅದರ ದಕ್ಷಿಣಕ್ಕೆ ಪ್ರಯಾಣಮಾಡಿ ಸಿರಿಯಕ್ಕೆ ಹೋದೆವು. ನಮ್ಮ ನೌಕೆಯಲ್ಲಿದ್ದ ಸರಕುಗಳನ್ನು ಇಳಿಸಬೇಕಾಗಿದ್ದ ಟೈರ್ ಎಂಬಲ್ಲಿ ಬಂದು ಇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸೈಪ್ರಸನ್ನು ಸಮೀಪಿಸಿದಾಗ ಅದನ್ನು ಎಡಕ್ಕೆ ಬಿಟ್ಟು ಸಿರಿಯ ದೇಶದ ಕಡೆಗೆ ಸಾಗಿ, ಟೈರ್ ಎಂಬಲ್ಲಿ ಬಂದು ಇಳಿದೆವು. ಇಲ್ಲಿ ಹಡಗಿನ ಸರಕನ್ನು ಇಳಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮುಂದೆ ಕುಪ್ರದ್ವೀಪವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್‍ಪಟ್ಟಣಕ್ಕೆ ಬಂದು ಇಳಿದೆವು. ಯಾಕಂದರೆ ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು. ಅದು ನಮ್ಮ ಉತ್ತರದಿಕ್ಕಿನಲ್ಲಿ ಕಾಣುತ್ತಿತ್ತು. ಆದರೆ ನಾವು ಹಡಗನ್ನು ಅಲ್ಲಿ ನಿಲ್ಲಿಸದೆ ಸಿರಿಯ ದೇಶಕ್ಕೆ ಪ್ರಯಾಣ ಮಾಡಿ ಟೈರ್ ಪಟ್ಟಣದಲ್ಲಿ ಹಡಗನ್ನು ನಿಲ್ಲಿಸಿದೆವು. ಯಾಕೆಂದರೆ ಹಡಗಿನಿಂದ ಸರಕನ್ನು ಇಳಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಮಿ ಸೈಪ್ರಸ್ ದ್ವಿಪಾಕ್ ಬಗುನ್ ಢಾವ್ಯಾಭಾಜುಕ್ ಸೊಡುನ್ ಸಿರಿಯಾ ದೆಶ್ಯಾಕ್ಡೆ ಜಾವ್ನ್, ತಿರ್ ಶಾರಾತ್ ಢೊನ್ ಇಬೆಕರ್ಲ್ಯಾಂವ್, ಕಶ್ಯಾಕ್ ಮಟ್ಲ್ಯಾರ್, ಥೈ ಢೊನಾತ್ನಾ ಸಾಮಾನ್ ಉತರ್ತಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:3
22 ತಿಳಿವುಗಳ ಹೋಲಿಕೆ  

ಅಲ್ಲಿಂದ ಹೊರಟು, ಎದುರುಗಾಳಿ ಬೀಸುತ್ತಿದ್ದದರಿಂದ ನಾವು ಸಮುದ್ರ ಪ್ರಯಾಣಮಾಡಿ ಸೈಪ್ರಸ್ ದ್ವೀಪ ಸಮೀಪವಾಗಿ,


ಕೈಸರೈಯದಿಂದ ಕೆಲವು ಶಿಷ್ಯರು ನಮ್ಮೊಂದಿಗೆ ಬಂದು, ಮ್ನಾಸೋನ ಎಂಬುವನ ಮನೆಗೆ ನಾವು ಇಳಿದುಕೊಳ್ಳುವಂತೆ ಕರೆದುಕೊಂಡು ಹೋದರು. ಅವನು ಸೈಪ್ರಸ್ ದಿಂದ ಬಂದ ಪ್ರಥಮ ಶಿಷ್ಯರಲ್ಲಿ ಒಬ್ಬನಾಗಿದ್ದನು.


ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು.


ಸೈಪ್ರಸ್ ಎಂಬಲ್ಲಿ ಹುಟ್ಟಿದ ಒಬ್ಬ ಲೇವಿಯನು ಇದ್ದನು, ಅವನ ಹೆಸರು ಯೋಸೇಫ, ಅಪೊಸ್ತಲರು ಅವನನ್ನು “ಬಾರ್ನಬ” ಎಂದು ಕರೆದರು. ಬಾರ್ನಬ ಅಂದರೆ “ಆದರಣೆಯ ಪುತ್ರನು” ಎಂದು ಅರ್ಥ.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಇನ್ನು ಕೆಲವು ದಿನ ಪೌಲನು ಅಲ್ಲಿಯೇ ಉಳಿದುಕೊಂಡನು. ಅನಂತರ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಕೆಂಖ್ರೆಯ ಎಂಬ ಸ್ಥಳದಲ್ಲಿ ತಲೆ ಕೂದಲನ್ನು ಕ್ಷೌರಮಾಡಿಸಿಕೊಂಡು ತಾನು ಹೊತ್ತ ಹರಕೆ ಪೂರೈಸಿದ ಮೇಲೆ ಸಿರಿಯಕ್ಕೆ ನೌಕೆ ಪ್ರಯಾಣಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನ ಜೊತೆಯಲ್ಲಿ ಹೊರಟರು.


ಪೌಲನು ಸಿರಿಯ ಮತ್ತು ಕಿಲಿಕ್ಯ ಸೀಮೆಗಳನ್ನು ಹಾದುಹೋಗುತ್ತಾ, ಅಲ್ಲಿದ್ದ ಸಭೆಗಳ ನಂಬಿಕೆಯನ್ನು ಬಲಪಡಿಸಿದನು.


ಇದರಿಂದ ಅವರಲ್ಲಿ ತೀವ್ರ ಭಿನ್ನಾಭಿಪ್ರಾಯ ಉಂಟಾಗಿ ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾಗಿ ಹೋಗಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ಪ್ರಯಾಣಮಾಡಿದನು,


ಅವರ ಕೈಯಿಂದ ಬರೆದು ಕೊಟ್ಟದ್ದೇನೆಂದರೆ: ಅಪೊಸ್ತಲರು ಹಾಗೂ ಹಿರಿಯ ಸಹೋದರರು, ಅಂತಿಯೋಕ್ಯ, ಸಿರಿಯ ಮತ್ತು ಕಿಲಿಕ್ಯದಲ್ಲಿ ವಾಸಿಸುವ ಯೆಹೂದ್ಯರಲ್ಲದವರೊಳಗಿನ ಸಹೋದರರಿಗೆ: ವಂದನೆಗಳು.


ಪವಿತ್ರಾತ್ಮ ದೇವರಿಂದ ಕಳುಹಿಸಲಾದ ಅವರಿಬ್ಬರೂ ಸೆಲ್ಯೂಕ್ಯಕ್ಕೆ ಹೋಗಿ ಅಲ್ಲಿಂದ ನೌಕೆಯಲ್ಲಿ ಪ್ರಯಾಣಮಾಡಿ ಸೈಪ್ರಸಿಗೆ ತಲುಪಿದರು.


ಸ್ತೆಫನನ ಮರಣದ ನಂತರ ಸಂಭವಿಸಿದ ಹಿಂಸೆಯ ನಿಮಿತ್ತ ಚದರಿಹೋದವರು ಫೊಯಿನಿಕೆ, ಸೈಪ್ರಸ್ ಮತ್ತು ಅಂತಿಯೋಕ್ಯದವರೆಗೆ ಪ್ರಯಾಣಮಾಡಿದರು. ಹೀಗೆ ಅವರು ಯೆಹೂದ್ಯರಿಗೆ ಮಾತ್ರವೇ ವಾಕ್ಯವನ್ನು ಸಾರಿದರು.


“ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಅದ್ಭುತಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.


ಕುರೇನ್ಯನು ಸಿರಿಯ ಪ್ರಾಂತಕ್ಕೆ ಅಧಿಪತಿಯಾಗಿದ್ದಾಗ, ಈ ಜನಗಣತಿಯು ಮೊದಲನೆಯ ಸಾರಿ ನಡೆಯಿತು.


“ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.


ಸಿರಿಯಾದವರು ಎಫ್ರಾಯೀಮ್ಯರೊಂದಿಗೆ ಜತೆಗೂಡಿದ್ದಾರೆಂದು ದಾವೀದನ ವಂಶದವರಿಗೆ ತಿಳಿದಾಗ, ಆಹಾಜನ ಮತ್ತು ಅವರ ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.


“ರಾಹಬ್, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ, ಫಿಲಿಷ್ಟಿಯ, ಟೈರ್, ಕೂಷ್ ಜನಾಂಗಗಳು, ‘ಚೀಯೋನಿನಲ್ಲೇ ಹುಟ್ಟಿದವು.’ ”


ಟೈರಿನ ಮಗಳು ಕಾಣಿಕೆಯೊಂದಿಗೆ ಬರುವಳು; ಐಶ್ವರ್ಯವಂತರು ನಿನ್ನನ್ನು ವರಿಸಲು ಹುಡುಕಿ ಬರುವರು.


ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.


ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು.


ಅಲ್ಲಿ ಫೊಯಿನಿಕೆಗೆ ಹೋಗುವ ನೌಕೆಯನ್ನು ಕಂಡು, ಅದನ್ನೇರಿ ಪ್ರಯಾಣ ಮುಂದುವರಿಸಿದೆವು.


ಟೈರ್ ಪಟ್ಟಣದಿಂದ ನಮ್ಮ ಪ್ರಯಾಣ ಮುಂದುವರಿಸಿ ಪ್ತೊಲೆಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿಯ ಸಹೋದರರನ್ನು ವಂದಿಸಿ ಅವರೊಂದಿಗೆ ಒಂದು ದಿನ ಇದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು