Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:5 - ಕನ್ನಡ ಸಮಕಾಲಿಕ ಅನುವಾದ

5 ಆದರೆ ನಮ್ಮ ಸಮಯ ಮುಗಿದಾಗ, ನಮ್ಮ ಪ್ರಯಾಣವನ್ನು ಮುಂದುವರಿಸಬೇಕೆಂದಿದ್ದೆವು. ಶಿಷ್ಯರೆಲ್ಲರೂ ಅವರ ಮಡದಿ ಮಕ್ಕಳೂ ಪಟ್ಟಣದ ಹೊರಗಿನವರೆಗೆ ನಮ್ಮೊಂದಿಗೆ ಬಂದರು. ಸಮುದ್ರ ತೀರದಲ್ಲಿ ನಾವು ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ದಿನಗಳನ್ನು ಮುಗಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ತಮ್ಮ ಮಡದಿ ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಬೀಳ್ಕೊಟ್ಟರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆ ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೂ, ಆ ದಿನಗಳು ಕಳೆದ ಮೇಲೆ, ಅವರನ್ನು ಬಿಟ್ಟು ನಮ್ಮ ಪ್ರಯಾಣವನ್ನು ಮುಂದುವರಿಸಲು ಅನುವಾದೆವು. ಅವರಾದರೋ, ಮಡದಿ ಮಕ್ಕಳೊಡನೆ ಪಟ್ಟಣ ಬಿಟ್ಟು ಸಮುದ್ರತೀರದವರೆಗೂ ನಮ್ಮೊಡನೆ ಬಂದರು. ಅಲ್ಲಿ ನಾವೆಲ್ಲರೂ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ದಿವಸಗಳನ್ನು ತೀರಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ಹೆಂಡರು ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಸಾಗಕಳುಹಿಸಿದರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ನಮ್ಮ ಸಂದರ್ಶನವು ಮುಗಿದ ಮೇಲೆ ನಾವು ಅಲ್ಲಿಂದ ಹೊರಟು ಪ್ರಯಾಣವನ್ನು ಮುಂದುವರಿಸಿದೆವು. ಯೇಸುವಿನ ಎಲ್ಲಾ ಶಿಷ್ಯರು, ಸ್ತ್ರೀಯರು ಮತ್ತು ಮಕ್ಕಳು ಸಹ ನಮ್ಮನ್ನು ಬೀಳ್ಕೊಡುವುದಕ್ಕಾಗಿ ನಮ್ಮೊಂದಿಗೆ ಪಟ್ಟಣದಿಂದ ಹೊರಗೆ ಬಂದರು. ನಾವೆಲ್ಲರೂ ಸಮುದ್ರ ತೀರದಲ್ಲಿ ಮೊಣಕಾಲೂರಿ ಪ್ರಾರ್ಥಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಿ ದಿಸಾ ಕಳದ್ಲ್ಯಾ ಮಾನಾ ಅಮಿ ಜಾತಾನಾ ಥೈತ್ಲಿ ಲೊಕಾ ಸಗ್ಳ್ಯಿ ಅಪ್ಲ್ಯಾ ಬಾಯ್ಕೊ ಪೊರಾಕ್ನಿಬಿ ವಾಂಗ್ಡಾ ಘೆವ್ನ್ ಅಮ್ಕಾ ಪಾವ್ಸುಕ್ ಶಾರಾಚ್ಯಾ ಭಾಯ್ರ್ ಯೆಲ್ಯಾನಿ ಅನಿ ಅಮಿ ಸಮುಂದರಾಚ್ಯಾ ದಂಡೆಕ್ ಡೊಗ್ಲಾ ಘಾಲುನ್ ಮಾಗ್ನೆ ಕರುನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:5
15 ತಿಳಿವುಗಳ ಹೋಲಿಕೆ  

ಇದನ್ನು ಹೇಳಿದ ತರುವಾಯ ಅವನು ಎಲ್ಲರೊಂದಿಗೆ ಮೊಣಕಾಲೂರಿ ಪ್ರಾರ್ಥನೆಮಾಡಿದನು.


ಪೇತ್ರನು ಅವರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಮೃತ ಸ್ತ್ರೀಯ ಕಡೆಗೆ ತಿರುಗಿಕೊಂಡು, “ತಬಿಥಾ, ಏಳು,” ಎಂದು ಹೇಳಿದನು. ಆಕೆ ತನ್ನ ಕಣ್ಣು ತೆರೆದು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.


“ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ,” ಎಂದು ಅವನು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ದುಃಖಗೊಂಡು, ಅವನೊಂದಿಗೆ ನೌಕೆಯವರೆಗೆ ಹೋದರು.


ಆದ್ದರಿಂದ ಸಭೆಯವರು ಅವರನ್ನು ಸಾಗಕಳುಹಿಸಲು, ಅವರು ಫೊಯಿನಿಕೆಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣ ಮಾಡುವಾಗ, ಯೆಹೂದ್ಯರಲ್ಲದವರ ಪರಿವರ್ತನೆಯನ್ನು ವಿವರವಾಗಿ ಅಲ್ಲಿಯವರೆಗೆ ತಿಳಿಸುತ್ತಾ ಸಹೋದರರೆಲ್ಲರಿಗೂ ಮಹಾಸಂತೋಷವನ್ನುಂಟುಮಾಡಿದರು.


ಬನ್ನಿರಿ, ಆರಾಧಿಸೋಣ; ನಮ್ಮನ್ನು ಸೃಷ್ಟಿಸಿದ ಯೆಹೋವ ದೇವರ ಮುಂದೆ ಮೊಣಕಾಲು ಊರೋಣ.


ರಾತ್ರಿಯಾದ ಕೂಡಲೇ, ಸಹೋದರರು ಪೌಲ, ಸೀಲರನ್ನು ಬೆರೋಯಕ್ಕೆ ಕಳುಹಿಸಿದರು. ಅಲ್ಲಿಗೆ ಅವರು ತಲುಪಿದಾಗ ಅಲ್ಲಿಯೂ ಯೆಹೂದ್ಯರ ಸಭಾಮಂದಿರಕ್ಕೆ ಹೋದರು.


ಕುಷ್ಠರೋಗಿಯಾಗಿದ್ದ ಒಬ್ಬನು ಯೇಸುವಿನ ಬಳಿಗೆ ಬಂದು, ಮೊಣಕಾಲೂರಿ, “ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.


ಊಟಮಾಡಿದವರಲ್ಲಿ ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿ ಇದ್ದರು.


ಹೀಗೆ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಯೆಹೋವ ದೇವರ ಮುಂದೆ ನಿಂತರು.


ಸೊಲೊಮೋನನು ಈ ಸಮಸ್ತ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಯೆಹೋವ ದೇವರಿಗೆ ಮಾಡಿ ತೀರಿಸಿದ ತರುವಾಯ, ಅವನು ಯೆಹೋವ ದೇವರ ಬಲಿಪೀಠದ ಮುಂದೆ ಮೊಣಕಾಲೂರಿ, ತನ್ನ ಕೈಗಳನ್ನು ಆಕಾಶಕ್ಕೆ ಚಾಚಿದವನಾಗಿ ಎದ್ದು ನಿಂತನು.


ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ, ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಅವರು ತಮ್ಮ ಮಡದಿಮಕ್ಕಳೂಡನೆ ಮಹೋತ್ಸವ ಮಾಡಿದರು. ಆದ್ದರಿಂದ ಯೆರೂಸಲೇಮಿನ ಸಂತೋಷ ಧ್ವನಿಯು ಬಹು ದೂರಕ್ಕೆ ಕೇಳಿಸಿತು.


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


ಯೇಸು ಅವರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣಕಾಲೂರಿ,


ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ, ಮಕ್ಕಳಿಗೂ, ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು