Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:14 - ಕನ್ನಡ ಸಮಕಾಲಿಕ ಅನುವಾದ

14 “ಆಗ ಅವನು, ‘ನಮ್ಮ ಪಿತೃಗಳ ದೇವರು ತಮ್ಮ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕಾಗಿಯೂ ನೀತಿವಂತ ಆಗಿರುವ ಒಬ್ಬರನ್ನು ಕಾಣುವುದಕ್ಕಾಗಿಯೂ ಅವರ ಬಾಯಿಂದ ಒಂದು ಮಾತನ್ನು ಕೇಳುವುದಕ್ಕಾಗಿಯೂ ನಿನ್ನನ್ನು ಮುಂದಾಗಿಯೇ ನೇಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಅವನು, ‘ನಮ್ಮ ಪೂರ್ವಜರ ದೇವರು ತಮ್ಮ ಚಿತ್ತವನ್ನು ನೀನು ಅರಿಯಬೇಕೆಂದು, ತಮ್ಮ ಸತ್ಯಸ್ವರೂಪಿಯನ್ನು ನೀನು ನೋಡಬೇಕೆಂದು, ತಮ್ಮ ಕಂಠಸ್ವರವನ್ನು ನೀನು ಕೇಳಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಮೇಲೆ ಅವನು - ನಮ್ಮ ಪಿತೃಗಳ ದೇವರು ತನ್ನ ಚಿತ್ತವನ್ನು ನೀನು ತಿಳುಕೊಳ್ಳುವದಕ್ಕೂ ಆ ನೀತಿವಂತನನ್ನು ನೋಡುವದಕ್ಕೂ ಆತನ ಬಾಯಿಂದ ಒಂದು ಮಾತನ್ನು ಕೇಳುವದಕ್ಕೂ ನಿನ್ನನ್ನು ನೇವಿುಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಅನನೀಯನು ನನಗೆ, ‘ನಮ್ಮ ಪಿತೃಗಳ ದೇವರು ಬಹುಕಾಲದ ಹಿಂದೆಯೇ ನಿನ್ನನ್ನು ಆರಿಸಿಕೊಂಡನು. ನೀನು ದೇವರ ಯೋಜನೆಯನ್ನು ತಿಳಿದುಕೊಳ್ಳಬೇಕೆಂತಲೂ ನೀತಿಸ್ವರೂಪನನ್ನು (ಯೇಸು) ನೋಡಬೇಕೆಂತಲೂ ಆತನ ವಾಕ್ಯಗಳನ್ನು ಕೇಳಬೇಕೆಂತಲೂ ದೇವರು ನಿನ್ನನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನನಿಯಾನ್ ಮಾಕಾ, ಅಮ್ಚ್ಯಾ ಪುರ್ವಜಾಂಚ್ಯಾ ದೆವಾನ್ ತುಕಾ ಲೈ ಯೆಳಾಚ್ಯಾ ಅದ್ದಿಚ್ ಎಚುನ್ ಘೆಟ್ಲಾ, ದೆವಾಚಿ ಯವ್ಜನ್ ಕಳ್ವುನ್ ಘೆವ್ಚೆ ಮನುನ್ ನಿಯತ್ತಿಚ್ಯಾ ಜೆಜುಕ್ ಬಗುಚೆ ಮನುನ್ ಅನಿ ತೆಚಿ ಸಗ್ಳಿ ಗೊಸ್ಟ್ ಆಯ್ಕುಚೆ ಮನುನ್ ದೆವಾನ್ ತುಕಾ ಎಚುನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:14
33 ತಿಳಿವುಗಳ ಹೋಲಿಕೆ  

ನಾನು ಅದನ್ನು ಯಾವ ಮನುಷ್ಯನಿಂದಲೂ ಪಡೆಯಲಿಲ್ಲ, ನನಗೆ ಯಾವ ಮನುಷ್ಯನೂ ಉಪದೇಶಿಸಲಿಲ್ಲ, ಆದರೆ ನಾನು ಅದನ್ನು ಕ್ರಿಸ್ತ ಯೇಸುವಿನ ಪ್ರಕಟನೆಯಿಂದಲೇ ಸ್ವೀಕರಿಸಿಕೊಂಡೆನು.


ಕಟ್ಟಕಡೆಗೆ, ದಿನತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.


ನಾನು ಸ್ವತಂತ್ರನಲ್ಲವೇ? ನಾನೂ ಅಪೊಸ್ತಲನಲ್ಲವೇ? ನಾನು ನಮ್ಮ ಕರ್ತ ಆಗಿರುವ ಯೇಸುವನ್ನು ಕಂಡವನಲ್ಲವೇ? ನಾನು ಕರ್ತ ದೇವರಲ್ಲಿ ಮಾಡಿದ ಕೆಲಸದ ಫಲವು ನೀವಲ್ಲವೇ?


ನೀನು ಎದ್ದು ನಿಂತುಕೋ, ನೀನು ಕಂಡಿದ್ದವುಗಳಿಗಾಗಿಯೂ ನಾನು ನಿನಗೆ ತೋರಿಸುವಂಥವುಗಳಿಗಾಗಿಯೂ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಲು ನಾನು ನಿನಗೆ ಕಾಣಿಸಿಕೊಂಡಿದ್ದೇನೆ.


ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.


ನನ್ನ ಪ್ರಿಯ ಮಕ್ಕಳೇ, ನೀವು ಪಾಪಮಾಡದಂತೆ ಇವುಗಳನ್ನು ನಾನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತರಾದ ಕ್ರಿಸ್ತ ಯೇಸುವು ನಮ್ಮ ಪರವಾಗಿ ವಾದಿಸುವ ವಕೀಲರಾಗಿದ್ದಾರೆ.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ.


ಆಮೇಲೆ ಅನನೀಯನು ಆ ಮನೆಗೆ ಹೋಗಿ ಒಳಗೆ ಪ್ರವೇಶಿಸಿದನು. ತನ್ನ ಕೈಗಳನ್ನು ಸೌಲನ ಮೇಲಿಟ್ಟು, “ಸಹೋದರ ಸೌಲನೇ, ನೀನು ಇಲ್ಲಿಗೆ ಬರುತ್ತಿದ್ದಾಗ ದಾರಿಯಲ್ಲಿ ನಿನಗೆ ದರ್ಶನಕೊಟ್ಟ ಕರ್ತ ಯೇಸು, ನಿನಗೆ ಪುನಃ ದೃಷ್ಟಿ ಬರುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದು ಹೇಳಲು,


ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ.


ನಾನು ಕರ್ತ ದೇವರಿಂದಲೇ ಪಡೆದದ್ದನ್ನು ನಿಮಗೆ ಒಪ್ಪಿಸಿಕೊಟ್ಟಿದ್ದೇನೆ: ಕರ್ತ ಆಗಿರುವ ಯೇಸು ತಮ್ಮನ್ನು ಹಿಡಿದುಕೊಡಲಾದ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು,


ಆದರೂ ಅವರು ಒಂದು ಪಂಗಡ ಎಂದು ಕರೆಯುವ ಮಾರ್ಗದ ಅನುಯಾಯಿಯಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮೋಶೆಯ ನಿಯಮ ಒಪ್ಪಿಕೊಳ್ಳುವಂಥದೆಲ್ಲವನ್ನೂ ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವುದೆಲ್ಲವನ್ನೂ ನಾನು ನಂಬುತ್ತೇನೆ.


ಆಗ ಕರ್ತ ಯೇಸು ನನ್ನೊಂದಿಗೆ ಮಾತನಾಡುತ್ತಿರುವುದನ್ನು ಕಂಡೆನು. ಅವರು, ‘ತಡಮಾಡದೆ! ತಕ್ಷಣವೇ ಯೆರೂಸಲೇಮನ್ನು ಬಿಟ್ಟು ಹೊರಟು ಹೋಗು, ಏಕೆಂದರೆ ನೀನು ನನ್ನನ್ನು ಕುರಿತು ಹೇಳುವ ಸಾಕ್ಷಿಯನ್ನು ಅವರು ಸ್ವೀಕರಿಸುವುದಿಲ್ಲ,’ ಎಂದರು.


ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃಗಳನ್ನು ಆಯ್ದುಕೊಂಡರು; ಈಜಿಪ್ಟಿನಲ್ಲಿ ನಮ್ಮ ಜನರು ವಾಸಿಸುತ್ತಿದ್ದಾಗ; ಅವರನ್ನು ಪ್ರಬಲರನ್ನಾಗಿ ಮಾಡಿ ತಮ್ಮ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಅವರನ್ನು ಬಿಡಿಸಿ ಕರೆತಂದರು;


ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


ನನ್ನ ಪಿತೃಗಳ ದೇವರೇ, ನಾನು ನಿಮ್ಮನ್ನು ಕೊಂಡಾಡಿ, ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ. ಏಕೆಂದರೆ ನೀವು ನನಗೆ ಜ್ಞಾನವನ್ನೂ, ಬಲವನ್ನೂ ಕೊಟ್ಟು; ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಪಡಿಸಿದ್ದೀರಿ; ನೀವು ಈಗ ನಮಗೆ ಅರಸನ ಕನಸನ್ನು ತಿಳಿಯಪಡಿಸಿದ್ದೀರಿ.”


“ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ ಮುಂಚೆಯೇ ನಿನ್ನನ್ನು ತಿಳಿದಿದ್ದೆನು. ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ.”


ಆಗ ಎಜ್ರನು, “ನಮ್ಮ ತಂದೆಗಳ ದೇವರಾಗಿರುವ ಯೆಹೋವ ದೇವರು ಸ್ತುತಿಹೊಂದಲಿ! ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಮಹಿಮೆಯನ್ನು ತರುವಂತೆ, ಅರಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟಿದ್ದಾರೆ.


ನಮ್ಮ ಪಿತೃಗಳಾದ ಅಬ್ರಹಾಮನ, ಇಸಾಕನ, ಇಸ್ರಾಯೇಲನ ದೇವರಾದ ಯೆಹೋವ ದೇವರೇ, ನಿಮ್ಮ ಜನರ ಹೃದಯದ ಮನೋಭಾವನೆಯಲ್ಲಿ ಭಕ್ತಿಯನ್ನು ನಿರಂತರವಾಗಿ ಕಾಪಾಡಿ, ಅವರ ಹೃದಯವನ್ನು ನಿಮಗೆ ಸಿದ್ಧಮಾಡಿ.


“ಯೆಹೋವ ದೇವರು ನನ್ನ ಬಲವೂ ಕೀರ್ತನೆಯೂ ಆಗಿದ್ದಾರೆ; ಅವರು ನನ್ನ ರಕ್ಷಣೆಯಾದರು; ಅವರು ನನ್ನ ದೇವರು, ಅವರನ್ನು ಕೊಂಡಾಡುವೆನು; ಅವರು ನನ್ನ ತಂದೆಯ ದೇವರು, ನಾನು ಅವರನ್ನು ಘನಪಡಿಸುವೆನು.


ದೇವರು ಆಯ್ದುಕೊಂಡವರ ನಂಬಿಕೆಗನುಸಾರವೂ ಭಕ್ತಿಗನುಸಾರವಾದ ಸತ್ಯದ ತಿಳುವಳಿಕೆಗನುಸಾರವೂ ದೇವರ ಸೇವಕನೂ ಕ್ರಿಸ್ತ ಯೇಸುವಿನ ಅಪೊಸ್ತಲನೂ ಆಗಿರುವ ಪೌಲನೆಂಬ ನನಗೆ


ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೆಂಬ ನಾನು,


ಆದರೆ ದೇವರು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತಮ್ಮ ಕೃಪೆಯ ಮೂಲಕ ನನ್ನನ್ನು ಕರೆದು,


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು,


ಯೆಹೋವ ದೇವರೇ, ತಮ್ಮ ಪಿತೃಗಳ ದೇವರಾದ ನಿಮ್ಮನ್ನು ಹುಡುಕಬೇಕೆಂದು ಮನಸ್ಸು ಮಾಡುವವರಿಗೆಲ್ಲ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.


ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪ ಸುಡುವುದಕ್ಕೆ ಎತ್ತರ ಸ್ಥಳಗಳನ್ನು ಕಟ್ಟಿಸಿ, ತನ್ನ ಪಿತೃಗಳ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದನು.


ಆಗ ದಾವೀದನು ಅವರನ್ನು ಎದುರುಗೊಳ್ಳಲು ಹೊರಟುಹೋಗಿ ಅವರಿಗೆ ಉತ್ತರವಾಗಿ, “ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ, ನನ್ನ ಹೃದಯವು ನಿಮ್ಮ ಸಂಗಡ ಒಂದಾಗಿರುವುದು. ಆದರೆ ದೋಷವು ನನ್ನ ಕೈಯಲ್ಲಿ ಇಲ್ಲದಿರುವಾಗ, ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ, ನಮ್ಮ ಪಿತೃಗಳ ದೇವರು ನೋಡಿ ನ್ಯಾಯತೀರಿಸಲಿ,” ಎಂದನು.


ತನ್ನ ತಂದೆಯು ನಡೆದ ಸಮಸ್ತ ಮಾರ್ಗದಲ್ಲಿ ನಡೆದು, ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದನು.


“ಕ್ರಿಸ್ತ ಯೇಸುವು ಯಾವ ಪಾಪವನ್ನೂ ಮಾಡಲಿಲ್ಲ, ಅವರ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.”


ಏಕೆಂದರೆ ನೀನು ಕಂಡದ್ದಕ್ಕೂ ಕೇಳಿದ್ದಕ್ಕೂ ಎಲ್ಲಾ ಜನರಿಗೆ ಅವರ ಸಾಕ್ಷಿಯಾಗಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು