Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:24 - ಕನ್ನಡ ಸಮಕಾಲಿಕ ಅನುವಾದ

24 ಸಹಸ್ರಾಧಿಪತಿಯು ಪೌಲನನ್ನು ಸೈನಿಕರ ಪಾಳ್ಯದೊಳಗೆ ಒಯ್ಯಬೇಕೆಂದು, ಅವನನ್ನು ಕೊರಡೆಗಳಿಂದ ಹೊಡೆದು ಯಾವ ಅಪರಾಧಕ್ಕಾಗಿ ಜನರು ಅವನಿಗೆ ವಿರೋಧವಾಗಿ ಅರಚುತ್ತಿದ್ದರು ಎಂಬುದನ್ನು ಅವನಿಂದ ವಿಚಾರಿಸಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಜನರು ಯಾವ ಕಾರಣದಿಂದ ಅವನ ವಿರುದ್ಧ ಹೀಗೆ ಮಾಡುತ್ತಿದ್ದಾರೆಂದು ಅರಿತುಕೊಳ್ಳಲು ಸಹಸ್ರಾಧಿಪತಿ ಪೌಲನನ್ನು ಕೋಟೆ ಒಳಕ್ಕೆಕೊಂಡೊಯ್ದು, ಚಾವಟಿಯಿಂದ ಹೊಡೆದು ವಿಚಾರಿಸುವಂತೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬದನ್ನು ಸಹಸ್ರಾಧಿಪತಿಯು ತಿಳುಕೊಳ್ಳುವದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಗ ಸೇನಾಧಿಪತಿಯು ಪೌಲನನ್ನು ದಂಡಿನ ಪಾಳೆಯದೊಳಗೆ ಕರೆದುಕೊಂಡು ಹೋಗಿ ಹೊಡೆಯಲು ಸೈನಿಕರಿಗೆ ಹೇಳಿದನು. ಜನರು ಪೌಲನ ವಿರೋಧವಾಗಿ ಈ ರೀತಿ ಕೂಗಲು ಕಾರಣವೇನೆಂದು ಪೌಲನಿಂದಲೇ ಹೇಳಿಸಬೇಕೆಂಬುದು ಸೇನಾಧಿಪತಿಯ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ರೊಮಾಚ್ಯಾ ಸೈನಿಕಾಚ್ಯಾ ಮುಖಂಡಾನ್ ಪಾವ್ಲುಕ್ ಬುತ್ತುರ್ ಘೆವ್ನ್ ಜಾವ್ನ್ ಮಾರಾ ಮನುನ್ ಹುಕುಮ್ ದಿಲ್ಯಾನ್,ಲೊಕಾ ಅಶೆ ಬೊಬ್ ಮಾರುಕ್ ಕಾಯ್ ಕಾರನ್ ಮನ್ತಲೆ ತೆಜ್ಯಾಕ್ನಾಚ್ ಸಾಂಗ್ಸುಚೆ ಮನ್ತಲಿ ತ್ಯಾ ಮುಖಂಡಾಚಿ ಆಶ್ಯಾ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:24
11 ತಿಳಿವುಗಳ ಹೋಲಿಕೆ  

ಜನಸಮೂಹವು ಪೌಲನನ್ನು ಎಳೆದು ತುಂಡುತುಂಡಾಗಿ ಮಾಡುವರೇನೋ ಎಂದು ಸಹಸ್ರಾಧಿಪತಿಗೆ ಬಹಳ ಭಯವಾಯಿತು. ಸೈನಿಕರ ಗುಂಪುಗಳು ಕೆಳಗಿಳಿದು ಹೋಗಿ ಬಲಪ್ರಯೋಗದಿಂದ ಪೌಲನನ್ನು ಎತ್ತಿಕೊಂಡು ಸೈನಿಕ ಪಾಳ್ಯದೊಳಗೆ ಬರಬೇಕೆಂದು ಅವನು ಸೈನಿಕರಿಗೆ ಆಜ್ಞಾಪಿಸಿದನು.


ಜನಸಮೂಹದಲ್ಲಿದ್ದ ಇತರರು ವಿವಿಧ ರೀತಿಯಿಂದ ಕೂಗುತ್ತಿರಲು ಗಲಭೆಯ ನಿಮಿತ್ತ ಸಹಸ್ರಾಧಿಪತಿಗೆ ಸತ್ಯಾಂಶ ತಿಳಿಯಲಾಗಲಿಲ್ಲ. ಆದ್ದರಿಂದ ಪೌಲನನ್ನು ಸೈನಿಕ ಪಾಳ್ಯದೊಳಗೆ ತೆಗೆದುಕೊಂಡು ಹೋಗಲು ಆಜ್ಞಾಪಿಸಿದನು.


ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಕೊರಡೆಯಿಂದ ಹೊಡೆಸಿದನು.


ಸ್ತ್ರೀಯರು ಸತ್ತು ಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಆದರೆ ಬೇರೆ ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಉತ್ತಮ ಪುನರುತ್ಥಾನ ಹೊಂದುವುದಕ್ಕಾಗಿ ತಮಗೆ ಬಿಡುಗಡೆಯನ್ನು ಸ್ವೀಕರಿಸದೆ ಹೋದರು,


ಈ ಪೌಲನನ್ನು ಯೆಹೂದ್ಯರು ಬಂಧಿಸಿ, ಇವನನ್ನು ಕೊಲ್ಲಬೇಕೆಂದಿದ್ದರು. ಆದರೆ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಬಿಡಿಸಿದೆನು. ಇವನು ರೋಮ್ ಪೌರ ಎಂದು ನನಗೆ ಗೊತ್ತಾಯಿತು.


ಆದರೆ ಪೌಲನು ಅಧಿಕಾರಿಗಳಿಗೆ, “ನಾವು ರೋಮ್ ಪೌರರಾಗಿದ್ದು ಯಾವ ನ್ಯಾಯವಿಚಾರಣೆ ಮಾಡದೇ ಬಹಿರಂಗವಾಗಿ ನಮ್ಮನ್ನು ಛಡಿಯಿಂದ ಹೊಡೆಸಿ, ನಮ್ಮನ್ನು ಸೆರೆಮನೆಗೆ ತಳ್ಳಿದ್ದಾರೆ. ಈಗ ರಹಸ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೋ? ಇಲ್ಲ, ಅವರು ತಾವೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡು ಹೋಗಲಿ,” ಎಂದನು.


ಸೈನಿಕರು ಪೌಲನನ್ನು ಅವರ ಪಾಳ್ಯದೊಳಗೆ ಒಯ್ಯುತ್ತಿದ್ದಾಗ, ಅವನು ಸಹಸ್ರಾಧಿಪತಿಗೆ, “ನಾನು ನಿನ್ನೊಡನೆ ಸ್ವಲ್ಪ ಮಾತನಾಡುವುದಕ್ಕೆ ಅಪ್ಪಣೆಯಾದೀತೇ?” ಎಂದು ಕೇಳಲು, ಅದಕ್ಕೆ ಅವನು, “ನಿನಗೆ ಗ್ರೀಕ್ ಭಾಷೆಯೂ ಗೊತ್ತಿದೆಯೋ?”


ಅವರು ನನ್ನನ್ನು ವಿಚಾರಣೆ ಮಾಡಿ, ನಾನು ಮರಣಶಿಕ್ಷೆ ಹೊಂದಲು ಯಾವ ಅಪರಾಧವೂ ಇಲ್ಲದಿರುವುದನ್ನು ಕಂಡು ನನ್ನನ್ನು ಬಿಡುಗಡೆ ಮಾಡಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು