Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:5 - ಕನ್ನಡ ಸಮಕಾಲಿಕ ಅನುವಾದ

5 “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿಯಲಿಲ್ಲ. ಏಕೆಂದರೆ, ‘ನಿನ್ನ ಜನರ ಅಧಿಪತಿಯ ಕುರಿತಾಗಿ ಕೆಟ್ಟದ್ದನ್ನು ಮಾತನಾಡಬಾರದು’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದು ಪೌಲನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪ್ರತ್ಯುತ್ತರವಾಗಿ ಪೌಲನು, “ಸಹೋದರರೇ, ಇವರು ಪ್ರಧಾನ ಯಾಜಕರೆಂದು ನನಗೆ ತಿಳಿಯದೆ ಹೋಯಿತು. ‘ನಿಮ್ಮ ಪ್ರಜಾಪಾಲನನ್ನು ದೂಷಿಸಬೇಡ’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ ಅಲ್ಲವೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಪೌಲನು - ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿಯಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪೌಲನು, “ಸಹೋದರರೇ, ಈ ಮನುಷ್ಯನು ಪ್ರಧಾನಯಾಜಕನೆಂದು ನನಗೆ ಗೊತ್ತಿರಲ್ಲಿಲ್ಲ. ‘ನಿಮ್ಮ ಜನನಾಯಕರ ಬಗ್ಗೆ ಕೆಟ್ಟಮಾತುಗಳುನ್ನು ಆಡಬಾರದು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಪಾವ್ಲು ತೆಂಕಾ, ಭಾವಾನು ಹೊ ಮಾನುಸ್ ಮೊಟೊ ಯಾಜಕ್ ಮನ್ತಲೆ ಮಾಕಾ ಗೊತ್ತ್ ನತ್ತೆ , ತುಮ್ಚ್ಯಾ ಲೊಕಾಂಚ್ಯಾ ಅದಿಕಾರ್‍ಯಾಚ್ಯಾ ವಿರೊದ್ ವಾಯ್ಟ್ ಬೊಲು ನ್ಹಯ್ ಮನುನ್ ಮೊಯ್ಜೆಚ್ಯಾ ಖಾಯ್ಲ್ಯಾಂಚ್ಯಾ ಪುಸ್ತಕಾತ್ ಲಿವಲ್ಲೆ ಹಾಯ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:5
6 ತಿಳಿವುಗಳ ಹೋಲಿಕೆ  

“ದೇವರನ್ನು ದೂಷಿಸಬೇಡ, ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.


ನಿನ್ನ ಆಲೋಚನೆಯಲ್ಲಿಯೂ ಅರಸನನ್ನು ನಿಂದಿಸಬೇಡ. ನೀನು ಮಲಗುವ ಕೋಣೆಯಲ್ಲಿ ಐಶ್ವರ್ಯವಂತರನ್ನು ಶಪಿಸಬೇಡ. ಏಕೆಂದರೆ ಆಕಾಶದ ಪಕ್ಷಿಗಳು ನಿನ್ನ ಮಾತನ್ನು ತೆಗೆದುಕೊಂಡು ಹೋಗಬಹುದು. ಹಾರುವ ಪಕ್ಷಿ ನಿನ್ನ ಸುದ್ದಿಯನ್ನು ತಿಳಿಸಬಹುದು.


ಆದರೆ ಮುಖ್ಯವಾಗಿ ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವರು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ. ದುರಹಂಕಾರದಿಂದ ಸ್ವರ್ಗೀಯ ಜೀವಿಗಳನ್ನು ದೂಷಿಸುತ್ತಾರೆ.


“ಅನೇಕ ವರ್ಷಗಳ ನಂತರ ದಾನಧರ್ಮಗಳನ್ನೂ ಕಾಣಿಕೆಗಳನ್ನೂ ನನ್ನ ಸ್ವದೇಶದವರಿಗೆ ಕೊಡಲು ಬಂದೆನು.


ಪೌಲನ ಹತ್ತಿರ ನಿಂತಿದ್ದವರು, “ದೇವರು ನೇಮಿಸಿದ ಮಹಾಯಾಜಕನನ್ನು ನಿಂದಿಸುತ್ತಿದ್ದೀಯಾ?” ಎಂದು ಹೇಳಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು