ಅಪೊಸ್ತಲರ ಕೃತ್ಯಗಳು 22:6 - ಕನ್ನಡ ಸಮಕಾಲಿಕ ಅನುವಾದ6 “ಸುಮಾರು ಮಧ್ಯಾಹ್ನದ ಸಮಯಕ್ಕೆ ನಾನು ದಮಸ್ಕದ ಹತ್ತಿರದಲ್ಲಿದ್ದೆನು. ಇದ್ದಕ್ಕಿದ್ದಂತೆ ಆಕಾಶದಿಂದ ಮಹಾ ಬೆಳಕು ನನ್ನ ಸುತ್ತಲೂ ಹೊಳೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನಾನು ಪ್ರಯಾಣಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬಂದಾಗ ಸುಮಾರು ಮಧ್ಯಾಹ್ನದಲ್ಲಿ ಫಕ್ಕನೆ ಆಕಾಶದೊಳಗಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲು ಹೊಳೆಯಿತು, ನಾನು ನೆಲಕ್ಕೆ ಬಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಹೀಗೆ ಪ್ರಯಾಣ ಮಾಡುತ್ತಾ ದಮಸ್ಕಸನ್ನು ಸಮೀಪಿಸಿದೆ. ಆಗ ಸುಮಾರು ನಡುಮಧ್ಯಾಹ್ನ. ಇದ್ದಕ್ಕಿದ್ದಂತೆ ಆಕಾಶದಿಂದ ಮಹಾಬೆಳಕೊಂದು ನನ್ನ ಸುತ್ತಲೂ ಮಿಂಚಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾನು ಪ್ರಯಾಣಮಾಡುತ್ತಾ ದಮಸ್ಕದ ಹತ್ತರಕ್ಕೆ ಬಂದಾಗ ಸುಮಾರು ಮಧ್ಯಾಹ್ನದಲ್ಲಿ ಫಕ್ಕನೆ ಆಕಾಶದೊಳಗಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲು ಹೊಳೆಯಿತು, ನಾನು ನೆಲಕ್ಕೆ ಬಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ನಾನು ಪ್ರಯಾಣ ಮಾಡುತ್ತಾ ದಮಸ್ಕದ ಸಮೀಪಕ್ಕೆ ಬಂದಾಗ ಒಂದು ಘಟನೆ ಸಂಭವಿಸಿತು. ಆಗ ಸುಮಾರು ಮಧ್ಯಾಹ್ನವಾಗಿತ್ತು. ಇದ್ದಕ್ಕಿದ್ದಂತೆ ಪ್ರಕಾಶಮಾನವಾದ ಬೆಳಕೊಂದು ನನ್ನ ಸುತ್ತಲೂ ಪ್ರಕಾಶಿಸಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಮಿಯಾ ಪ್ರಯಾನ್ ಕರುನ್ಗೆತ್ ದಮಸ್ಕಾಚ್ಯಾ ಶಾರಾಚ್ಯಾ ಜಗ್ಗೊಳ್ ಯೆಲ್ಲ್ಯಾ ತನ್ನಾ ಸುಮಾರ್ ದೊಪಾರ್ ಹೊಲ್ಲಿ ಹೊತ್ತಿ, ತನ್ನಾ ಯೆಗ್ದಾಚ್ ಹೊಳ್ವತಲ್ಲೊ ಎಕ್ ಉಜ್ವೊಡ್ ಮಾಜ್ಯಾ ಬೊತ್ಯಾನ್ ಹೊಳ್ವಲ್ಲೊ. ಅಧ್ಯಾಯವನ್ನು ನೋಡಿ |