Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:24 - ಕನ್ನಡ ಸಮಕಾಲಿಕ ಅನುವಾದ

24 ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ಅವನು ಸುರಕ್ಷಿತವಾಗಿ ರಾಜ್ಯಪಾಲ ಫೇಲಿಕ್ಸನ ಬಳಿಗೆ ತಲುಪುವಂತೆ ವ್ಯವಸ್ಥೆಮಾಡಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮತ್ತು ಕುದುರೆಗಳನ್ನು ಸಿದ್ಧಮಾಡಿ, ಪೌಲನನ್ನು ಹತ್ತಿಸಿ, ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕುದುರೆಗಳನ್ನು ಸಜ್ಜುಗೊಳಿಸಿ ಪೌಲನನ್ನು ಏರಿಸಿ, ರಾಜ್ಯಪಾಲ ಫೆಲಿಕ್ಸರ ಬಳಿಗೆ ಭದ್ರವಾಗಿ ಕರೆದುಕೊಂಡು ಹೋಗಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮತ್ತು ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಪೌಲನ ಪ್ರಯಾಣಕ್ಕಾಗಿ ಕೆಲವು ಕುದುರೆಗಳನ್ನು ತೆಗೆದುಕೊ. ರಾಜ್ಯಪಾಲನಾದ ಫೇಲಿಕ್ಸನ ಬಳಿಗೆ ಅವನನ್ನು ಸುರಕ್ಷಿತವಾಗಿ ಕೊಂಡೊಯ್ಯಲೇಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 “ರಾಜ್ಯ್ ಪಾಲ್ ಫೆಲಿಕ್ಸಾಚ್ಯಾ ಜಗ್ಗೊಳ್ ಪಾವ್ಲುಕ್ ಕಾಯ್ ತರಾಸ್ ನಸ್ತಾನಾ ಬಲ್ವುನ್ ನೆವ್ಕ್ ಪಾಜೆ”, ತಸೆ ಹೊವ್ನ್ ತೆಚ್ಯಾ ಪ್ರಯಾನಾಕ್ ಉಲ್ಲೆ ಘೊಡೆ ತಯಾರ್ ಕರುನ್ ಘೆ, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:24
14 ತಿಳಿವುಗಳ ಹೋಲಿಕೆ  

ಅವರು ಅಲ್ಲಿ ಅನೇಕ ದಿನಗಳನ್ನು ಕಳೆಯುತ್ತಿದ್ದಾಗ, ಫೆಸ್ತನು ಪೌಲನ ವಿಷಯವನ್ನು ರಾಜನೊಂದಿಗೆ ಚರ್ಚಿಸಿ, “ಕೈದಿಯಾಗಿ ಫೇಲಿಕ್ಸನು ಬಿಟ್ಟುಹೋದ ಒಬ್ಬ ಮನುಷ್ಯನಿದ್ದಾನೆ.


ರಾಜ್ಯಪಾಲನು ಪೌಲನಿಗೆ ಮಾತನಾಡಬೇಕೆಂದು ಸನ್ನೆಮಾಡಿದಾಗ, ಪೌಲನು ಕೊಟ್ಟ ಉತ್ತರವಿದು: “ಅನೇಕ ವರ್ಷಗಳಿಂದ ತಾವು ಈ ದೇಶದ ಮೇಲೆ ನ್ಯಾಯಾಧೀಶರಾಗಿರುವುದನ್ನು ನಾನು ಬಲ್ಲೆ. ಆದ್ದರಿಂದ ನಾನು ಸಂತೋಷದಿಂದ ನನ್ನ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.


ಮಹಾಪ್ರಭುಗಳಾದ ರಾಜ್ಯಪಾಲ ಫೇಲಿಕ್ಸ್, ಅವರಿಗೆ ಕ್ಲೌದ್ಯ ಲೂಸ್ಯನು, ಮಾಡುವ ವಂದನೆಗಳು.


ಅವರು ಕೈಸರೈಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನಿಗೆ ಒಪ್ಪಿಸಿದರು.


ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು, ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ವಾಹಕಪಶುವಿನ ಮೇಲೆ ಕುಳ್ಳಿರಿಸಿ, ವಸತಿಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.


ಕೈಸರ್ ತಿಬೇರಿಯನ ಆಳ್ವಿಕೆಯ ಕಾಲದ ಹದಿನೈದನೆಯ ವರ್ಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಚತುರಾಧಿಪತಿಯೂ ಅವನ ಸಹೋದರ ಫಿಲಿಪ್ಪನು ಇತುರಾಯ ಮತ್ತು ತ್ರಕೋನಿತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾಧಿಪತಿಯೂ ಆಗಿದ್ದಾಗ,


ಅವರು ಯೇಸುವನ್ನು ಕಟ್ಟಿ, ಕರೆದುಕೊಂಡು ಹೋಗಿ ರಾಜ್ಯಪಾಲ ಪಿಲಾತನಿಗೆ ಒಪ್ಪಿಸಿದರು.


ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಇದನ್ನು ಮಾಡಲು ನೇಮಿಸಿದ ದಿನವು, ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನವಾಗಿತ್ತು.


ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟಿದ್ದನ್ನು ಯಾರಿಗೂ ತಿಳಿಸಲಿಲ್ಲ. ನಾನು ಸವಾರಿಮಾಡುತ್ತಿದ್ದ ವಾಹನ ಪಶುವಿನ ಹೊರತು ಬೇರೆ ಪಶು ನನ್ನೊಂದಿಗಿರಲಿಲ್ಲ.


ಅವರಿಗೆ ಒಂದು ಪತ್ರವನ್ನು ಹೀಗೆ ಬರೆದುಕೊಟ್ಟನು:


ಐದು ದಿನಗಳ ನಂತರ ಮಹಾಯಾಜಕ ಅನನೀಯನು ಕೆಲವು ಹಿರಿಯರೊಂದಿಗೆ ಕೈಸರೈಯಕ್ಕೆ ಬಂದನು. ತನ್ನೊಂದಿಗೆ ಟೆರ್ಟುಲಸ್ ಎಂಬ ವಕೀಲನನ್ನು ಕರೆದುಕೊಂಡು ಬಂದು, ರಾಜ್ಯಪಾಲನಿಗೆ ಪೌಲನ ವಿರೋಧವಾಗಿ ದೂರುಗಳನ್ನಿಟ್ಟರು.


ಎಲ್ಲಾ ಕಡೆಗಳಲ್ಲಿಯೂ ಎಲ್ಲಾ ವಿಧದಲ್ಲಿಯೂ ಬಹು ಕೃತಜ್ಞತೆಯಿಂದ ಇದನ್ನು ಸ್ವಾಗತಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು