Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:22 - ಕನ್ನಡ ಸಮಕಾಲಿಕ ಅನುವಾದ

22 ಇದನ್ನು ಹೇಳುವವರೆಗೆ ಜನರು ಪೌಲನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಅನಂತರ ಅವರು ತಮ್ಮ ಸ್ವರವೆತ್ತಿ, “ಇಂಥವನನ್ನು ಭೂಲೋಕದಿಂದ ತೊಲಗಿಸಿರಿ! ಇವನು ಜೀವಿಸುವುದಕ್ಕೆ ಯೋಗ್ಯನಲ್ಲ!” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಲ್ಲಿಯವರೆಗೆ ಪೌಲನು ಹೇಳುತ್ತಿದ್ದನ್ನು ಜನರು ಕಿವಿಗೊಟ್ಟು ಕೇಳುತ್ತಿದ್ದರು. ಆಮೇಲೆ ಅವರು, “ಇವನು ಈ ಲೋಕದಿಂದಲೇ ತೊಲಗಬೇಕು; ಇಂಥವನು ಜೀವದಿಂದ ಇರಬಾರದು,” ಎಂದು ಗಟ್ಟಿಯಾಗಿ ಕೂಗಾಡಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಈ ಮಾತಿನ ತನಕ ಅವರು ಕೇಳುತ್ತಿದ್ದರು; ಆಮೇಲೆ - ಇಂಥವನನ್ನು ಭೂವಿುಯಿಂದ ತೆಗೆದುಹಾಕಿಬಿಡು; ಇವನು ಬದುಕುವದು ಯುಕ್ತವಲ್ಲವೆಂದು ಕೂಗಿಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪೌಲನು ಈ ಕೊನೆಯ ಸಂಗತಿಯನ್ನು ಅಂದರೆ ಯೆಹೂದ್ಯರಲ್ಲದವರ ಬಳಿಗೆ ಹೋಗುವುದರ ಬಗ್ಗೆ ಹೇಳಿದಾಗ ಅವರು ಅವನ ಮಾತಿಗೆ ಕಿವಿಗೊಡುವುದನ್ನು ನಿಲ್ಲಿಸಿ, “ಅವನನ್ನು ಕೊಲ್ಲಿರಿ! ಅವನನ್ನು ಪ್ರಪಂಚದಿಂದ ತೊಲಗಿಸಿರಿ! ಇಂಥ ಮನುಷ್ಯನಿಗೆ ಜೀವಿಸಲು ಅವಕಾಶವನ್ನೇ ಕೊಡಕೂಡದು!” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹಿ ಗೊಸ್ಟಿಯಾ ಸಾಂಗ್ತಾನಾ ಸಗ್ಳಿ ಲೊಕಾ ಪಾವ್ಲು ಸಾಂಗ್ತಲೆ ಆಯ್ಕುಲಾಲಿ ಮಾನಾ ತೆನಿ “ಅಸ್ಲ್ಯಾಕ್ನಿ ಜಿಮ್ನಿ ವೈನಾ ಕಾಡುನ್ ಟಾಕುಚೆ ಹ್ಯೊ ಜಿವಾನಿ ರ್‍ಹಾವ್ಕ್ ಯೊಗ್ಯಾನಾ” ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:22
6 ತಿಳಿವುಗಳ ಹೋಲಿಕೆ  

ಆಗ ಫೆಸ್ತನು, “ಅಗ್ರಿಪ್ಪ ರಾಜನೇ, ನಮ್ಮ ಸಂಗಡ ಇಲ್ಲಿ ಸೇರಿ ಬಂದಿರುವವರೇ, ನೀವು ಕಾಣುತ್ತಿರುವ ಈ ಮನುಷ್ಯನು ಜೀವದಿಂದ ಉಳಿಯಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯೆಹೂದ್ಯರೆಲ್ಲರೂ ನನ್ನನ್ನು ಬೇಡಿಕೊಂಡಿದ್ದಾರೆ.


ಏಕೆಂದರೆ ಮುನ್ನುಗ್ಗುತ್ತಿದ್ದ ಜನರ ಗುಂಪು, “ಅವನನ್ನು ಕೊಲ್ಲಿರಿ!” ಎಂದು ಆರ್ಭಟಿಸುತ್ತಿತ್ತು.


ಆದರೆ ಅವರು, “ಆತನನ್ನು ಕೊಲ್ಲಿಸು ಕೊಲ್ಲಿಸು! ಆತನನ್ನು ಶಿಲುಬೆಗೆ ಹಾಕು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಬೇಕೆ?” ಎಂದು ಕೇಳಿದನು. ಆಗ ಮುಖ್ಯಯಾಜಕರು, “ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.


ಆಗ ಅವರೆಲ್ಲರೂ ಆ ಕ್ಷಣವೇ, “ಈತನಿಗೆ ಮರಣದಂಡನೆ ವಿಧಿಸಿರಿ, ನಮಗೆ ಬರಬ್ಬನನ್ನು ಬಿಡುಗಡೆಮಾಡು,” ಎಂದು ಬೊಬ್ಬೆಹಾಕಿದರು.


ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು