ಅಪೊಸ್ತಲರ ಕೃತ್ಯಗಳು 21:37 - ಕನ್ನಡ ಸಮಕಾಲಿಕ ಅನುವಾದ37 ಸೈನಿಕರು ಪೌಲನನ್ನು ಅವರ ಪಾಳ್ಯದೊಳಗೆ ಒಯ್ಯುತ್ತಿದ್ದಾಗ, ಅವನು ಸಹಸ್ರಾಧಿಪತಿಗೆ, “ನಾನು ನಿನ್ನೊಡನೆ ಸ್ವಲ್ಪ ಮಾತನಾಡುವುದಕ್ಕೆ ಅಪ್ಪಣೆಯಾದೀತೇ?” ಎಂದು ಕೇಳಲು, ಅದಕ್ಕೆ ಅವನು, “ನಿನಗೆ ಗ್ರೀಕ್ ಭಾಷೆಯೂ ಗೊತ್ತಿದೆಯೋ?” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವುದರೊಳಗಾಗಿ ಅವನು ಆ ಸಹಸ್ರಾಧಿಪತಿಗೆ, “ನಿನಗೆ ಒಂದು ಮಾತು ಹೇಳುವುದಕ್ಕೆ ನನಗೆ ಅಪ್ಪಣೆ ಇದೆಯೋ”? ಎಂದು ಕೇಳಲು ಅವನು; “ಗ್ರೀಕ್ ಭಾಷೆ ನಿನಗೆ ಬರುತ್ತದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಪೌಲನನ್ನು ಕೋಟೆಯೊಳಕ್ಕೆ ಕೊಂಡು ಒಯ್ಯುತ್ತಿದ್ದಾಗ, ಅವನು ಸೈನ್ಯಾಧಿಪತಿಗೆ, “ನಾನು ನಿಮ್ಮೊಡನೆ ಸ್ವಲ್ಪ ಮಾತಾಡಬಹುದೇ?’ ಎಂದನು. ಅದಕ್ಕೆ ಅವನು, “ನಿನಗೆ ಗ್ರೀಕ್‍ಭಾಷೆಯೂ ಗೊತ್ತಿದೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಪೌಲನನ್ನು ಕೋಟೆಯೊಳಗೆ ಸೇರಿಸುವದರೊಳಗಾಗಿ ಅವನು ಆ ಸಹಸ್ರಾಧಿಪತಿಯನ್ನು - ನಿನಗೆ ಒಂದು ಮಾತು ಹೇಳುವದಕ್ಕೆ ನನಗೆ ಅಪ್ಪಣೆ ಆದೀತೇ? ಎಂದು ಕೇಳಲು ಅವನು - ಗ್ರೀಕ್ ಭಾಷೆ ನಿನಗೆ ಬರುತ್ತದೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಸೈನಿಕರು ಪೌಲನನ್ನು ಸೈನ್ಯದ ಕೋಟೆಯೊಳಗೆ ಕೊಂಡೊಯ್ಯುತ್ತಿದ್ದಾಗ, ಪೌಲನು ಸೇನಾಧಿಪತಿಗೆ, “ನಾನು ನಿನ್ನೊಂದಿಗೆ ಸ್ವಲ್ಪ ಮಾತಾಡಬಹುದೇ?” ಎಂದು ಕೇಳಿದನು. ಸೇನಾಧಿಪತಿಯು, “ಓಹೋ, ನಿನಗೆ ಗ್ರೀಕ್ ಭಾಷೆ ಗೊತ್ತಿದೆಯಾ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಸೈನಿಕಾನಿ ಪಾವ್ಲುಕ್ ಸೈನಿಕಾಂಚ್ಯಾ ಕೊಟೆತ್ ಘೆವ್ನ್ ಜಾತಾನಾ ಪಾವ್ಲುನ್ ಸೆನಾಧಿಪತಿಕ್ ಎಕ್ ಗೊಸ್ಟ್ ಸಾಂಗುಕ್ ಮಾಕಾ ಅವಕಾಸ್ ಹಾಯ್ ಕಾಯ್? ಮನುನ್ ಇಚಾರ್‍ಲ್ಯಾನ್ ತನ್ನಾ ಸೆನಾಧಿಪತಿನ್ ಹೊ ತುಕಾ ಗ್ರಿಕ್ ಬಾಶ್ಯಾ ಗೊತ್ತ್ ಹಾಯ್ ಕಾಯ್? ಅಧ್ಯಾಯವನ್ನು ನೋಡಿ |