Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:7 - ಕನ್ನಡ ಸಮಕಾಲಿಕ ಅನುವಾದ

7 ಟೈರ್ ಪಟ್ಟಣದಿಂದ ನಮ್ಮ ಪ್ರಯಾಣ ಮುಂದುವರಿಸಿ ಪ್ತೊಲೆಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿಯ ಸಹೋದರರನ್ನು ವಂದಿಸಿ ಅವರೊಂದಿಗೆ ಒಂದು ದಿನ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾವು ತೂರ್ ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿನ ಇದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಟೈರ್‍ನಿಂದ ಹೊರಟು ಪ್ತೊಲೊಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿ ಭಕ್ತಾದಿಗಳನ್ನು ವಂದಿಸಿ ಅವರೊಡನೆ ಒಂದು ದಿನ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾವು ತೂರ್‍ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾವು ಟೈರ್ ನಿಂದ ನಮ್ಮ ಪ್ರಯಾಣವನ್ನು ಮುಂದುವರೆಸಿ ಪ್ಟೊಲೊಮಾಯ ಎಂಬಲ್ಲಿಗೆ ಹೋದೆವು. ಅಲ್ಲಿಯ ಸಹೋದರರನ್ನು (ವಿಶ್ವಾಸಿಗಳು) ವಂದಿಸಿ ಅವರೊಂದಿಗೆ ಒಂದು ದಿನ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಮಿ ತುರ್ ಶಾರಾತ್ನಾ ಅಮ್ಚೆ ಪ್ರಯಾನ್ ಫಿಡೆ ಕರುನ್ ಪ್ತೊಲೊಮಾ ಮನ್ತಲೊ ಶಾರಾಕ್ ಗೆಲ್ಯಾಂವ್ ಥೈ ಹೊತ್ತ್ಯಾ ದೆವಾಚೆರ್ ವಿಶ್ವಾಸ್ ಥವಲ್ಲ್ಯಾ ಲೊಕಾಕ್ನಿ ವಂದನ್ ಕರುನ್ ಎಕ್ ದಿಸ್ ಥೈ ಹೊತ್ತ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:7
13 ತಿಳಿವುಗಳ ಹೋಲಿಕೆ  

ನಿಮ್ಮ ಎಲ್ಲಾ ನಾಯಕರಿಗೆ, ದೇವಜನರಿಗೆ ವಂದನೆಗಳು. ಇಟಲಿಯವರು ನಿಮ್ಮನ್ನು ವಂದಿಸುತ್ತಾರೆ.


ಸುರಕೂಸ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ಮೂರು ದಿನ ಇದ್ದೆವು.


ಕೆಲವು ದಿನಗಳ ನಂತರ ಫೆಸ್ತನನ್ನು ಅಭಿನಂದಿಸಲು ರಾಜ ಅಗ್ರಿಪ್ಪನು ಬೆರ್ನಿಕೆಯಳೊಂದಿಗೆ ಕೈಸರೈಯಕ್ಕೆ ಬಂದನು.


ಪೌಲನು ಅವರನ್ನು ವಂದಿಸಿ, ತನ್ನ ಸೇವೆಯ ಮೂಲಕ ದೇವರು ಯೆಹೂದ್ಯರಲ್ಲದವರ ಮಧ್ಯದಲ್ಲಿ ಮಾಡಿದ ಕಾರ್ಯಗಳನ್ನು ವಿವರಿಸಿದನು.


ನಾವು ಅಲ್ಲಿ ಕೆಲವು ದಿನ ಇದ್ದ ತರುವಾಯ, ಅಗಬ ಎಂಬ ಹೆಸರಿನ ಪ್ರವಾದಿ ಯೂದಾಯದಿಂದ ಬಂದನು.


ಅನಂತರ ಅವನು ಕೈಸರೈಯವನ್ನು ಸೇರಿದಾಗ, ಅಲ್ಲಿದ್ದ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೊರಟುಹೋದನು.


ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು.


ನಿಮ್ಮ ಸ್ವಂತದವರನ್ನು ಮಾತ್ರ ವಂದಿಸಿದರೆ ಹೆಚ್ಚೇನು ಮಾಡಿದ ಹಾಗಾಯಿತು? ಯೆಹೂದ್ಯರಲ್ಲದವರು ಸಹ ಹಾಗೆಯೇ ಮಾಡುತ್ತಾರಲ್ಲವೇ?


ಆದರೆ ಅವನು ದಹನಬಲಿಯನ್ನು ಅರ್ಪಿಸಿ, ತೀರಿಸುವಷ್ಟರೊಳಗೆ ಸಮುಯೇಲನು ಬಂದನು. ಆಗ ಅವನನ್ನು ವಂದಿಸುವುದಕ್ಕಾಗಿ ಸೌಲನು ಅವನನ್ನು ಎದುರುಗೊಳ್ಳಲು ಹೋದನು.


ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ, ನಿನಗೆ ಎರಡು ರೊಟ್ಟಿಗಳನ್ನು ಕೊಡುವರು. ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವೆ.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:


ಸೈಪ್ರಸ್ ಹತ್ತಿರ ಬಂದು ಅದರ ದಕ್ಷಿಣಕ್ಕೆ ಪ್ರಯಾಣಮಾಡಿ ಸಿರಿಯಕ್ಕೆ ಹೋದೆವು. ನಮ್ಮ ನೌಕೆಯಲ್ಲಿದ್ದ ಸರಕುಗಳನ್ನು ಇಳಿಸಬೇಕಾಗಿದ್ದ ಟೈರ್ ಎಂಬಲ್ಲಿ ಬಂದು ಇಳಿದೆವು.


ನಾವು ಯೆರೂಸಲೇಮನ್ನು ತಲುಪಿದಾಗ, ಸಹೋದರರು ನಮ್ಮನ್ನು ಸಂತೋಷದಿಂದ ಸ್ವೀಕರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು